Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ
Team Udayavani, Oct 6, 2024, 2:56 PM IST
ಮಂಗಳೂರು: ನಾಪತ್ತೆಯಾಗಿರುವ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರ ಸೋದರ ಉದ್ಯಮಿ ಮುಮ್ತಾಜ್ ಆಲಿಯವರಿಗಾಗಿ ಹುಡುಕಾಟ ಮುಂದುವರೆದಿದೆ.
ಕೂಳೂರು ಸೇತುವೆಯ ಮೇಲೆ ಕಾರು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೂಳೂರು ಸೇತುವೆ ಬಳಿ ನದಿಯಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ.
ಮುಳುಗುತಜ್ಞ ಈಶ್ಚರ ಮಲ್ಪೆ ತಂಡ ಸಹಿತ ಹಲವು ರಕ್ಷಣಾ ತಂಡಗಳು ಶೋಧ ಕಾರ್ಯದಲ್ಲಿ ನಿರತವಾಗಿವೆ. ಮಾಜಿ ಶಾಸಕ ಮೊಯ್ದಿನ್ ಬಾವಾ ಕೂಡ ಸ್ಥಳದಲ್ಲಿದ್ದು ಕಾರ್ಯಾಚರಣೆ ಪರಿಶೀಲಿಸಿದರು.
ಒಂದು ಹಂತದ ಹುಡುಕಾಟದ ನಡೆಸಿದ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಬಳಿಕ ಪತ್ರಕರ್ತರೊಂದಿಗೆ ಮಾತನಾಡಿ, ನಾವು ಏಳು ಜನ ಆಳಕ್ಕೆ ಮುಳುಗಿ ಕಾರ್ಯಾಚರಣೆ ನಡೆಸಿದ್ದೇವೆ, ಆದರೆ ಎಲ್ಲೂ ಕೂಡ ಪತ್ತೆಯಾಗಿಲ್ಲ ಎಂದರು.
ಸದ್ಯಕ್ಕೆ 100 ಮೀಟರ್ ಸುತ್ತುತ್ತಾ ಹುಡುಕಾಟ ನಡೆಸಲಾಗಿದೆ. ಸೇತುವೆ ಆಳಕ್ಕೆ ಇಳಿದು ಹುಡುಕಾಟ ನಡೆಸಿದ್ದೇವೆ. ಸೇತುವೆ ಕಾಮಗಾರಿ ನಡೆಯುತ್ತಿದ್ದು ಕೆಳಗೆ ಕಬ್ಬಿಣದ ಸರಳು, ಸಿಮೆಂಟ್ ಚೀಲಗಳಿವೆ. ಕೆಳಗೆ ಕತ್ತಲೆ ಇರುವುದರಿಂದ ಕಾರ್ಯಾಚರಣೆಗೆ ತೊಡಕಾಗಿದೆ ಎಂದು ಹೇಳಿದರು.
ಮುಂದುವರೆದು ಮಾತನಾಡಿ ಇಲ್ಲಿ ಬಿದ್ದಿದ್ದರೆ ಇಲ್ಲೇ ಸಿಗಬೇಕು, ಇಷ್ಟು ಬೇಗ ಸಮುದ್ರ ಸೇರುವುದಿಲ್ಲ. ಎಲ್ಲಾ ತಂಡಗಳು ಕಾರ್ಯಾಚರಣೆಯನ್ನು ಮತ್ತೆ ಮುಂದುವರೆಸಿದ್ದೇವೆ. ಅವರು ಜೀವಂತವಾಗಿ ಇರಲಿ ಎಂದು ಆಶೀಸುತ್ತೇವೆ ಎಂದರು.
ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಅಲಿ ಅವರ ಸಹೋದರ ಬಿ.ಎಂ ಫಾರೂಕ್, ಐವನ್ ಡಿಸೋಜ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Niveus Mangalore Marathon 2024: ನ.10: ನೀವಿಯಸ್ ಮಂಗಳೂರು ಮ್ಯಾರಥಾನ್
MUST WATCH
ಹೊಸ ಸೇರ್ಪಡೆ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.