Mangaluru: ತೀವ್ರ ನಿಗಾ ಘಟಕಕ್ಕೆ ಪ್ರಧಾನಿಯಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಶಿಲಾನ್ಯಾಸ
Team Udayavani, Oct 29, 2024, 7:35 PM IST
ಮಂಗಳೂರು: ಪಿಎಂ-ಎಬಿಎಚ್ಐಎಂ ( ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇನ್ಫ್ರಾಸ್ಟ್ರಕ್ಚರ್ ಮಿಷನ್) ಕಾರ್ಯಕ್ರಮದಡಿ ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಾಣ ಮಾಡಲು ಉದ್ದೇಶಿಸಿರುವ 50 ಹಾಸಿಗೆಗಳ ತೀವ್ರ ನಿಗಾ ಘಟಕಕ್ಕೆ ಅ.29ರ ಮಂಗಳವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ಶಿಲಾನ್ಯಾಸ ನೆರವೇರಿಸಿದರು.
ಹೊಸದಿಲ್ಲಿಯಲ್ಲಿ ಮಂಗಳವಾರ ಜರುಗಿದ ಆಯುರ್ವೇದ ದಿನ ಮತ್ತು ಧನ್ವಂತರಿ ಜಯಂತಿ ಕಾರ್ಯಕ್ರಮದಲ್ಲಿ 23.75 ಕೋ.ರೂ. ವೆಚ್ಚದ ವೆನ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕ ಸಹಿತ ದೇಶದ ವಿವಿಧೆಡೆಯ 12,850 ಕೋ.ರೂ ವೆಚ್ಚದ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸವನ್ನು ನರೇಂದ್ರ ಮೋದಿ ನೆರವೇರಿಸಿದರು.
ಮಂಗಳೂರಿನ ಅತ್ತಾವರದ ಐಎಂಎ ಭವನದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟ ಫಲಕ ಅನಾವರಣಗೊಳಿಸಿದರು. ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜಾ, ಕೆ.ಪ್ರತಾಪ ಸಿಂಹ ನಾಯಕ್, ಮೇಯರ್ ಮನೋಜ್ ಕುಮಾರ್, ಉಪಮೇಯರ್ ಭಾನುಮತಿ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿ.ಪಂ. ಸಿಇಒ ಡಾ| ಆನಂದ್ ಕೆ. ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.