ಮೂಲರಪಟ್ಣ ತಾತ್ಕಾಲಿಕ ರಸ್ತೆ ಬಂದ್‌ ; ಮನವೊಲಿಕೆ ಬಳಿಕ ತೆರವು


Team Udayavani, Feb 21, 2019, 6:27 AM IST

21-february-7.jpg

ಎಡಪದವು : ಮೂಲರಪಟ್ಣ ಫಲ್ಗುಣಿ ನದಿಗೆ ಅಡ್ಡಲಾಗಿ ಸಾರ್ವಜನಿಕರು ನಿರ್ಮಿಸಿರುವ ಮಣ್ಣಿನ ರಸ್ತೆಯಲ್ಲಿ ಲಾರಿಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ರಸ್ತೆ ಹಾದುಹೋಗಿರುವ ಖಾಸಗಿ ಜಾಗದ ಮಾಲಕರಿಗೆ ಬಜಪೆ ಪೊಲೀಸರು ನೋಟಿಸ್‌ ನೀಡಿದ ಕಾರಣ ಜಾಗದ ಮಾಲಕರು ರಸ್ತೆಯನ್ನು ಬಂದ್‌ ಮಾಡಿದ ಘಟನೆ ಬುಧವಾರ ಬೆಳಗ್ಗೆ ಮುತ್ತೂರು ಭಾಗದಲ್ಲಿ ನಡೆದಿದೆ.

ಕಳೆದ ವರ್ಷ ಮೂಲರಪಟ್ಣ ಸೇತುವೆ ಮುರಿದು ಬಿದ್ದ ಅನಂತರ ಮುತ್ತೂರು- ಬಂಟ್ವಾಳ ಸಂಚಾರ ಮೊಟಕುಗೊಂಡಿದ್ದು, ಸಂಚಾರಕ್ಕಾಗಿ ಸಾರ್ವಜನಿಕರು ತೂಗು ಸೇತುವೆಯನ್ನು ಅವಲಂಬಿಸಿಕೊಂಡಿದ್ದರು. ಆದರೆ ಹೊಸ ಸೇತುವೆ ವಿಳಂಬವಾಗಿರುವುದನ್ನು ಗಮನಿಸಿದ ಸಾರ್ವಜನಿಕರು ಫಲ್ಗುಣಿ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗುತ್ತಿದ್ದಂತೆ ಮೂಲರಪಟ್ಣ ಮಸೀದಿ ಸಮೀಪದಿಂದ ಮುತ್ತೂರಿನ ಖಾಸಗಿ ಜಾಗದವರೆಗೆ ನದಿಗೆ ಅಡ್ಡಲಾಗಿ ಮೋರಿ ಅಳವಡಿಸಿ, ಲೋಡ್‌ಗಟ್ಟಲೆ ಮಣ್ಣು ತುಂಬಿಸಿ ತಾತ್ಕಾಲಿಕ ಮಣ್ಣಿನ ರಸ್ತೆ ಯನ್ನು ನಿರ್ಮಿಸಿದ್ದರು. ಬಸ್‌ಗಳನ್ನು ಹೊರತುಪಡಿಸಿ ಇನ್ನಿತರ ಎಲ್ಲ ವಾಹನಗಳು ಸಂಚರಿಸುತ್ತಿರುವುದರಿಂದ ಸಾರ್ವಜನಿಕರಿಗೆ ಬಹಳ ಅನುಕೂಲವಾಗಿತ್ತು. ಈ ನಡುವೆ ನಿನ್ನೆ ವ್ಯಕ್ತಿ ಯೋರ್ವರು ಬಜಪೆ ಠಾಣೆಗೆ ದೂರವಾಣಿ ಕರೆ ಮಾಡಿ ತಾತ್ಕಾಲಿಕ ಮಣ್ಣಿನ ರಸ್ತೆಯಲ್ಲಿ ಅಕ್ರಮವಾಗಿ ಮರಳನ್ನು ಸಾಗಾಟ ಮಾಡಲಾಗುತ್ತಿದೆ ಎಂದು ದೂರು ನೀಡಿದ್ದರು.

