Mangaluru: ಪೋಕ್ಸೋ ಪ್ರಕರಣ: ಆರೋಪಿ ಖುಲಾಸೆ
Team Udayavani, Oct 8, 2024, 7:15 AM IST
ಮಂಗಳೂರು: ಬೆಳ್ತಂಗಡಿಯ ಮಡಂತ್ಯಾರು ಬಳಿಯ ಮಾರಿಗುಡಿ ಎಂಬಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಎರಡನೇ ವಿಶೇಷ ಪೋಕ್ಸೋ ಹೆಚ್ಚುವರಿ ನ್ಯಾಯಾಲಯ ದೋಷಮುಕ್ತಗೊಳಿಸಿ ತೀರ್ಪಿತ್ತಿದೆ.
2023ರ ಜೂನ್ 23ರಂದು ಬಾಲಕಿಯನ್ನು ಆರೋಪಿ ಶಾಶ್ವತ್ ಹುಟ್ಟುಹಬ್ಬದ ನೆಪದಲ್ಲಿ ಬೆಳ್ತಂಗಡಿಯ ಮಡಂತ್ಯಾರಿನಲ್ಲಿರುವ ತನ್ನ ಸಹೋದರನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬೆಳ್ತಂಗಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ನಾಗೇಶ್ ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯ ಒಟ್ಟು 12 ಸಾಕ್ಷಿಗಳನ್ನು ವಿಚಾರಣೆ ಮಾಡಿತ್ತು. ಈ ಪ್ರಕರಣದಲ್ಲಿ 24 ದಾಖಲೆಗಳನ್ನು ಹಾಜರುಪಡಿಸಲಾಗಿತ್ತು. ನ್ಯಾಯಾಧೀಶ ಮನು ಕೆ.ಎಸ್. ಅವರು ವಿಚಾರಣೆ ನಡೆಸಿ ಈ ತೀರ್ಪು ನೀಡಿದ್ದಾರೆ.
ಆರೋಪಿ ಪರ ಆದಾಯ ತೆರಿಗೆಯ ವಿಶೇಷ ಅಭಿಯೋಜಕರೂ ಆಗಿರುವ ಹಿರಿಯ ನ್ಯಾಯವಾದಿ ಹರ್ಷಕುಮಾರ್ ಅವರು ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.