Mulki: ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್ ಹಾರಿ ಹಲವು ಅವಘಡಕ್ಕೆ ಕಾರಣವಾದ ಲಾರಿ
Team Udayavani, Dec 7, 2023, 1:41 PM IST
ಮೂಲ್ಕಿ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹೆದ್ದಾರಿ ಡಿವೈಡರ್ ಮೇಲೆ ಹತ್ತಿ ಪಾದಚಾರಿ ಮಾರ್ಗದ ಪಕ್ಕದಲ್ಲಿದ್ದ ವಾಹನಗಳಿಗೆ ಡಿಕ್ಕಿಯಾದ ಘಟನೆ ರಾ. ಹೆದ್ದಾರಿ 66 ರ ಮೂಲ್ಕಿ ಜಂಕ್ಷನ್ ಬಳಿ ನಡೆದಿದೆ.
ಲಾರಿ ಚಾಲಕನ ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಘಟನೆಯ ಪರಿಣಾಮ ಸಂಚಾರ ಪೊಲೀಸ್ ಸಿಬ್ಬಂದಿ ಸೇರಿ ಮೂವರು ಗಾಯಗೊಂಡಿದ್ದಾರೆ.
ಸ್ಕೂಟರ್ ಸವಾರ, ಬಪ್ಪನಾಡು ಬಳಿಯ ರೆಸಿಡೆನ್ಸಿಯೊಂದರ ವಾಚ್ ಮ್ಯಾನ್, ಉತ್ತರ ಕರ್ನಾಟಕ ಮೂಲದ ಗಂಭೀರ ಗಾಯಗೊಂಡು ಮುಕ್ಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಗೀತಾ, ಆಟೋ ಚಾಲಕ ಧರ್ಮೇಂದ್ರ ಗಾಯಗೊಂಡು ಮುಲ್ಕಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ರಾ. ಹೆದ್ದಾರಿ 66 ರ ಉಡುಪಿಯಿಂದ ಮಂಗಳೂರು ಕಡೆಗೆ ಅತೀ ವೇಗದಿಂದ ಬರುತ್ತಿದ್ದ ಲಾರಿ ಮೂಲ್ಕಿ ಜಂಕ್ಷನ್ ಗೆ ಬರುತ್ತಿದ್ದಂತೆ ಹೆದ್ದಾರಿ ಅಪಘಾತ ತಡೆಗೆ ಇರಿಸಿದ್ದ ಬ್ಯಾರಿಕೇಡ್ ಗಳನ್ನು ತಪ್ಪಿಸಲು ಯತ್ನಿಸಿ, ಲಾರಿ ಚಾಲಕನ ನಿಯಂತ್ರಣ ತಪ್ಪಿ ಸೀದಾ ಎಡಬದಿಯ ಡಿವೈಡರ್ ಮೇಲೇರಿದೆ.
ಅಲ್ಲೇ ಸಮೀಪದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಗೀತಾ ಅವರಿಗೆ ಡಿಕ್ಕಿ ಹೊಡೆದು ಮತ್ತೇ ಸರ್ವಿಸ್ ರಸ್ತೆಯಲ್ಲಿ ಚಲಿಸಿ ಸ್ಕೂಟರ್ ಸವಾರನಿಗೆ ಡಿಕ್ಕಿ ಹೊಡೆದು ಸ್ಕೂಟರನ್ನು ಎಳೆದುಕೊಂಡು ಹೋಗಿ ರಸ್ತೆ ಬದಿ ನಿಲ್ಲಿಸಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಲಾರಿ ಅಲ್ಲಿಯೂ ನಿಲ್ಲದೆ ಪುನಃ ಬಲಬದಿಗೆ ಡಿವೈಡರ್ ಮೇಲೇರಿ ಹೆದ್ದಾರಿಯಲ್ಲಿ ಬಂತು ನಿಂತಿತು.
ಈ ಘಟನೆಯಿಂದ ಮೂವರಿಗೆ ಅಪಫಾತವಾಗಿದ್ದು, ಸ್ಕೂಟರ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಉಳಿದಿಬ್ಬರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಸ್ಕೂಟರ್ ಹಾಗೂ ಆಟೋ ರಿಕ್ಷಾಕ್ಕೆ ಹಾನಿಯಾಗಿದೆ.
ಇದೇ ಸಂದರ್ಭ ಸರ್ವಿಸ್ ರಸ್ತೆ ಬದಿ ಕುಳಿತಿದ್ದ ಉ.ಕ. ದ ಕೂಲಿ ಕಾರ್ಮಿಕರು ಜೀವ ಭಯದಿಂದ ಓಡಿ ಅನಾಹುತದಿಂದ ಪಾರಾಗಿದ್ದಾರೆ. ಈ ದೃಶ್ಯ ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ.
ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು, ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Cold Weather: ಕೊನೆಗೂ ಚಳಿ ಶುರು ಆಯ್ತು ಗುರು
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.