ನದಿಯ ದಡದಿಂದ ಮುತ್ತೂರಿನ ಮುಖ್ಯ ರಸ್ತೆಯನ್ನು ಸಂಪರ್ಕಿಸುವ ಒಳ ರಸ್ತೆಯು ಖಾಸಗಿಯವರ ಜಮೀನಿ ನಲ್ಲಿ ಹಾದುಹೋಗಿತ್ತು. ಬಜಪೆ ಪೊಲೀಸರು ಖಾಸಗಿಯವರಿಗೆ ಇರುವ ಜಮೀನ ಲ್ಲಿರುವ ರಸ್ತೆಯ ಮೂಲಕ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂದು ನೋಟಿಸ್‌ ಜಾರಿ ಮಾಡಿದ್ದರು.

ಇದರಿಂದ ಬೇಸರಗೊಂಡ ಖಾಸಗಿ ವ್ಯಕ್ತಿ ಸಾರ್ವಜನಿಕರಿಗೆ ಅನುಕೂಲವಾಗಲೆಂದು ತನ್ನ ಜಮೀನಿನಲ್ಲಿ ರಸ್ತೆ ನಿರ್ಮಿಸಿಕೊಟ್ಟರೆ ನನಗೆ ಪೊಲೀಸರು ನೋಟಿಸ್‌ ನೀಡಿದ್ದಾರೆ ಎಂದು ಆಕ್ರೋಶಗೊಂಡು ಈ ಜಾಗದಲ್ಲಿ ಗೇಟ್‌ ಹಾಕಿ ಮುಚ್ಚಿದ್ದರಿಂದ ಸಾರ್ವ ಜನಿಕರಿಗೆ ಸಂಚಾರಕ್ಕೆ ಅನಾನುಕೂಲ ಉಂಟಾಗಿತ್ತು.

ವಿಷಯ ತಿಳಿದ ಸಾರ್ವಜನಿಕರು ಸ್ಥಳಕ್ಕೆ ಜಮಾಯಿಸಿ ಸ್ಥಳಕ್ಕಾಗಮಿಸಿದ ಪೊಲೀಸರ ಜತೆ ನೋಟಿಸ್‌ ನೀಡಿರುವಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ದೂರು ನೀಡಿದ ವ್ಯಕ್ತಿ ಯಾರೆಂದು ಕೇಳಿದರು. ಲಿಖೀತ ದೂರು ನೀಡದೆ ಕೇವಲ ಫೋನಿನ ಮೂಲಕ ನೀಡಿದ ದೂರಿನ ಆಧಾರದಲ್ಲಿ ನೋಟಿಸ್‌ ನೀಡಿದ್ದು ಯಾಕೆ? ಈಗ ರಸ್ತೆ ಮುಚ್ಚಿರುವುದರಿಂದ ಸಾರ್ವ ಜನಿಕರಿಗೆ ಅನಾನುಕೂಲವಾಗಿದೆ ಎಂದು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದರು.

ಕೊನೆಗೆ ಪೊಲೀಸರು, ಜಮೀನು ಮಾಲಕರು ಹಾಗೂ ಸಾರ್ವಜನಿಕರ ಜತೆ ಪರಸ್ಪರ ಮಾತುಕತೆ ನಡೆಸಿ, ಮನವೊಲಿಸಿ ಮುಚ್ಚಿದ ಗೇಟನ್ನು ತೆರವುಗೊಳಿಸಿದರು. ಈಗ ತಾತ್ಕಾಲಿಕ ಮಣ್ಣಿನ ರಸ್ತೆಯಲ್ಲಿ ಮತ್ತೆ ಸಂಚಾರ ಆರಂಭಗೊಂಡಿದೆ.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.