Umrahಕ್ಕೆ ತೆರಳಿದ್ದವರ ಟ್ರಾಲಿ ಬ್ಯಾಗ್ ನಿಂದ ಹಣ ಕಳವು; ವಿಮಾನಯಾನ ಸಂಸ್ಥೆಯ ಮೇಲೆ ಆರೋಪ
Team Udayavani, Jun 19, 2024, 12:54 PM IST
ಮಂಗಳೂರು: ಮಂಗಳೂರಿನಿಂದ ಉಮ್ರಾ ಯಾತ್ರೆಗೆ ಹೋದವರ ಟ್ರಾಲಿ ಬ್ಯಾಗ್ ನಿಂದ 26,432 ಸೌದಿ ರಿಯಾಲ್(6 ಲ.ರೂ) ಕಳವಾಗಿದ್ದು, ಇದಕ್ಕೆ ಖಾಸಗಿ ವಿಮಾನ ಯಾನ ಸಂಸ್ಥೆಯೇ ಕಾರಣವಾಗಿದ್ದು ಅದರ ಸಿಬಂದಿಯೇ ಹಣ ಕಳವು ಮಾಡಿರುವ ಸಂಶಯ ಇದೆ ಎಂದು ಹಣ ಕಳೆದುಕೊಂಡ ಮಂಗಳೂರಿನ ಬದ್ರುದ್ದೀನ್ ಜೂ. 19ರ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದ್ದಾರೆ.
ಘಟನೆಯ ವಿವರ: ಎ.30 ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಂಬೈ ಮಾರ್ಗವಾಗಿ ಸೌದಿ ಅರೇಬಿಯಾದ ಜೆದ್ದಾಕ್ಕೆ ಇತರ 34 ಮಂದಿಯೊಂದಿಗೆ ಇಂಡಿಗೋ ವಿಮಾನದಲ್ಲಿ ಉಮ್ರಾ ಯಾತ್ರೆಗೆ ಹೊರಟಿದ್ದೆ. ಅದರಲ್ಲಿ 11 ಮಂದಿಯ ಜವಾಬ್ದಾರಿಯನ್ನು ಟ್ರಾವೆಲಿಂಗ್ ಏಜೆನ್ಸಿಯವರು ತನಗೆ ನೀಡಿದ್ದರು. ಅವರ ಹಣವನ್ನು ತನ್ನ ಬ್ಯಾಗ್ ನಲ್ಲೆ ಇಟ್ಟುಕೊಂಡಿದ್ದೆ ಎಂದರು.
ಮುಂದುವರೆದು ಮಾತನಾಡಿ, ವಿಮಾನ ಯಾನ ಸಂಸ್ಥೆಯ ಸಿಬಂದಿ ಬ್ಯಾಗ್ ನ್ನು ಎರಡು ಬಾರಿ ಸ್ಕ್ಯಾನ್ ಮಾಡಿದ್ದರು. ಮೇ.1 ರಂದು ರಾತ್ರಿ ಜೆದ್ದಾ ತಲುಪಿ ವಿಮಾನ ನಿಲ್ದಾಣದಿಂದ ಹೊರಗಡೆ ಹೋಗಿ ನೋಡಿದಾಗ ಬ್ಯಾಗ್ ಗೆ ಬೀಗ ಹಾಕಿದ್ದು ಗಮನಕ್ಕೆ ಬಂದಿದೆ. ಒಳಗಡೆ ನೋಡಿದಾಗ ಅದರಲ್ಲಿದ್ದ ಹಣ ಕಳವಾಗಿತ್ತು ಎಂದರು.
ಘಟನೆಯ ಬಗ್ಗೆ ಈಗಾಗಲೇ ಪೊಲೀಸ್ ದೂರು ದಾಖಲಾಗಿದೆ. ಜಿಲ್ಲಾಧಿಕಾರಿಯವರಿಗೂ ಮನವಿ ಸಲ್ಲಿಸಲಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಂತಹ ಹಲವು ಘಟನೆಗಳು ನಡೆಯುತ್ತಿವೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ವಿಮಾನ ನಿಲ್ದಾಣದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.