ಕಡ್ಲೆ ಮಾರುವ ಅಜ್ಜಿಯ ಸಹಾಯಕ್ಕೆ ರಸ್ತೆಗಿಳಿದ ಎಂಬಿಎ ವಿದ್ಯಾರ್ಥಿಗಳು!

Team Udayavani, Nov 6, 2022, 12:37 PM IST

5

ಮಹಾನಗರ: ಅಡ್ಯಾರ್‌ನ ಸಹ್ಯಾದ್ರಿ ಎಂಜಿನಿಯರಿಂಗ್‌ ಮತ್ತು ಮ್ಯಾನೇಜ್‌ಮೆಂಟ್‌ ಕಾಲೇಜಿನ ಎಂಬಿಎ ಮಾರ್ಕೆಟಿಂಗ್‌ ಸ್ಪೆಷಲೈಸೇನ್‌ ವಿಭಾಗದ ವಿದ್ಯಾರ್ಥಿಗಳು ಶನಿವಾರ ಬೀದಿಗಿಳಿದಿದ್ದರು!

ಪ್ರತಿಭಟನೆ ಅಥವಾ ಇನ್ಯಾವುದೋ ಉದ್ದೇಶಕ್ಕೆ ಅಲ್ಲ. ಬದಲಾಗಿ ಒಂದು ಒಳ್ಳೆಯ ಉದ್ದೇಶದೊಂದಿಗೆ. ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗಳಿಗೆ ಸಹಾಯ ಮಾಡುವ ಪರಿಕಲ್ಪನೆಯೊಂದಿಗೆ ನಗರ ಕದ್ರಿ ಪಾರ್ಕ್‌ ಗೆ ಆಗಮಿಸಿದ ವಿದ್ಯಾರ್ಥಿಗಳು ಅಲ್ಲಿನ ವ್ಯಾಪಾರಿಗಳೊಂದಿಗೆ ಕೆಲ ಹೊತ್ತು ಬೆರೆತರು.

ಸುಮಾರು 35 ವರ್ಷಗಳಿಂದ ಕಡ್ಲೆ ಮಾರುತ್ತಿರುವ ಅಜ್ಜಿ ಪಾರ್ವತಿಯವರಿಗೆ ಕಡಲೆ ಮಾರುವುದಕ್ಕೆ ಸಹಾಯ ಮಾಡಿದರು. ಅಜ್ಜಿ ಸಿದ್ಧಪಡಿಸಿದ ಕಡ್ಲೆಯ ಪೊಟ್ಟಣವನ್ನು ತೆಗೆದುಕೊಂಡು ಪಾರ್ಕ್‌ ನ ಮೂಲೆ ಮೂಲೆ, ರಸ್ತೆ ಬದಿಯಲ್ಲಿ ಸುತ್ತಿದ ವಿದ್ಯಾರ್ಥಿಗಳು ಸಾರ್ವಜನಿಕರು, ವಾಹನ ಸವಾರರಿಗೆ ಕಡ್ಲೆ ಖರೀದಿಸುವಂತೆ ಪ್ರೇರೇಪಿಸಿದರು. ಪ್ರತಿ ದಿನ 300-400 ರೂ. ವ್ಯಾಪಾರವಾಗುತ್ತಿದ್ದ ಅಜ್ಜಿಗೆ ಶನಿವಾರ ಎರಡು ಗಂಟೆಯಲ್ಲಿ 7 ಕೆ.ಜಿಯಷ್ಟು ಕಡ್ಲೆ ವ್ಯಾಪಾರ ಮಾಡಿಕೊಟ್ಟರು.

ಆ ಮೂಲಕ ವ್ಯಾಪಾರದ ಜ್ಞಾನವನ್ನು ವಿದ್ಯಾರ್ಥಿಗಳು ಕಂಡು ಕೊಂಡರು. ಕಾಲೇಜಿನ ಆಸಿಸ್ಟೆಂಟ್‌ ಪ್ಲೇಸ್‌ಮೆಂಟ್‌ ಅಧಿಕಾರಿ, ಪ್ರಾಧ್ಯಾಪಕಿಯಾಗಿರುವ ದಿಶಾ ಸಿ.ಶೆಟ್ಟಿ ಅವರು ವಿದ್ಯಾರ್ಥಿಗಳನ್ನು ನಾಲ್ಕು ಗೋಡೆಯ ಮಧ್ಯದಿಂದ ಬೀದಿಗೆ ಕರೆದುಕೊಂಡು ಬಂದಿದ್ದರು. 14 ಮಂದಿ ವಿದ್ಯಾರ್ಥಿಗಳು ಈ ಚಟುವಟಿಕೆಯಲ್ಲಿ ಭಾಗವಹಿಸಿದ್ದರು.

ಸಹಾಯಕ್ಕೆ ಕೃತಜ್ಞತೆ: ವ್ಯಾಪಾರಕ್ಕೆ ಬರುವ ಬಗ್ಗೆ ವಿದ್ಯಾರ್ಥಿಗಳು ಮೊದಲೇ ಕೇಳಿಕೊಂಡಿದ್ದರು. ಆದರಂತೆ ಬಂದು ಕಡ್ಲೆ ವ್ಯಾಪಾರ ಮಾಡಿದ್ದಾರೆ. ಅವರಿಗೂ ನಮ್ಮ ಕಷ್ಟದ ಅರಿವಾಗಿದೆ. ನಮ್ಮ ಜೀವನ ಇದರಿಂದಲೇ ಆಗಬೇಕಿದ್ದು, ಸಹಾಯ ಮಾಡಿದ ಮಕ್ಕಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ. – ಪಾರ್ವತಿ, ಕಡ್ಲೆ ಮಾರುವ ಅಜ್ಜಿ

ಟಾಪ್ ನ್ಯೂಸ್

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Mangaluru: ಅಪರಿಚಿತ ವ್ಯಕ್ತಿ ಸಾವು

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

de

Mangaluru: ಅಪರಿಚಿತ ವ್ಯಕ್ತಿ ಸಾವು

arest

Kundapura: ಅಂಬರ್‌ ಗ್ರೀಸ್‌ ಮಾರಾಟ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.