ಮೂಲ್ಕಿ: ಕಾಂಗ್ರೆಸ್‌ ಅಧಿಕಾರಕ್ಕೆ


Team Udayavani, Jun 1, 2019, 6:00 AM IST

e-6

ಮೂಲ್ಕಿ: ಕಳೆದ ಬಾರಿ ಬಿಜೆಪಿ ಅಧಿಕಾರದಲ್ಲಿ ಮೂಲ್ಕಿ ನಗರ ಪಂಚಾಯತ್‌ ಆಡಳಿತ ಈ ಬಾರಿ ಕಾಂಗ್ರೆಸ್‌ ಪಾಲಾಗಿದೆ. ಶುಕ್ರವಾರ ಬೆಳಗ್ಗೆ ಮತ ಎಣಿಕೆ ಕಾರ್ಯಕ್ಕಾಗಿ 7.45ಕ್ಕೆ ಭದ್ರತಾ ಕೊಠಡಿಯಿಂದ ಮತ ಪೆಟ್ಟಿಗೆಗಳನ್ನು ಹೊರ ತಂದು. 8 ಗಂಟೆಗೆ ಸರಿಯಾಗಿ ಮತ ಎಣಿಕೆ ಆರಂಭಗೊಂಡಿತು. ಸುಮಾರು 9 ಗಂಟೆಗೆ ಮತ ಏಣಿಕೆ ಪ್ರಕ್ರಿಯೆ ಮುಗಿದು ಎಲ್ಲ 18 ವಾರ್ಡ್‌ಗಳ ಫ‌ಲಿತಾಂಶ ಪ್ರಕಟಗೊಂಡಿತ್ತು.

ಖಾತೆ ತೆರೆದ ಜೆಡಿಎಸ್‌ ಕಳೆದ ಬಾರಿ ಬಿಜೆಪಿ 11 ಮತ್ತು ಕಾಂಗ್ರೆಸ್‌ 6 ಸ್ಥಾನ ಪಡೆದುಕೊಂಡಿತ್ತು. ಆದರೆ ಈ ಬಾರಿ ಜೆಡಿಎಸ್‌- ಕಾಂಗ್ರೆಸ್‌ ಮೈತ್ರಿ ಯಾಗಿ 18 ಸೀಟುಗಳ ಪೈಕಿ 3 ಜೆಡಿಎಸ್‌ಗೆ ಬಿಟ್ಟು ಕೊಟ್ಟು 14 ಸ್ಥಾನಗಳಲ್ಲಿ ಕಾಂಗ್ರೆಸ್‌ ಸ್ಪರ್ಧಿಸಿದ್ದು, ಬಿಜೆಪಿಗೆ 8 ಮತ್ತು ಕಾಂಗ್ರೆಸ್‌ಗೆ 9 ಹಾಗೂ ಮೈತ್ರಿ ಪಕ್ಷವಾದ ಜೆಡಿಎಸ್‌ಗೆ 1 ಸ್ಥಾನ ದೊರೆಯುವ ಮೂಲಕ ಜೆಡಿಎಸ್‌ ಮೂಲ್ಕಿ ನಗರ ಪಂಚಾಯತ್‌ನಲ್ಲಿ ತನ್ನ ಖಾತೆಯನ್ನು ತೆರೆದಿದೆ.

ಮತ ಯಂತ್ರದಲ್ಲಿ ದೋಷ
ಚುನಾವಣೆಯ ಎಣಿಕೆ ಕಾರ್ಯದ ವೇಳೆ ಮತ ಯಂತ್ರದಲ್ಲಿ ತೊಂದರೆ ಕಂಡು ಬಂದಕಾರಣ ಸ್ವಲ್ಪ ಕಾಲ ಗೊಂದಲವಾದರೂ ಅನಂತರ ತಜ್ಞರು ಆಗಮಿಸಿ ಸರಿಪಡಿಸಿದರು.

