ಮಾಸ್ಕ್ ಧರಿಸುವ ನಿಯಮ ಪಾಲಿಸಿ: ಡಿಸಿ

ಜಿಲ್ಲಾದ್ಯಂತ ಮಾಸ್ಕ್ ದಿನಾಚರಣೆ, ಜನ ಜಾಗೃತಿ ಅಭಿಯಾನ

Team Udayavani, Jun 19, 2020, 5:22 AM IST

ಮಾಸ್ಕ್ ಧರಿಸುವ ನಿಯಮ ಪಾಲಿಸಿ: ಡಿಸಿ

ಮಹಾನಗರ: ಕೋವಿಡ್-19 ನಿಯಂತ್ರಿಸುವ ಸಲುವಾಗಿ ಎಲ್ಲ ನಾಗರಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮನೆಯಿಂದ ಹೊರಬರುವ ಸಮಯದಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ ಕರೆ ನೀಡಿದ್ದಾರೆ.

ಗುರುವಾರ ರಾಜ್ಯಾದ್ಯಂತ ಮಾಸ್ಕ್ ದಿನಾಚರಣೆ ಕೈಗೊಂಡ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಡಳಿತದ ವತಿಯಿಂದ ಜಾಗೃತಿ ಕಾರ್ಯಕ್ರಮ ನಗರದಲ್ಲಿ ಜರಗಿತು.

ಕೋವಿಡ್-19 ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಸರಕಾರದ ಕಾರ್ಯಗಳ ಜತೆಗೆ ನಾಗರಿ ಕರ ಪಾತ್ರವೂ ಅತ್ಯಂತ ಅಮೂಲ್ಯ. ಅದರಲ್ಲಿಯೂ ಮನೆಯಿಂದ ಹೊರಗೆ ಬರುವಾಗ ಎಲ್ಲ ನಾಗರಿಕರು ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಮೂಲಕ ನಾಗರಿಕರು ತಮ್ಮಿಂದಾಗುವಷ್ಟು ಕೋವಿಡ್-19 ನಿಯಂತ್ರಣ ಕಾರ್ಯದಲ್ಲಿ ಕೈ ಜೋಡಿಸಿ ದಂತಾಗುತ್ತದೆ. ಈ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾಸ್ಕ್ ಡೇ ಆಚರಿಸಲಾಗುತ್ತಿದೆ ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ರಾಮಚಂದ್ರ ಬಾಯರಿ ಮಾತ ನಾಡಿದರು. ಮೇಯರ್‌ ದಿವಾಕರ ಪಾಂಡೇಶ್ವರ, ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಮುಡಾ ಅಧ್ಯಕ್ಷ ರವಿಶಂಕರ ಮಿಜಾರ್‌, ಅಪರ ಜಿಲ್ಲಾಧಿಕಾರಿ ಎಂ.ಜಿ. ರೂಪಾ, ಮಂಗಳೂರು ತಹಶೀಲ್ದಾರ್‌ ಗುರುಪ್ರಸಾದ್‌, ನಿತಿನ್‌ ಕುಮಾರ್‌ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ಕಚೇರಿಯಿಂದ ಹೊರಟ ಜಾಗೃತಿ ಮೆರವಣಿಗೆ ಸ್ಟೇಟ್‌ಬ್ಯಾಂಕ್‌ನ ಹ್ಯಾಮಿಲ್ಟನ್‌ ಸರ್ಕಲ್‌ ಮೂಲಕವಾಗಿ ತಿರುಗಿ ಮತ್ತೆ ಜಿಲ್ಲಾಧಿಕಾರಿ ಕಚೇರಿಗೆ ಬಂದು ಸಮಾಪ್ತಿಯಾಯಿತು.

“ಕೋವಿಡ್-19 ನಿಯಂತ್ರಣಕ್ಕೆ ಮಾಸ್ಕ್ ಧರಿಸಿ, ನಿಯಮ ಪಾಲಿಸಿ’
ಮೂಡುಬಿದಿರೆ: ಕೋವಿಡ್-19 ಸೋಂಕು ನಿಯಂತ್ರಿಸಲು ಎಲ್ಲರೂ ಮಾಸ್ಕ್ ಧರಿಸಬೇಕು; ಅಂತರ ಕಾಪಾಡಿಕೊಳ್ಳುವ ಜತೆಗೆ ಆಗಾಗ ಸ್ಯಾನಿಟೈಸರ್‌ ಅಥವಾ ಸಾಬೂನಿನಿಂದ ಕೈಗಳನ್ನು ತೊಳೆದುಕೊಳ್ಳುವುದು ಅಗತ್ಯ ಎಂದು ತಹಶೀಲ್ದಾರ್‌ ಅನಿತಾಲಕ್ಷ್ಮೀ ಹೇಳಿದರು.

ಮೂಡುಬಿದಿರೆ ತಾಲೂಕು ಆಡಳಿತ ವತಿಯಿಂದ ಪುರಸಭೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಕಾರದಲ್ಲಿ ಗುರುವಾರ ತಾಲೂಕು ಕಚೇರಿ ಆವರಣದಲ್ಲಿ “ಮಾಸ್ಕ್ ದಿನ’ದ ಅಂಗವಾಗಿ ಏರ್ಪಡಿಸಲಾದ “ಜಾಗೃತಿ ಜಾಥಾ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಶಶಿಕಲಾ ಮಾತನಾಡಿ, ಕೋವಿಡ್-19 ಸೋಂಕು ತಡೆಗಟ್ಟಲು ಸರಕಾರದ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವುದರಿಂದ ಎಲ್ಲರಿಗೂ ಒಳಿತಾಗುವುದು ಎಂದರು.

ಮೆರವಣಿಗೆ
ತಾಲೂಕು ಕಚೇರಿ ಆವರಣದಿಂದ ಹೊರಟ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿ ಬಸ್‌ನಿಲ್ದಾಣ ಮೂಲಕ ಪುರಸಭೆ ಎದುರಿನ ರಸ್ತೆಯಲ್ಲಿ ಮುಂದುವರಿದು ತಹಶೀಲ್ದಾರ್‌ ಕಚೇರಿ ಎದುರು ಸಂಪನ್ನಗೊಂಡಿತು.

ಮಾಜಿ ಸಚಿವ ಅಭಯಚಂದ್ರ, ಜಿ.ಪಂ.ಸದಸ್ಯ ಕೆ.ಪಿ. ಸುಚರಿತ ಶೆಟ್ಟಿ, ಜೆಡಿಎಸ್‌ ರಾಜ್ಯ ಕಾರ್ಯದರ್ಶಿ ತೋಡಾರು ದಿವಾಕರ ಶೆಟ್ಟಿ, ಪುರಸಭೆ ಮುಖ್ಯಾಧಿಕಾರಿ ಇಂದೂ ಎಂ., ರೋಟರಿ ಕ್ಲಬ್‌ ಅಧ್ಯಕ್ಷ ಸಿ.ಎಚ್‌. ಅಬ್ದುಲ್‌ ಗಫ‌ೂರ್‌, ರೋಟರಿ ಶಾಲೆ ಸಂಚಾಲಕ ಡಾ| ಯತಿಕುಮಾರ್‌ ಸ್ವಾಮಿ ಗೌಡ, ಜವನೆರ್‌ ಬೆದ್ರದ ಸ್ಥಾಪಕ ಅಮರ್‌ ಕೋಟೆ, ಆಶಾ ಕಾರ್ಯಕರ್ತೆಯರು, ಪುರಸಭೆ ಸದಸ್ಯರು, ಗ್ರಾಮ ಲೆಕ್ಕಿಗರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.