Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
Team Udayavani, Nov 29, 2024, 7:15 AM IST
ಮಂಗಳೂರು: ಕಾನೂನು ಬಾಹಿರವಾಗಿ ಮದ್ಯ ಸಾಗಾಟ, ಮಾರಾಟ ಮತ್ತು ದಾಸ್ತಾನು ಇರಿಸಿದ್ದ ಪ್ರಕರಣಕ್ಕೆ ಸಂಬಂಧಿ ಸಿದಂತೆ ಕೋಡಿಕಲ್ ನಿವಾಸಿ ರಿತೇಶ್ ನಿರಪರಾಧಿ ಎಂದು 6ನೇ ಜೆ.ಎಂ.ಎಫ್.ಸಿ. ನ್ಯಾಯಾಲಯ ಆದೇಶಿಸಿದೆ.
ಕೊರೊನಾ ಕಾಲದಲ್ಲಿ ಕೋಡಿಕಲ್ ಬಳಿ ದ್ವಿಚಕ್ರ ವಾಹನದಲ್ಲಿ ಸಣ್ಣ ಸ್ಯಾಚೆಟ್ಗಳಲ್ಲಿ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ಆರೋಪಿ ಮದ್ಯದ ಸ್ಯಾಚೆಟ್ಗಳನ್ನು ದ್ವಿಚಕ್ರ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ. ಇದನ್ನು ವಶಪಡಿಸಿಕೊಂಡಿರುವ ಅಬಕಾರಿ ಇಲಾಖೆಯ ಅ ಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ನಿರೀಕ್ಷಣ ಜಾಮೀನು ಪಡೆದು ಅನಂತರ ನ್ಯಾಯಾಲಯಕ್ಕೆ ಹಾಜರಾಗಿದ್ದ.
ಸಾಕ್ಷಿ ಹೇಳಿಕೆಗಳನ್ನು ಗಮನಿಸಿ, ವಾದ ಪ್ರತಿವಾದವನ್ನು ಆಲಿಸಿದ ಜೆ.ಎಂ.ಎಫ್.ಸಿ. ನ್ಯಾಯಾಲಯ ಆರೋಪಿಯನ್ನು ನಿರಪರಾಧಿ ಎಂದು ಬಿಡುಗಡೆಗೊಳಿಸಿದೆ. ಆರೋಪಿ ಪರ ನ್ಯಾಯವಾದಿ ಶಶಿರಾಜ್ ರಾವ್ ಕಾವೂರು ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.