ಬಡವರಿಗೆ ಅನ್ಯಾಯವಾದರೆ ಸೂಕ್ತ ಕ್ರಮ: ಶಾಸಕ ಕೋಟ್ಯಾನ್
Team Udayavani, Aug 5, 2018, 12:26 PM IST
ಮೂಡಬಿದಿರೆ: ಬಡ ಜನರು ಜೀವನ ನಡೆಸುವುದೇ ಕಷ್ಟ. ಹಾಗಿರುವಾಗ ಸರಕಾರಿ ಕೆಲಸಗಳಿಗಾಗಿ ಅವರು ಬಂದಾಗ ನಾವು ಸಾಧ್ಯವಾದಷ್ಟೂ ಸೇವೆ ನೀಡಬೇಕು. ಬಡವರಿಗೆ ಅನ್ಯಾಯವಾದಲ್ಲಿ ಸೂಕ್ತ ಕ್ರಮ ಜರಗಿಸಲಾಗುವುದು ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ಇಲ್ಲಿನ ಸಮಾಜ ಮಂದಿರದಲ್ಲಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನ ಸಭೆಯಲ್ಲಿ ಅವರು ಮಾತನಾಡಿ, ಆರ್‌ಟಿಸಿಗಳಲ್ಲಿ ಹೆಸರು ಹಾಗೂ ಮಾಹಿತಿಯನ್ನು ತಪ್ಪಾಗಿ ಉಲ್ಲೇಖಿಸಲಾಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಇದು ಮರುಕಳಿಸಬಾರದು. ನಿವೇಶನ ಮತ್ತು ಮನೆ ಇಲ್ಲದವರ ಬಗ್ಗೆ ಸಂಪೂರ್ಣ ಮಾಹಿತಿ ಸಿದ್ಧಪಡಿಸಬೇಕು. ಗ್ರಾಹಕರು ಸಲ್ಲಿಸುವ ಯಾವುದೇ ಅರ್ಜಿಯನ್ನು ತಿರಸ್ಕರಿಸಬಾರದು. ವಿವಿಧ ಸೌಲಭ್ಯಗಳ ಬಗ್ಗೆ ಜನರಿಗೆ ಮಾಹಿತಿ ನೀಡಿ ನಿಜವಾದ ಫಲಾನುಭವಿಗಳಿಗೆ ಪ್ರಯೋಜನ ತಲುಪಬೇಕು. ರಾಷ್ಟ್ರೀಯ ಕುಟುಂಬ ಪರಿಹಾರದ ಮೊತ್ತ 6 ತಿಂಗಳ ಒಳಗೆ ಸಂಬಂಧಪಟ್ಟವರ ಕೈ ತಲುಪುವಂತೆ ಮಾಡಬೇಕು ಎಂದು ಹೇಳಿದರು.
ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಮಕರಣಿಕರು ಹಾಗೂ ಪಿಡಿ ಒಗಳು ಉಪಸ್ಥಿತರಿದ್ದು, ಅಭಿವೃದ್ಧಿಗೆ ಸಂಬಂಧಿಸಿದ ಕೆಲವೊಂದು ಕಾನೂನಾತ್ಮಕ ತೊಡಕುಗಳ ಬಗ್ಗೆ ಚರ್ಚಿಸಿದರು. ಜಿ.ಪಂ. ಸದಸ್ಯರಾದ ಸುಚರಿತ ಶೆಟ್ಟಿ, ವಿನೋದ್ ಬೆಳ್ಳೂರು, ಪುರಸಭಾ ಸದಸ್ಯರಾದ ಬಾಹುಬಲಿ ಪ್ರಸಾದ್, ನಾಗ ರಾಜ್ ಪೂಜಾರಿ, ದಿನೇಶ್ ಪೂಜಾರಿ, ಪ್ರಸಾದ್ ಕುಮಾರ್, ಮುಖಂಡರಾದ ಮೇಘನಾದ್ ಶೆಟ್ಟಿ, ಹರೀಶ್ ಎಂ.ಕೆ. ಮೊದಲಾದವರಿದ್ದರು. ಕಂದಾಯ ಅಧಿಕಾರಿ ದಿಲೀಪ್ ಸ್ವಾಗತಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.