‘4 ವರ್ಷಗಳ ಬಳಿಕ ಮನೆ ನಿರ್ಮಾಣ ಪರವಾನಿಗೆ ಸಮಸ್ಯೆ ಪರಿಹಾರ’
Team Udayavani, Sep 26, 2018, 12:39 PM IST
ಮೂಡಬಿದಿರೆ: ನಗರ ಯೋಜನಾ ಪ್ರಾಧಿಕಾರದ ಬಿಗಿ ನಿಯಮಾವಳಿಗಳಿಂದಾಗಿ ಕಳೆದ ನಾಲ್ಕು ವರ್ಷಗಳಿಂದ ಮನೆ ಕಟ್ಟಲು ಪರವಾನಿಗೆ ದೊರೆಯದೆ ಬಹಳ ಸಮಸ್ಯೆಯಾಗುತ್ತಿರುವುದನ್ನು ಮನಗಂಡು ಈಗ ಸತತ ಎರಡು ತಿಂಗಳ ಹೋರಾಟದ ಫಲವಾಗಿ ಮೂಡಬಿದಿರೆಗೆ ಮಂಗಳೂರು ಮುಡಾ ಝೋನಲ್ ರೆಗ್ಯುಲೇಶನ್ ಅನ್ವಯಿಸಲು ನಗರ ಯೋಜನಾ ಪ್ರಾಧಿಕಾರದ ನಿರ್ದೇಶಕರು ಅವಕಾಶ ಕಲ್ಪಿಸಿದ್ದು, ಇನ್ನು ಮುಂದೆ ಮೂಡಬಿದಿರೆಯಲ್ಲಿ ಮನೆ ನಿರ್ಮಾಣಕ್ಕೆ ಪರವಾನಿಗೆ ಪಡೆಯಲು ನಿಯಮಗಳನ್ನು ಸರಳಗೊಳಿಸಲಾಗಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮೂಡಬಿದಿರೆ ವ್ಯಾಪ್ತಿಯಲ್ಲಿದ್ದ ಸಮಸ್ಯೆಗಳ ಬಗ್ಗೆ ನುರಿತ ವಕೀಲರೊಂದಿಗೆ ಚರ್ಚಿಸಿದಾಗ ‘ಮುಡಾ’ ನಿಯಮಗಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೆ ತೊಂದರೆಯಾಗಿರುವುದು ತಿಳಿದುಬಂದಿತು. ಈ ಬಗ್ಗೆ ತಾನು ಸೆ. 19ರಂದು ಬೆಂಗಳೂರಿನಲ್ಲಿ ನಗರ ಯೋಜನಾ ಪ್ರಾಧಿಕಾರದ ನಿರ್ದೇಶಕರು, ದ.ಕ. ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಇರುವ ಅಧಿಕಾರಿ ಪೊನ್ನುರಾಜ್ ಅವರಿಗೆ ಮನವರಿಕೆ ಮಾಡಿದಾಗ ಅವರು ಸಮಸ್ಯೆಯ ಮೂಲವನ್ನು ತಿಳಿದು ಕೊಂಡರು ಹಾಗೂ ಕೂಡಲೇ ದ.ಕ. ಜಿಲ್ಲಾಧಿಕಾರಿ ಮತ್ತು ಮೂಡಬಿದಿರೆ ನಗರ ಯೋಜನಾ ಪ್ರಾಧಿಕಾರದ ಮುಖ್ಯಸ್ಥರಿಗೆ ಇದುವರೆಗೆ ಮೂಡಬಿದಿರೆಯಲ್ಲಿ ಅನುಸರಿಸಲಾಗುತ್ತಿರುವ ನಿಯಮಾವಳಿಗಳ ಬದಲಾಗಿ ಮಂಗಳೂರು ಮುಡಾ ಅಳವಡಿಸಿರುವ ಝೋನಲ್ ರೆಗ್ಯುಲೇಶನ್ ಜಾರಿಗೊಳಿಸಿ, ಮನೆ ಕಟ್ಟಬಯಸುವವರಿಗೆ ಪರವಾನಿಗೆ ನೀಡಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು ಎಂದರು.
ಇದಕ್ಕೆ ಎಲ್ಲ ಅಧಿಕಾರಿಗಳಿಗೆ ಶಾಸಕರು ಈ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಿದರು. ಪುರಸಭಾ ಸದಸ್ಯರಾದ ಪ್ರಸಾದ್ ಕುಮಾರ್, ನಾಗರಾಜ ಪೂಜಾರಿ, ಲಕ್ಷ್ಮಣ ಪೂಜಾರಿ, ದಿನೇಶ್ ಪೂಜಾರಿ, ಬಿಜೆಪಿ ಮುಖಂಡರಾದ ಮೇಘನಾಥ್ ಶೆಟ್ಟಿ, ಗೋಪಾಲ್ ಶೆಟ್ಟಿಗಾರ್, ರಾಜೇಶ್ ಮಲ್ಯ, ಅಶೋಕ ಮಲ್ಯ, ಜಾಯ್ ಲೊಸ್ ತಾಕೋಡೆ ಉಪಸ್ಥಿತರಿದ್ದರು.
ಪುರಸಭೆಗೆ ನಷ್ಟ
ಮೂಡಬಿದಿರೆ ಪುರಸಭೆಯಲ್ಲಿ ಯಾವುದೇ ಕನ್ವರ್ಷನ್ ಸೈಟ್‌ಗಳಿಗೆ ಖಾತೆ ನೀಡದೆ ಜನರಿಗೆ ಬಹಳ ತೊಂದರೆಯಾಗಿತ್ತು. ಪುರಸಭೆಗೆ ಒಂದು ಕೋಟಿ ರೂ. ಗೂ ಅಧಿಕ ನಷ್ಟವುಂಟಾಗಿತ್ತು. ನೋಂದಣಿ ಕಚೇರಿಯಲ್ಲಿ ವಹಿವಾಟು ನಡೆಯದೆ, ಸರಕಾರದ ಖಜಾನೆಗೂ ಲಕ್ಷಾಂತರ ರೂ. ನಷ್ಟವಾಗಿತ್ತು.
- ಉಮಾನಾಥ ಕೋಟ್ಯಾನ್,
ಶಾಸಕ, ಮೂಲ್ಕಿ-ಮೂಡಬಿದಿರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.