Mangaluru: ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ರಸ್ತೆತಡೆ
Team Udayavani, Jun 1, 2024, 10:32 AM IST
ಮಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಹಾಗೂ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಯುವಜನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಶನಿವಾರ ನಗರದ ಪಿವಿಎಸ್ ವೃತ್ತದ ಬಳಿ ರಸ್ತೆ ತಡೆ ನಡೆಯಿತು.
ಮುಖ್ಯಮಂತ್ರಿಗಳು ಕೂಡಲೇ ಸಚಿವರ ರಾಜೀನಾಮೆ ಪಡೆದು, ಸಂಪುಟದಿಂದ ಸಚಿವರನ್ನು ವಜಾಗೊಳಿಸಬೇಕು ಎಂದು ಯುವ ಮೋರ್ಚಾ ಕಾರ್ಯಕರ್ತರು ಆಗ್ರಹಿಸಿದರು. ಇದೇ ವೇಳೆ ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ರಸ್ತೆ ತಡೆಯಿಂದಾಗಿ ಪಿವಿಎಸ್ ವೃತ್ತದ ಬಳಿ ಕೆಲ ಹೊತ್ತು ಸಂಚಾರ ದಟ್ಟನೆ ಉಂಟಾಯಿತು. ಸಂಚಾರ ವಿಭಾಗದ ಪೊಲೀಸರು ಪರ್ಯಾಯ ರಸ್ತೆಗಳ ಮೂಲಕ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.