Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫ‌ಲ

ತ್ರಿಚಕ್ರ ವಾಹನಗಳ ಮೂಲಕ ತ್ಯಾಜ್ಯ ಸಂಗ್ರಹ; ಭಾಗಶಃ ಕಾರ್ಯಾಚರಣೆ

Team Udayavani, Jan 3, 2025, 1:06 PM IST

6

ಮಹಾನಗರ:ಮಂಗಳೂರು ಪಾಲಿಕೆ ವ್ಯಾಪ್ತಿಯ ಗಲ್ಲಿಗಳಲ್ಲಿ ತೆರಳಿ ತ್ಯಾಜ್ಯ ಸಂಗ್ರಹಿಸಲು ಆರಂಭಿಸಿರುವ ತ್ರಿಚಕ್ರ ವಾಹನಗಳು ಭಾಗಶಃ ಕಾರ್ಯಾಚರಣೆ ನಡೆಸುತ್ತಿದೆ. ಕೆಲವೊಂದು ವಾರ್ಡ್‌ಗಳಿಗೆ ವಾಹನಗಳು ಮಂಜೂರಾದರೂ ಕಾರ್ಯಾಚರಿಸುತ್ತಿಲ್ಲ ಎನ್ನುವ ಆರೋಪ ಕೇಳಿಬಂದಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಅನೇಕ ಗಲ್ಲಿ ಪ್ರದೇಶಗಳಿದ್ದು, ಅವುಗಳಿಗೆ ತ್ಯಾಜ್ಯ ಸಾಗಾಟದ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿತ್ತು. ಇದೇ ಕಾರಣದಿಂದಾಗಿ ಅಂತಹ ಪ್ರದೇಶಗಳಿಗೆ ತೆರಳಬಲ್ಲ ತ್ರಿಚಕ್ರ ವಾಹನಗಳನ್ನು ಬಳಸಿಕೊಂಡು ತ್ಯಾಜ್ಯ ಸಂಗ್ರಹ ಪ್ರಕ್ರಿಯೆಗೆ ಮುಂದಾಗಲಾಗಿತ್ತು. ಅದರಂತೆ ಪಾಲಿಕೆ 24 ಎಲೆಕ್ಟ್ರಿಕಲ್‌ ತ್ರಿಚಕ್ರ ವಾಹನಗಳನ್ನು ಮಂಗಳೂರಿಗೆ ಮೊದಲ ಬಾರಿ ಪರಿಚಯಿಸಿ 6 ತಿಂಗಳ ಹಿಂದೆ ಕಾರ್ಯಾಚರಣೆ ಆರಂಭಿಸಿತ್ತು. ಇದೀಗ ನಗರದ ಸ್ಟೇಟ್‌ಬ್ಯಾಂಕ್‌, ಹಂಪನಕಟ್ಟೆ, ಪಚ್ಚನಾಡಿ ಸಹಿತ ಇನ್ನೂ ಕೆಲವು ಭಾಗಗಳಲ್ಲಿ ವಾಹನಗಳು ಸಂಚಾರಿಸುತ್ತಿವೆ.

ಫಲಿಸದ ಮಹಿಳಾ ಚಾಲಕಿಯರ ಪ್ರಯೋಗ!
ಪಾಲಿಕೆ ವ್ಯಾಪ್ತಿಯಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಮಹಿಳಾ ಪೌರ ಕಾರ್ಮಿಕರಿದ್ದಾರೆ. ಈ ಕಾರಣದಿಂದ ತ್ರಿಚಕ್ರ ವಾಹನಗಳನ್ನು ಮಹಿಳಾ ಚಾಲಕಿಯರ ಮೂಲಕ ನಿರ್ವಹಿಸುವುದು ಪಾಲಿಕೆ ಯೋಜನೆ ಹಾಕಿಕೊಂಡಿತ್ತು. ಮಹಿಳಾ ಸಿಬಂದಿಯನ್ನು ಈ ರೀತಿ ಬಳಸಿಕೊಳ್ಳುವ ಮೂಲಕ ಪಾಲಿಕೆಗೆ ಎದುರಾಗುವ ಚಾಲಕರ ಹೆಚ್ಚುವರಿ ಹೊರೆಯನ್ನು ಕೂಡ ನಿಭಾಯಿಸುವ ಲೆಕ್ಕಾಚಾರವಿತ್ತು. ಆದರೆ ಇದು ನಿರೀಕ್ಷಿತ ಪ್ರಮಾಣದಲ್ಲಿ ಕೈಹಿಡಿದಿಲ್ಲ. ಹೆಚ್ಚಿನ ಮಹಿಳೆಯರಿಗೆ ವಾಹನ ಓಡಿಸಲು ಸೂಕ್ತ ತರಬೇತಿ ಸಿಗದ ಕಾರಣ ರಸ್ತೆಗೆ ಇಳಿಸಲು ಧೈರ್ಯವಿಲ್ಲ ಎಂಬುವುದು ಮಹಿಳಾ ಪೌರ ಕಾರ್ಮಿಕರ ಅಳಲು.

