‘ಮೋದಿ ಆಡಳಿತದಲ್ಲಿ ದೇಶಕ್ಕೆ ಉನ್ನತ ಸ್ಥಾನ’
Team Udayavani, Mar 2, 2019, 10:53 AM IST
ಮಹಾನಗರ : ನರೇಂದ್ರ ಮೋದಿ ಆಡಳಿತದಲ್ಲಿ ದೇಶ ಪ್ರತಿಸ್ತರದಲ್ಲಿಯೂ ಉನ್ನತ ಸ್ಥಾನ ಪಡೆದಿದೆ. ಭಾರತವು ಮತ್ತಷ್ಟು ಬಲಿಷ್ಠ ರಾಷ್ಟ್ರವಾಗಿ ವಿಶ್ವಭೂಪಟದಲ್ಲಿ ಮಿಂಚ ಬೇಕಾದರೆ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ವೈದ್ಯ ಡಾ| ಕೆ.ವಿ. ದೇವಾಡಿಗ ಅಭಿಪ್ರಾಯಪಟ್ಟರು.
ನರೇಂದ್ರ ಮೋದಿ ಕುರಿತ ಸಮಗ್ರ ವಿವರವನ್ನು ಒಳಗೊಂಡಿರುವ ‘ನಮೋ ಕಿರು ಜಗತ್ತು’ ಕಚೇರಿಯನ್ನು ನಗರದ ಕೆ.ಎಸ್. ರಾವ್ ರಸ್ತೆಯ ಮಿಸ್ಟೀಫ್ ಮಾಲ್‌ನಲ್ಲಿ ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತಹ ಸಾಧನೆಯನ್ನು ಐದು ವರ್ಷಗಳಲ್ಲಿ ಮೋದಿ ಸರಕಾರ ಮಾಡಿದೆ. ವಿದೇಶಗಳಲ್ಲಿಯೂ ದೇಶೀಯ ಪ್ರಜೆಗಳಿಗೆ ಗೌರವಾದರಗಳು ಸಿಗುವಂತೆ ಮಾಡಿದ ಅಮೋಘ ವ್ಯಕ್ತಿತ್ವ ಅವರದ್ದು. ಇಂತಹ ವ್ಯಕ್ತಿ ಮತ್ತೂಮ್ಮೆ ಪ್ರಧಾನಿಯಾಗುವ ಮೂಲಕ ದೇಶ ಇನ್ನಷ್ಟು ಎತ್ತರಕ್ಕೇರಬೇಕು ಎಂದವರು ಆಶಿಸಿದರು.
ಆರ್ಥಿಕತೆಯಲ್ಲಿ ಬೆಳವಣಿಗೆ
ಅತಿಥಿಯಾಗಿದ್ದ ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಘಟಕ ಅಧ್ಯಕ್ಷ ಡಾ| ಸಚ್ಚಿದಾನಂದ ರೈ ಮಾತನಾಡಿ, ಮೋದಿಯವರು ಪ್ರಧಾನಿಯಾದ ಬಳಿಕ ದೇಶದ ಆರ್ಥಿಕತೆಯಲ್ಲಿ ಉತ್ತಮ ಬೆಳವಣಿಗೆಯಾಗಿದೆ. ಅವರು ಮತ್ತೊಮ್ಮೆ ಪ್ರಧಾನಿಯಾದ ಬಳಿಕ ವಿಶ್ವದ ಅಗ್ರಮಾನ್ಯ ರಾಷ್ಟ್ರದಲ್ಲಿ ಭಾರತದ ಹೆಸರು ಕೂಡ ಉಲ್ಲೇಖವಾಗಲಿದೆ ಎಂದರು. ನರೇಂದ್ರ ಮೋದಿ ಪರ ಒಲವಿರುವ ಪ್ರತಿಯೊಬ್ಬರು ಇಲ್ಲಿಗೆ ಭೇಟಿ ನೀಡಬಹುದು ಎಂದು ಕಚೇರಿ ಮುಖ್ಯಸ್ಥ ನರೇಶ್ ಶೆಣೈ ವಿನಂತಿಸಿದ್ದಾರೆ. ಹನುಮಂತ ಕಾಮತ್, ಗೋಪಿನಾಥ್ ಭಟ್, ನರಸಿಂಹ ಶೆಣೈ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.