ಮಂಗಳೂರು : ಎಬಿವಿಪಿ ಕಾನೂನು ವಿದ್ಯಾರ್ಥಿಗಳ ರಾಜ್ಯ ಸಮ್ಮೇಳನ

ಕಾನೂನು ವಿದ್ಯಾರ್ಥಿ ರಾಷ್ಟ್ರದ ಸಮಸ್ಯೆಗಳಿಗೆ ಮಿಡಿಯಬೇಕು : ನಿವೃತ್ತ ನ್ಯಾಯಮೂರ್ತಿ ಸುಭಾಷ್ ಆಡಿ

Team Udayavani, Apr 15, 2022, 8:33 PM IST

1-yy

ಮಂಗಳೂರು: ಭಾರತದ ಸ್ವಾತಂತ್ರ್ಯ ಹೋರಾಟಕ್ಕಾಗಿ ಈ ನಾಡಿನ ವಿಶ್ವದರ್ಜೆಯ ವಕೀಲರು ತಮ್ಮ ಸರ್ವಸ್ವವನ್ನು ಮುಡಿಪಿಟ್ಟು ದುಡಿದಿದ್ದಾರೆ. ಅವರೆಲ್ಲರ ಪರಿಶ್ರಮದ ಮೂಲಕ ಸುಂದರವಾದ ಸಂವಿಧಾನ ಮತ್ತು ಅತ್ಯಂತ ಬೃಹತ್ ಪ್ರಜಾಪ್ರಭುತ್ವದ ರಾಷ್ಟ್ರನಿರ್ಮಣ ಸಾಧ್ಯವಾಯಿತು. ಪ್ರಸ್ತುತ ಕಾನೂನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಹಿರಿಯರ ಆದರ್ಶಗಳನ್ನು ಪಾಲಿಸುತ್ತಾ ಇಂದಿನ ಜ್ವಲಂತ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಆಡಿ ಹೇಳಿದರು.

ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಯೋಜಿಸಿದ ಎರಡು ದಿನದ ಕಾನೂನು ವಿದ್ಯಾರ್ಥಿಗಳ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಶುಕ್ರವಾರ ಮಾತನಾಡಿದರು.

ಹಿಂದಿನ ಮತ್ತು ಇಂದಿನ ಕಾನೂನು ಅಧ್ಯಯನ ಶೈಲಿಯಲ್ಲಿ ಭಿನ್ನತೆ ಇದೆ‌. ಪಾರಂಪರಿಕ ಪಾಠಪ್ರವಚನವನ್ನು ಹೇಳಿಕೊಡುವುದರ ಜೊತೆಗೆ ಪ್ರಚಲಿತ ವಿದ್ಯಮಾನಗಳ ಅವಲೋಕನಕ್ಕೆ ಕಾನೂನು ವಿದ್ಯಾಲಯಗಳು ಮಹತ್ವ ಕೊಡಬೇಕು. ವಿದ್ಯಾರ್ಥಿಗಳು ತಮ್ಮ ವ್ಯಾಸಂಗವನ್ನು ಪೂರ್ಣಗೊಳಿಸುವ ಹೊತ್ತಿಗೆ ಮೌಲ್ಯಯುತ ವೃತ್ತಿಪರರಾಗಿ ನಿರ್ಮಾಣಗೊಳ್ಳುವಂತಹ ಪಠ್ಯೇತರ ಚಟುವಟಿಕೆಗಳನ್ನು ಜೋಡಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಕಾನೂನು ವಿದ್ಯಾರ್ಥಿಗಳ ವಿಮರ್ಶಾತ್ಮಕ ಗುಣ ಸೀಮಿತವಾಗಿರಬಾರದು. ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ಅರಿತು ಕಾರ್ಯಪ್ರವೃತ್ತರಾಗಬೇಕು. ತಂತ್ರಜ್ಞಾನದ ಯುಗದಲ್ಲಿ ಮಾಹಿತಿಗೆ ಕೊರತೆಯಿಲ್ಲ. ಅವುಗಳನ್ನು ಪಡೆಯುವ ಕೌಶಲ್ಯ ವಿದ್ಯಾರ್ಥಿಗಳಲ್ಲಿರಬೇಕು ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿ ಎಬಿವಿಪಿ ರಾಷ್ಟ್ರೀಯ ಉಪಾಧ್ಯಕ್ಷ ಅಲ್ಲಮಪ್ರಭು ಗುಡ್ಡ ಮಾತನಾಡಿ, ಸ್ವಾತಂತ್ರ್ಯ ಪೂರ್ವದಲ್ಲಿ ರಾಷ್ಟ್ರಕ್ಕೆ ನಾಯಕತ್ವ ನೀಡಿದ್ದು ಕಾನೂನು ಕ್ಷೇತ್ರ. ಪ್ರಸ್ತುತ ರಾಷ್ಟ್ರಕ್ಕೆ ನಾಯಕತ್ವ ವಹಿಸುವವರನ್ನು ನಿರ್ಮಿಸುವ ಜವಾಬ್ದಾರಿ ಈ ಕ್ಷೇತ್ರಕ್ಕಿದೆ. ವಿಷಯದಲ್ಲಿ ಪ್ರಾವೀಣ್ಯತೆ ಮತ್ತು ಭಾಷಾ ಪ್ರಬುದ್ಧತೆ ಹೊಂದಿರುವ ಕಾನೂನು ವಿದ್ಯಾರ್ಥಿಗಳ ಅವಶ್ಯಕತೆ ಇದೆ ಎಂದು ನುಡಿದರು.

