ಡಿವೈಡರ್ಗೆ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಗಂಭೀರ
Team Udayavani, Feb 28, 2023, 5:30 AM IST
ಮಂಗಳೂರು: ರಾ.ಹೆ. 75ರ ಸಹ್ಯಾದ್ರಿ ಕಾಲೇಜು ಬಳಿ ಡಿವೈಡರ್ಗೆ ಸ್ಕೂಟರ್ ಢಿಕ್ಕಿಯಾಗಿ ಸವಾರ ಗಿರೀಶ್ (29) ಎಂಬುವರು ಗಂಭೀರ ಗಾಯಗೊಂಡಿದ್ದಾರೆ.
ಶನಿವಾರ ರಾತ್ರಿ 11.45ರ ವೇಳೆಗೆ ಘಟನೆ ಸಂಭವಿಸಿದ್ದು, ತಮ್ಮ ಮನೆಯಾದ ಮೇಗಿನಕರೆಯಲ್ಲಿ ದೈವದ ಕಾರ್ಯಕ್ರಮ ಮುಗಿಸಿ, ತಾನು ಕೆಲಸ ಮಾಡುತ್ತಿದ್ದ ನಾಗುರಿಯ ಹೊಟೇಲ್ಗೆ ಮರಳುತ್ತಿದ್ದಾಗ ಅಪಘಾತ ನಡೆದಿದೆ. ಪರಿಣಾಮ ಗಿರೀಶ್ ರವರು ಸ್ಕೂಟರ್ ಸಮೇತ ಡಾಮರು ರಸ್ತೆಗೆ ಬಿದ್ದು ಅವರ ತಲೆಗೆ ಗುದ್ದಿದ ರೀತಿಯ ತೀವ್ರಗಾಯವಾಗಿದ್ದು, ಮುಖ ಹಾಗೂ ಕೈಕಾಲುಗಳಿಗೆ ತರಚಿದ ಗಾಯವಾಗಿದೆ. ಪ್ರಜ್ಞಾಹೀನರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಒಳರೋಗಿಯಾಗಿ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.