Mangaluru; ರೌಡಿಗಳ ಪರೇಡ್ : 262 ಮಂದಿಗೆ ನಗರ ಪೊಲೀಸ್ ಆಯುಕ್ತರ ವಾರ್ನಿಂಗ್
Team Udayavani, Oct 12, 2023, 6:43 PM IST
ಮಂಗಳೂರು: ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಗುರುವಾರ ಮಂಗಳೂರು ನಗರದ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯ ಸಕ್ರೀಯ ರೌಡಿಗಳ ಪರೇಡ್ ನಡೆಸಲಾಯಿತು.
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರ ನೇತೃತ್ವದಲ್ಲಿ ನಡೆದ ಪರೇಡ್ನಲ್ಲಿ 262 ಸಕ್ರೀಯ ರೌಡಿಗಳನ್ನು ಸಂಬಂಧಪಟ್ಟ ಎಸಿಪಿರವರು ಪೊಲೀಸ್ ಆಯುಕ್ತರ ಮುಂದೆ ಹಾಜರುಪಡಿಸಿದರು.
ಎಲ್ಲಾ ರೌಡಿಗಳಿಗೆ ತಮ್ಮ ಅಪರಾಧಿಕ ಚಟುವಟಿಕೆಗಳನ್ನು ಬಿಟ್ಟು ಕಾನೂನನ್ನು ಗೌರವಿಸುವ ಪ್ರಜೆಗಳಾಗಬೇಕೆಂದು ಪೊಲೀಸ್ ಆಯುಕ್ತರು ಉಪದೇಶಿಸಿ, ಇನ್ನು ಮುಂದೆ ಯಾವುದಾದರೂ ಅಪಾರಾಧಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಅವರ ಮೇಲೆ ಕಾನೂನು ರೀತಿಯ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.
ಪರೇಡ್ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಸಿದ್ದಾರ್ಥ ಗೋಯಲ್ (ಐಪಿ.ಎಸ್), ಅಪರಾಧ ಮತ್ತು ಸಂಚಾರ ಡಿಸಿಪಿ ಬಿಪಿ ದಿನೇಶ್ ಕುಮಾರ್, ನಗರದ ಎಲ್ಲಾ ಎಸಿಪಿಗಳು ಹಾಗೂ ಸಂಬಂಧಪಟ್ಟ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.