ಕಾರ್ಯಕ್ರಮದ ಇನ್ನೋರ್ವ ಮುಖ್ಯ ಅತಿಥಿ ವಿವೇಕಾನಂದ ಕಾನೂನು ವಿದ್ಯಾಲಯದ ನಿರ್ದೇಶಕ ಡಾ.ಬಿ.ಕೆ.ರವೀಂದ್ರ ಮಾತನಾಡಿ, ಕಾನೂನು ಅಧ್ಯಯನ ಬಹುಶಿಸ್ತು ಅಭ್ಯಾಸದ ಕ್ಷೇತ್ರ. ಸಮಾಜ ಕಟ್ಟುವಲ್ಲಿ ಕಾನೂನು ಅಧ್ಯಯನದ ಪಾತ್ರ ಮಹತ್ವವಾದದ್ದು. ಸಾಮಾಜಿಕ ದೃಷ್ಟಿಯುಳ್ಳ ವಕೀಲರನ್ನು ಸಮಾಜಕ್ಕೆ ಕೊಡುಗೆ ನೀಡುವ ಜವಾಬ್ದಾರಿ ಕಾನೂನು ವಿದ್ಯಾಲಯಗಳಿಗಿವೆ. ಪ್ರಸ್ತುತದ ಹಲವು ಸವಾಲುಗಳನ್ನು ಎದುರಿಸಿ ಸಮಾಜಿಕ ಬದಲಾವಣೆಗೆ ನಾಂದಿ ಹಾಡುವ ಕಾರ್ಯ ಕಾನೂನು ಅಧ್ಯಯನದಿಂದ ಆಗಬೇಕಿದೆ ಎಂದರು.

ಇದೇ ಸಂದರ್ಭದಲ್ಲಿ ‘ಸಂವಿಧಾನ ಶಿಲ್ಪಿ, ಜ್ಞಾನಯೋಗಿ ಡಾ.ಬಿ.ಆರ್. ಅಂಬೇಡ್ಕರ್’ ಎಂಬ ಮರುಮುದ್ರಣಗೊಂಡ ಪುಸ್ತಕ ಬಿಡುಗಡೆ ಮತ್ತು ಎಬಿವಿಪಿ ಮೂರನೇ ಆವೃತ್ತಿಯ ವಿದ್ಯಾರ್ಥಿ ಸಂಸ್ಕೃತಿ ಚಳುವಳಿಯ ಪೋಸ್ಟರ್ ಅನಾವರಣಗೊಂಡಿತು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಕಾರ್ಯ ಸಮಿತಿಯ ಸದಸ್ಯೆ ಕು. ಪ್ರೇಮಾಶ್ರೀ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸಮೀಕ್ಷಾ ಪ್ರಾರ್ಥಿಸಿದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ರಾಜ್ಯಾಧ್ಯಾಕ್ಷ ಡಾ.ರೋಹಿಣಾಕ್ಷ ಶಿರ್ಲಾಲು ಪ್ರಸ್ಥಾವಿಸಿ, ಕಾರ್ಯದರ್ಶಿ ಮಣಿಕಂಠ ಕಳಸ ಸ್ವಾಗತಿಸಿದರು. ವಿದ್ಯಾರ್ಥಿ ಪ್ರವೀಣ್ ಶಿವಮೊಗ್ಗ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

15

Mangaluru: ಚಿನ್ನದ ಬಿಸ್ಕೆಟ್‌ ಇದೆ ಎಂದು ನಂಬಿಸಿ 4 ಲಕ್ಷ ರೂ. ವಂಚನೆ

ssa

Mangaluru: ಮಾದಕ ವಸ್ತು ಸೇವನೆ; ಯುವಕ ವಶಕ್ಕೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

3-kananda-1

Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.