ದ.ಕ. ಬಿಜೆಪಿ ಪಾಳಯಕ್ಕೆ ಬಲ ತುಂಬಿದ ಮೋದಿ, ಶಾ, ನಡ್ಡಾ ಭೇಟಿ

Team Udayavani, May 14, 2023, 8:10 AM IST

ದ.ಕ. ಬಿಜೆಪಿ ಪಾಳಯಕ್ಕೆ ಬಲ ತುಂಬಿದ ಮೋದಿ, ಶಾ, ನಡ್ಡಾ ಭೇಟಿ

ಮಂಗಳೂರು: ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ನ ಪ್ರಮುಖ ನಾಯಕರು ಜಿಲ್ಲೆಯಲ್ಲಿ ರೋಡ್‌ ಶೋ, ಸಮಾವೇಶ, ರ್ಯಾಲಿಗಳ ಮೂಲಕ ಗಮನ ಸೆಳೆದರೂ ಅತ್ಯಧಿಕ ಪರಿಣಾಮ ಬೀರಿದ್ದು ಬಿಜೆಪಿಯ ಅತಿರಥ ಮಹಾರಥರ ಭೇಟಿ ಮಾತ್ರ.

ದ.ಕ. ಜಿಲ್ಲೆಯಲ್ಲಿ ಈ ಬಾರಿ ಕಾಂಗ್ರೆಸ್‌ ಗ್ಯಾರಂಟಿ ಮೋಡಿಯ ಲೆಕ್ಕಾಚಾರ ಆರಂಭದಲ್ಲಿತ್ತು. ಜ. 22ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಪ್ರಜಾಧ್ವನಿ ಯಾತ್ರೆಯ ಬೃಹತ್‌ ಸಮಾವೇಶ ನಡೆಸುವುದರೊಂದಿಗೆ ಕರಾವಳಿಗೆ ಪ್ರತ್ಯೇಕ ಪ್ರಣಾಳಿಕೆಯನ್ನು ಸಿದ್ದರಾಮಯ್ಯ- ಡಿಕೆಶಿ ಜೋಡಿ ಬಿಡುಗಡೆಗೊಳಿಸಿತ್ತು. ಇದು ಆರಂಭದಲ್ಲಿ ಬಿಜೆಪಿ ಪಾಳಯದಲ್ಲೂ ಒಂದಷ್ಟು ತಳಮಳಕ್ಕೆ ಕಾರಣವಾಗಿತ್ತು.

ಇದರೊಂದಿಗೆ ಜಿಲ್ಲೆಯಲ್ಲಿ ಉಭಯ ಪಕ್ಷಗಳಿಂದ ಅಘೋಷಿತ ಪ್ರಚಾರ ಕಾರ್ಯ ಆರಂಭಗೊಂಡಿತ್ತು. ಜಿಲ್ಲೆಯಲ್ಲಿ ಬಿಜೆಪಿಯ ಹಾಲಿ ಶಾಸಕರು ತಮ್ಮ ಅಭಿವೃದ್ಧಿ ಜತೆಗೆ ಹಿಂದುತ್ವದ ನೆಲೆಯಲ್ಲಿ ಮತದಾರರನ್ನು ತಲುಪುವ ಪ್ರಯತ್ನ ಮಾಡಿದ್ದರು. ಆದರೆ ಟಿಕೆಟ್‌ ಹಂಚುವ ಸಂದರ್ಭ ಹೊಸ ಮುಖಗಳಿಗೆ ಅವಕಾಶ ಪಕ್ಷದಲ್ಲಿ ತಲ್ಲಣ ಸೃಷ್ಟಿಸಿತು. ಈ ಆತಂಕ ನಿವಾರಣೆಗಾಗಿ ಜಿಲ್ಲೆಗೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್‌ ಅವರಿಂದ ಪುತ್ತೂರು ಬಂಟ್ವಾಳದಲ್ಲಿ ರೋಡ್‌ ಶೋ ನಡೆಸಲಾಯಿತು. ಪ್ರಧಾನಿ ಮೋದಿ ಅವರು ಮೂಲ್ಕಿಯಲ್ಲಿ ಬೃಹತ್‌ ಸಮಾವೇಶ, ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ಮಂಗಳೂರು ವಿಮಾನ ನಿಲ್ದಾಣ ಹಾಗೂ ಮಂಗಳೂರು ದಕ್ಷಿಣದಲ್ಲಿ ರೋಡ್‌ ಶೋ ಮೂಲಕ ಸಂಚಲನ ಮೂಡಿಸಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಹಲವು ರಾಷ್ಟ್ರೀಯ, ರಾಜ್ಯ ನಾಯಕರು ಜಿಲ್ಲೆಗೆ ಭೇಟಿ ನೀಡಿದರು. ಇವೆಲ್ಲವೂ ಬಿಜೆಪಿಗೆ ಪೂರಕವಾದರೂ ಪುತ್ತೂರಿನಲ್ಲಿ ಭುಗಿಲೆದ್ದ ಬಂಡಾಯದಿಂದ ಅಲ್ಲಿ ಪಕ್ಷ ತೃತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.

ಜೆಡಿಎಸ್‌ಗೆ ಚೈತನ್ಯ ತುಂಬುವ ನಿಟ್ಟಿನಲ್ಲಿ, ಜೆಡಿಎಸ್‌ ಟಿಕೆಟ್‌ನಲ್ಲಿ ಸ್ಪರ್ಧೆಗಿಳಿದ ಮೊದಿನ್‌ ಬಾವಾ ಅವರನ್ನು ಗೆಲ್ಲಿಸಲು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಜಿಲ್ಲೆಗೆ ಭೇಟಿ ನೀಡಿ ಪ್ರಚಾರ ಕೈಗೊಂಡರೂ ಫ‌ಲಿತಾಂಶ ಮಾತ್ರ ಶೂನ್ಯ.

ಫ‌ಲ ನೀಡದ ಕಾಂಗ್ರೆಸ್‌ ಗ್ಯಾರಂಟಿ
ಇನ್ನು ಕಾಂಗ್ರೆಸ್‌ ಗ್ಯಾರಂಟಿಯೊಂದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ-ಪ್ರಿಯಾಂಕಾ ವಾದ್ರಾ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಕೇಂದ್ರ ಮಾಜಿ ಸಚಿವ ಜೈರಾಮ್‌ ರಮೇಶ್‌, ಕೆ.ಸಿ. ವೇಣುಗೋಪಾಲ್‌ ಸೇರಿದಂತೆ ಹಲವು ನಾಯಕರು ಅಲ್ಲಲ್ಲಿ ಪ್ರಚಾರ ನಡೆಸಿ ಕಳೆದ ಬಾರಿಗಿಂತ ಒಂದು ಹೆಚ್ಚುವರಿ ಸ್ಥಾನವನ್ನು ಗಳಿಸಿದೆ.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

de

Mangaluru: ಅಪರಿಚಿತ ವ್ಯಕ್ತಿ ಸಾವು

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.