‘ಬಹುಭಾಷಿಕತೆ ಜೀವ ವೈವಿಧ್ಯಗಳ ಸಂಕೇತ’
Team Udayavani, Mar 31, 2018, 5:05 PM IST
ಮಂಗಳಗಂಗೋತ್ರಿ : ಬಹುಭಾಷಿಕತೆ ಕೇವಲ ಭಾಷೆಗೆ ಸಂಬಂಧಿಸಿದ್ದಲ್ಲ. ಅದು ಪರಿಸರ ಸಂಸ್ಕೃತಿ ಮತ್ತು ಜೀವ ವೈವಿಧ್ಯಗಳ ಸಂಕೇತ. ಜಿಲ್ಲೆಯಲ್ಲಿ ಮೂಡಿ ಬಂದ ಸಾಹಿತ್ಯ ಬಹುಭಾಷಾ ನೆಲೆಯಿಂದಲೇ ತನ್ನ ಸತ್ವವನ್ನು ಪಡೆದುಕೊಂಡಿರುವಂತದ್ದು ಎಂದು ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ| ಶಿವರಾಮ ಪಡಿಕಲ್ ಹೇಳಿದರು.
ಅವರು ಮಂಗಳೂರು ವಿಶ್ವವಿದ್ಯಾನಿಲಯದ ಯುಜಿಸಿ ಸ್ಯಾಪ್ ಯೋಜನೆಯ ಆಶ್ರಯದಲ್ಲಿ ‘ಕರಾವಳಿಯ ಬಹುಭಾಷಿಕ, ಸಾಹಿತ್ಯಕ ಸಾಂಸ್ಕೃತಿಕ ಅಧ್ಯಯನದ ವೈಧಾನಿಕತೆ ಎಂಬ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮಾತನಾಡಿದರು. ಬಹು ಸಾಂಸ್ಕೃಕ, ಆರೋಗ್ಯ, ಬಹುಭಾಷಾ ಒಡನಾಟ ಮತ್ತು ರಾಜಕೀಯಗಳನ್ನು ಮನಸ್ಸಿನಲ್ಲಿ ಇರಿಸಿಕೊಂಡೇ ನಾವು ಸಾಂಸ್ಕೃತಿಕ ಭಾಷಾಂತರವನ್ನು ಅರ್ಥ ಮಾಡಿಕೊಳ್ಳಬೇಕು ಎಂದ ಹೇಳಿದ ಅವರು ಕರ್ನಾಟಕದ ಆಧುನಿಕತೆಯ ಹಿನ್ನೆಲೆಯಲ್ಲಿ ಬಹು ಭಾಷಿಕತೆ, ಸಾಹಿತ್ಯ, ಸಂಸ್ಕೃತಿಗಳನ್ನು ಅನುಸಂಧಾನಿಸಬಹುದಾದ ರೀತಿಗಳ ಬಗ್ಗೆ ಚರ್ಚಿಸಿದರು.
ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಪ್ರಾಧ್ಯಾಪಕ ಅವಿನಾಶ್ ಟಿ., ಸ್ಯಾಪ್ ಯೋಜನೆಯ ಸಂಯೋಜಕ ಪ್ರೊ| ಬಿ.ಶಿವರಾಮ ಶೆಟ್ಟಿ, ಪ್ರಾಧ್ಯಾಪಕ ಡಾ| ನಾಗಪ್ಪ ಗೌಡ ಮತ್ತಿತರರು ಉಪಸ್ಥಿತರಿದ್ದರು. ಡಾ| ಧನಂಜಯ ಕುಂಬ್ಳೆ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.