ಮರು ಮತ ಎಣಿಕೆಯ ಚಿಂತನೆಗೆ ಅವಕಾಶ ಇಲ್ಲ ಮತ ಎಣಿಕೆ ಮುಗಿದು ಪ್ರಮಾಣ ಪತ್ರ ಪಡೆದ ಅನಂತರ ಬಿಜೆಪಿ ಕೆಲವು ಸದಸ್ಯರು ಎರಡು ಕ್ಷೇತ್ರಗಳ ಮರು ಎಣಿಕೆಗೆ ಒತ್ತಾಯಿಸಿದಾಗ ಪ್ರಮಾಣ ಪತ್ರ ಪಡೆದ ಬಳಿಕ ಇದಕ್ಕೆ ಅವಕಾಶವಿಲ್ಲ ಎಂದು ಚುನಾವಣಾಧಿಕಾರಿಗಳು ಸ್ಪಷ್ಟಪಡಿಸಿದ್ದರಿಂದ ಮರು ಮತ ಎಣಿಕೆಗೆ ಅವಕಾಶ ಸಿಗಲಿಲ್ಲ. ಈ ಬಾರಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ 10 ಸ್ಥಾನಗಳು ಹೊಂದಿರುವುದರಿಂದ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಿದ್ದರೂ ಶಾಸಕರು ಮತ್ತು ಸಂಸದರಿಗೆ ಆಯ್ಕೆಯಲ್ಲಿ ಮತ ನೀಡುವ ಅವಕಾಶ ಇರುವುದರಿಂದ ಸಮಬಲ ಬರಬಹುದು ಎಂಬ ಲೆಕ್ಕಾಚಾರವೂ ಹಲವರಲ್ಲಿದೆ.
ಸರಕಾರದಿಂದ ಗಜೆಟ್‌ ಪ್ರಕಟನೆಯ ಅನಂತರವೇ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ದಿನ ನಿಗದಿಯಾಗಲಿದೆ. ಮಂಡ್ಯ ಎ.ಡಿ.ಸಿ. ರೂಪಾ ಅವರು ಚುನಾವಣಾ ಆಯೋಗದಿಂದ ವೀಕ್ಷಕರಾಗಿ ಆಗಮಿಸಿ ಮತ ಎಣಿಕೆಯ ಸ್ಥಳದಲ್ಲಿ ಇದ್ದರು.

ಮಂಗಳೂರು ಸಹಾಯಕ ಕಮಿಷನರ್‌ ರಾಮಚಂದ್ರ ನಾಯಕ್‌, ಮೂಲ್ಕಿ ತಹಶಿಲ್ದಾರ್‌ ಮಾಣಿಕಂ, ಪೊಲೀಸ್‌ ಎ.ಸಿ.ಪಿ. ಮಂಜುನಾಥ ಶೆಟ್ಟಿ ಮೂಲ್ಕಿ ಇನ್‌ಸ್ಪೆಕ್ಚರ್‌ ಸತೀಶ್‌, ಅಧಿಕಾರಿಗಳು, ಸಿಬಂದಿ ಮತ್ತು ಕಂದಾಯ ಇಲಾಖೆಯ ತಂಡದ ಸಹಕಾರದಿಂದ ಎಲ್ಲ ಕೆಲಸ ಕಾರ್ಯಗಳು ಸುಗಮವಾಗಿ ನಡೆದಿದೆ ಎಂದು ಚುನಾವಣಾ ಅಧಿಕಾರಿಗಳಾದ ಮಂಗಳೂರು ಅರಣ್ಯ ಅದಿಕಾರಿ ಚಿದಾನಂದಪ್ಪ ಮತ್ತು ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್‌ ಹೇಳಿದ್ದಾರೆ.

ಶಾಸಕ ಉಮಾನಾಥ ಕೋಟ್ಯಾನ್‌, ಮಾಜಿ ಸಚಿವರಾದ ಕೆ. ಅಭಯಚಂದ್ರ ಮತ್ತು ಅಮರನಾಥ ಶೆಟ್ಟಿ ಅವರು ಮತದಾರರು ಮತ್ತು ಕಾರ್ಯಕರ್ತರಿಗೆ ಕೃತ ಜ್ಞತೆ ಸಲ್ಲಿಸಿದರು. ಕಳೆದ ಲೋಕಸಭಾ ಚುನಾವಣೆ ಮೂಲ್ಕಿ ನಗರ ಪಂಚಾಯತ್‌ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಕಾಂಗ್ರೆಸ್‌ ಪಕ್ಷವನ್ನು ಮತದಾರರು ಬೆಂಬಲಿಸಿದ್ದಾರೆ ಎಂದು ಮಾಜಿ ಸಚಿವ ಅಭಯಚಂದ್ರ ಹರ್ಷ ವ್ಯಕ್ತ ಪಡಿಸಿದರು.

ಬಲಾಬಲ
ಬಿಜೆಪಿ 8
ಕಾಂಗ್ರೆಸ್‌ 9
ಜೆಡಿಎಸ್‌ 1
ಒಟ್ಟು 18

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.