Mangaluru: ಹಣಕ್ಕಾಗಿ ವ್ಯಕ್ತಿಯ ಅಪಹರಣ… ಕಾರಿನಲ್ಲಿ ಬಂದು ಕೃತ್ಯ
Team Udayavani, Aug 8, 2024, 4:36 PM IST
ಮಂಗಳೂರು: ಕೇರಳ ಮೂಲದ ವ್ಯಕ್ತಿಯೋರ್ವನನ್ನು ಮಂಗಳೂರು ನಗರದಲ್ಲಿ ಅಪಹರಿಸಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.
ಶರತ್ ಬಾಬು ಅಪಹರಣಕ್ಕೊಳಗಾದವರು. ಇವರು ನರ್ಸಿಂಗ್ ಕಾಲೇಜುಗಳಲ್ಲಿ ಸೀಟು ತೆಗೆಸಿಕೊಡುವ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದ್ದು. ಅದರಂತೆ ಕೇರಳದ ಓರ್ವರಿಗೆ ಬೆಂಗಳೂರಿನ ಕಾಲೇಜಿನಲ್ಲಿ ಸೀಟು ಕೊಡಿಸಲು 9 ಲ.ರೂ ಪಡೆದುಕೊಂಡಿದ್ದರು. ಅದರಲ್ಲಿ ಕಾಲೇಜಿಗೆ ಎರಡು ಲ.ರೂ ನೀಡಿ ಉಳಿದ ಹಣವನ್ನು ತನ್ನಲ್ಲೆ ಇಟ್ಟುಕೊಂಡಿದ್ದರು. ಇದೇ ಕಾರಣಕ್ಕೆ ಹಣ ಕೊಟ್ಟವರು ಹಲವು ಬಾರಿ ಬೆದರಿಸಿದ್ದರು. ಅವರೇ ಅಪಹರಣ ನಡೆಸಿದ್ದಾರೆಂದು ದೂರಲಾಗಿದೆ.
ಕಳೆದ ಮಂಗಳವಾರ (ಆಗಸ್ಟ್ 6) ಸಂಜೆ ಶರತ್ ಬಾಬು ನಗರದ ಪಿವಿ ಎಸ್ ಬಳಿ ಸ್ನೇಹಿತನ ಜತೆ ಇದ್ದಾಗ ಕಾರಿನಲ್ಲಿ ಬಂದಿದ್ದ ಇಬ್ಬರು ಬಲವಂತವಾಗಿ ಕರೆದೊಯ್ದಿದ್ದಾರೆ ಎಂದು ಹೇಳಲಾಗಿದ್ದು.
ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Dandeli: ಗಾಂಧಿನಗರದಲ್ಲಿ ಕುಸಿದ ಕಿರು ಸೇತುವೆ : ಹೂತು ಹೋದ ಟಿಪ್ಪರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.