ಮಂಗಳೂರು: ಕಟ್ಟಡ ಕಾಮಗಾರಿ ವೇಳೆ ಭೂಕುಸಿತ, ಇಬ್ಬರು ಸಾವು
Team Udayavani, Feb 28, 2020, 2:17 PM IST
ಮಂಗಳೂರು: ಕಟ್ಟಡ ಕಾಮಗಾರಿ ವೇಳೆ ಕಾರ್ಮಿಕರ ಮೇಲೆ ಮಣ್ಣು ಕುಸಿದು ಇಬ್ಬರು ಸಾವನ್ನಪ್ಪಿದ ಘಟನೆ ನಗರದ ಬಂಟ್ಸ್ ಹಾಸ್ಟೆಲ್ನ ಕರಂಗಲ್ಪಾಡಿ ಜಂಕ್ಷನ್ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಮಣ್ಣಿನಡಿ ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಮೃತಪಟ್ಟವರನ್ನು ಬಾಗಲಕೋಟೆ ಮೂಲದ ಭೀಮೇಶ್ (25ವ) ಮತ್ತು ಪಶ್ಚಿಮ ಬಂಗಾಳ ಮೂಲದ ಮೊಸ್ರಿಗುಲ್ (20ವ) ಎಂದು ಗುರುತಿಸಲಾಗಿದೆ.
ಈಗಾಗಲೇ ನಾಲ್ಕು ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಮಣ್ಣಿನಡಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಭರದಿಂದ ನಡೆಯುತ್ತಿದೆ.
ಪಾಂಡೇಶ್ವರ ಹಾಗೂ ಕದ್ರಿಯ ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.