ನೆಹರೂ ಮೈದಾನ ಬಳಿ ತಾತ್ಕಾಲಿಕ ಮಾರ್ಕೆಟ್ ನಿರ್ಮಾಣಕ್ಕೆ ಚಾಲನೆ
Team Udayavani, Apr 21, 2020, 5:56 AM IST
ಮಂಗಳೂರು: ನಗರದ ಸೆಂಟ್ರಲ್ ಮಾರ್ಕೆಟ್ನ ರಿಟೇಲ್ ವ್ಯಾಪಾರಿಗಳಿಗೆ ವ್ಯವಹಾರ ನಡೆಸಲು ಅನುಕೂಲವಾಗುವಂತೆ ನೆಹರೂ ಮೈದಾನದ ಬಳಿ ತಾತ್ಕಾಲಿಕ ಮಾರ್ಕೆಟ್ ನಿರ್ಮಾಣ ಕಾಮಗಾರಿಗೆ ಸೋಮವಾರ ಸಂಸದ ನಳಿನ್ ಕುಮಾರ್ ಕಟೀಲು ಚಾಲನೆ ನೀಡಿದರು.
ಶಾಸಕ ಡಿ. ವೇದವ್ಯಾಸ ಕಾಮತ್, ಮೇಯರ್ ದಿವಾಕರ್ ಪಾಂಡೇಶ್ವರ, ಪಾಲಿಕೆಯ ಸ್ಥಾಯೀ ಸಮಿತಿ ಅಧ್ಯಕ್ಷೆ ಪೂರ್ಣಿಮಾ, ಕಾರ್ಪೊರೇಟರ್ ಜಗದೀಶ್ ಬೋಳೂರು, ಸ್ಮಾರ್ಟ್ ಸಿಟಿ ಯೋಜನ ನಿರ್ದೇಶಕ ಮೊಹಮದ್ ನಝೀರ್ ಉಪ ಸ್ಥಿತರಿದ್ದರು. ಸೆಂಟ್ರಲ್ ಮಾರ್ಕೆಟ್ ಕಟ್ಟಡ ಶಿಥಿಲಗೊಂಡ ಕಾರಣ ಅದನ್ನು ಕೆಡವಿ 5 ಕೋ. ರೂ. ವೆಚ್ಚದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಸುಸಜ್ಜಿತ ಮಾರ್ಕೆಟ್ ಕಟ್ಟಡ ನಿರ್ಮಿಸಲಾಗುತ್ತಿದೆ.
ಸೆಂಟ್ರಲ್ ಮಾರ್ಕೆಟ್ನಲ್ಲಿ 317 ಮಂದಿ ರಿಟೇಲ್ ವ್ಯಾಪಾರಸ್ಥರಿದ್ದು, ಪ್ರಸ್ತುತ ಅವರಿಗಾಗಿ ನೆಹರೂ ಮೈದಾನದ ಬಳಿ 2.16 ಎಕರೆ ಜಾಗದಲ್ಲಿ ತಾತ್ಕಾಲಿಕ ಮಾರುಕಟ್ಟೆನಿರ್ಮಾಣ ಮಾಡಲಾಗುತ್ತಿದೆ. 3 ತಿಂಗಳೊಳಗೆ ಕಟ್ಟಡ ಕಾಮಗಾರಿ ಮುಗಿಸಿ ಬಿಟ್ಟುಕೊಡುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. ಮಳೆಗಾಲದಲ್ಲಿ ವ್ಯಾಪಾರಿಗಳಿಗೆ ವ್ಯವಹಾರ ನಡೆಸಲು ಅನುಕೂಲ ಮಾಡಿಕೊಡಲು ಉದ್ದೇಶಿಸಲಾಗಿದೆ ಎಂದು ಸಂಸದ ತಿಳಿಸಿದರು.
ಸಗಟು ವ್ಯಾಪಾರಿಗಳಿಗೆ ಈಗಾಗಲೇ ಬೈಕಂಪಾಡಿಯಲ್ಲಿ ವ್ಯವಹಾರ ನಡೆಸಲು ವ್ಯವಸ್ಥೆ ಮಾಡಿ ಕೊಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.