ಸಿಬಂದಿ ಕೊರತೆ
ತ್ರಿಚಕ್ರ ವಾಹನದ ಮೂಲಕ ಕಸ ಸಂಗ್ರಹಿಸುವ ಸಮಯದಲ್ಲಿ ಮಹಿಳಾ ಚಾಲಕಿಯರನ್ನು ಬಳಸುವ ವೇಳೆ ಹೆಚ್ಚುವರಿ ಸಿಬಂದಿ ಬೇಕಾಗುತ್ತಾರೆ. ಕೆಲವೊಂದು ಸಂದರ್ಭಗಳಲ್ಲಿ ವಿವಿಧ ಕಾರಣಗಳಿಂದಾಗಿ ಸಿಬಂದಿ ಕೊರತೆ ಎದುರಾಗುತ್ತದೆ. ಇದರಿಂದ ಸಮರ್ಪಕವಾಗಿ ಕಾರ್ಯಾಚರಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ಅಧಿಕಾರಿಗಳ ಮಾತು.

ಗಲ್ಲಿ, ಓಣಿಗಳಿಗೂ ತೆರಳುವ ತ್ರಿಚಕ್ರ ವಾಹನ
ಎಲೆಕ್ಟ್ರಿಕ್‌ ವಾಹನವಾಗಿರುವ ಹಿನ್ನೆಲೆ ನಿರ್ವಹಣೆ ಸುಲಭ, ಇಂಧನ ಉಳಿತಾಯ. 250 ಕೆ.ಜಿ. ಸಂಗ್ರಹಣೆ ಸಾಮರ್ಥ್ಯ, ರಸ್ತೆ ಬದಿಯಿಂದಲೂ ತ್ಯಾಜ್ಯ ಸಂಗ್ರಹಕ್ಕೆ ಅವಕಾಶವಿದೆ. ಗಲ್ಲಿ, ಓಣಿಗಳಿಗೆ ತೆರಳಲು ಸಲೀಸು. ಪ್ರಸ್ತುತ ಆಯ್ದ ವಾರ್ಡ್‌ಗಳಿಗೆ ವಾಹನಗಳನ್ನು ನೀಡಲಾಗಿದ್ದು ಕಾರ್ಯಾಚರಣೆ ನಡೆಸುತ್ತಿವೆ. ಇದರಿಂದ ತುಂಬಾ ಅನುಕೂಲವಾಗುತ್ತಿದೆ.
-ಆನಂದ್‌ ಸಿ.ಎಲ್‌. ಪಾಲಿಕೆ ಆಯುಕ್ತರು

ಟಾಪ್ ನ್ಯೂಸ್

11-heart

Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು

10–Cosmetic-surgery

Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ

Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್‌ ಸಿಗೋದು ಕಷ್ಟ – ವರದಿ

Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್‌ ಸಿಗೋದು ಕಷ್ಟ – ವರದಿ

Jammu and Kashmir: Vehicle falls into gorge

Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!

2(1

Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್‌

1(1

Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!

1-moidin

ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್‌ ಬಾವ

train-track

ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್‌ ಬಂದ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

11-heart

Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ

4

Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

3

Kundapura: ಟವರ್‌ನ ಬುಡದಲ್ಲೇ ನೆಟ್‌ವರ್ಕ್‌ ಇಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.