ರಸ್ತೆಯಲ್ಲೇ ಗಲೀಜು ನೀರು; ತ್ವರಿತವಾಗಲಿ ಕಾಮಗಾರಿ


Team Udayavani, May 25, 2022, 11:07 AM IST

messy-water

ಮಹಾನಗರ: ಒಳಚರಂಡಿ ಕಾಮಗಾರಿಗಾಗಿ ಬೆಂದೂರ್‌ವೆಲ್‌ನಲ್ಲಿ ಮ್ಯಾನ್‌ಹೋಲ್‌ ಅಗೆದು ಹಾಕಿರುವ ಕಾರಣದಿಂದ ಗಲೀಜು ನೀರು ರಸ್ತೆಯುದ್ದಕ್ಕೂ ಹರಿದು ವಾಹನ ಸವಾರರು, ಪಾದಾಚಾರಿಗಳಿಗೆ ಸಮಸ್ಯೆಯಾಗಿದೆ. ನೀರು ತುಂಬಿ ಕೊಂಡ ಪ್ರದೇಶ ಮಿನಿ ಈಜುಕೊಳದಂತಿದ್ದು, ಕಾಮಗಾರಿ ನಿಧಾನವಾಗಿ ಸಾಗುತ್ತಿದೆ.

ಬೆಂದೂರ್‌ವೆಲ್‌, ಕಂಕನಾಡಿ ಪ್ರದೇಶದಲ್ಲಿ ತುಂಬಾ ಹಳೆಯ ಒಳಚರಂಡಿ ಪೈಪ್‌ ಹಾದುಹೋಗುತ್ತಿದ್ದು, ಇದೇ ಕಾರಣಕ್ಕೆ ಪೈಪ್‌ ಬಿರುಕು ಬಿಟ್ಟಿತ್ತು. ಪರಿಣಾಮ ಕಳೆದ ಕೆಲವು ದಿನಗಳಿಂದ ಗಲೀಜು ನೀರು ರಸ್ತೆಯಲ್ಲೇ ಹರಿಯುತ್ತಿದೆ. ಈಗಾಗಲೇ ಕಾಮಗಾರಿ ಉದ್ದೇಶಕ್ಕೆ ರಸ್ತೆ ಅಗೆಯಲಾಗಿದ್ದು, ಅಗೆದ ಪ್ರದೇಶವಿಡೀ ಪೂರ್ತಿ ಗಲೀಜು ನೀರಿ ನಿಂದ ಆವೃತವಾಗಿದೆ. ಸದ್ಯ ಆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು, ವಾಹನ ಸವಾ ರರು ತೊಂದರೆ ಅನುಭವಿಸುತ್ತಿದ್ದಾರೆ. ಕಾಮಗಾರಿಗಾಗಿ ಅಗೆದ ಪ್ರದೇಶದಿಂದ ರಸ್ತೆ ಮಟ್ಟದವರೆಗೆ ಕೊಳಚೆ ನೀರು ಇದ್ದು, ವಾಹನಗಳು ಅಪಘಾತ ಉಂಟಾಗುವ ಸಾಧ್ಯತೆ ಎದುರಾಗಿದೆ.

ಕಾಮಗಾರಿ ಮತ್ತು ಅಪಾಯದ ಕಾರಣದಿಂದಾಗಿ ಈ ಪ್ರದೇಶದ ಸುತ್ತಲೂ ಬ್ಯಾರಿಕೇಡ್‌ ಅಳವಡಿಸಲಾಗಿದೆ. ಆದರೆ ಬ್ಯಾರಿಕೇಡ್‌ ಕೂಡ ಕಾಮಗಾರಿ ಪ್ರದೇಶದ ಗುಂಡಿಗೆ ಬಿದ್ದಿದ್ದು, ರಾತ್ರಿ ವೇಳೆ ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಸಂಬಂಧಪಟ್ಟ ಇಲಾಖೆ, ಅಧಿಕಾರಿಗಳು ತತ್‌ಕ್ಷಣ ಗಮನಹರಿಸಿ ಕಾಮಗಾರಿಗೆ ವೇಗ ನೀಡಬೇಕು ಎನ್ನುತ್ತಾರೆ ಸಾರ್ವಜನಿಕರು.

ಸ್ಥಳೀಯ ಮನಪಾ ಸದಸ್ಯ ನವೀನ್‌ ಡಿಸೋಜಾ ಅವರು ಉದಯವಾಣಿ ಸುದಿನ ಕ್ಕೆ ಪ್ರತಿಕ್ರಿಯಿಸಿ, ಈ ಪ್ರದೇಶದಲ್ಲಿ ಒಳಚರಂಡಿ ಪೈಪ್‌ಲೈನ್‌ ಒಡೆದಿದ್ದು, ಸದ್ಯ ದುರಸ್ತಿ ಕಾಮಗಾರಿ ಸಾಗುತ್ತಿದೆ. ಪಕ್ಕದಲ್ಲಿಯೇ ನೀರಿನ ಮುಖ್ಯ ಪೈಲ್‌ಲೈನ್‌ ಕೂಡ ಹಾದುಹೋಗುವುದರಿಂದ ನಾಜೂಕಾಗಿ ಕೆಲಸ ನಡೆಸಬೇಕು. ನೀರಿನ ಪೈಪ್‌ಲೈನ್‌ಗೆ ಹಾನಿ ಉಂಟಾದರೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಬಹುದು. ಇದು ಸದಾ ಜನನಿಬಿಡ ಪ್ರದೇಶವಾದ ಕಾರಣ ದಿನದಿಡೀ ಕಾಮಗಾರಿ ನಡೆಸಲು ಸಾಧ್ಯವಿಲ್ಲ. ಅಲ್ಲದೆ, ಇತ್ತೀಚೆಗೆ ಮಳೆ ಬಂದ ಕಾರಣ ಕಾಮಗಾರಿ ತುಸು ವಿಳಂಬವಾಗಿತ್ತು. ಸದ್ಯ ಕಾಮಗಾರಿ ವೇಗ ಪಡೆದುಕೊಂಡಿದ್ದು, ಕೆಲವೇ ದಿನಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಕಾಮಗಾರಿಗೆ ವೇಗ

ಬೆಂದೂರ್‌ವೆಲ್‌ ಬಳಿ ಒಳಚರಂಡಿ ವ್ಯವಸ್ಥೆಯಲ್ಲಿ ಸಮಸ್ಯೆ ಉಂಟಾಗಿ ಗಲೀಜು ನೀರು ರಸ್ತೆಯಲ್ಲಿ ಹರಿಯುತ್ತಿರುವ ವಿಚಾರ ಗಮನಕ್ಕೆ ಬಂದಿದೆ. ಸಂಬಂಧಪಟ್ಟ ಅಧಿಕಾರಿಗಳ ಜತೆ ಈ ಕುರಿತು ಚರ್ಚೆ ನಡೆಸಿದ್ದು, ಕಾಮಗಾರಿಗೆ ವೇಗ ನೀಡುವಂತೆ ಸೂಚನೆ ನೀಡಿದ್ದೇನೆ. -ಪ್ರೇಮಾನಂದ ಶೆಟ್ಟಿ, ಮನಪಾ ಮೇಯರ್‌

ಟಾಪ್ ನ್ಯೂಸ್

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

stalin

Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್‌ ನಡುವೆ ಮತ್ತ ಸಂಘರ್ಷ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.