ರಾಷ್ಟ್ರೀಯ ಯುವ ದಿನ : ವಿವಿಧೆಡೆ ಉದಯವಾಣಿ ಸಹಭಾಗಿತ್ವದಲ್ಲಿ ಆಚರಣೆ
Team Udayavani, Jan 12, 2019, 4:42 AM IST
ಮಣಿಪಾಲ: ಸುವರ್ಣ ಸಂಭ್ರಮದಲ್ಲಿರುವ “ಉದಯವಾಣಿ’ಯು ವಿವಿಧ ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನ (ಜ.12)ದ ಪ್ರಯುಕ್ತ ರಾಷ್ಟ್ರೀಯ ಯುವ ದಿನವನ್ನು ಆಚರಿಸುತ್ತಿದೆ. ನಾಲ್ಕು ಕಡೆ ನಡೆಯುವ ಕಾರ್ಯಕ್ರಮಗಳಲ್ಲಿ ವಿದ್ವಾಂಸರು ಸ್ವಾಮಿ ವಿವೇಕಾನಂದರು ಮತ್ತು ಯುವಜಗತ್ತಿನ ಕುರಿತು ವಿಶೇಷ ಉಪನ್ಯಾಸಗಳನ್ನು ನೀಡುವರು.
ಮಂಗಳೂರು
ಕೊಡಿಯಾಲಬೈಲಿನ ಶಾರದಾ ಸಮೂಹ ಶಿಕ್ಷಣ ಸಂಸ್ಥೆಯ ಜ್ಞಾನ ಮಂದಿರದಲ್ಲಿ ಬೆಳಗ್ಗೆ 11 ಗಂಟೆಗೆ ಸಂಸ್ಥೆಯ ಸಂಚಾಲಕ ಎಂ.ಬಿ. ಪುರಾಣಿಕ್ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಯುವ ದಿನ ಆಚರಿಸಲಾಗುತ್ತಿದೆ. ಕುದ್ರೋಳಿ ನಾರಾಯಣ ಗುರು ಕಾಲೇಜಿನ ಕನ್ನಡ ಉಪನ್ಯಾಸಕ ಕೇಶವ ಬಂಗೇರ ಉಪನ್ಯಾಸ ನೀಡುವರು.
ಪುತ್ತೂರು
ಕೊಂಬೆಟ್ಟು ಶ್ರೀರಾಮಕೃಷ್ಣ ಪ್ರೌಢಶಾಲೆಯಲ್ಲಿ ಬೆಳಗ್ಗೆ 11ಕ್ಕೆ ಶಾಲಾ ಸಂಚಾಲಕ ಎ. ಹೇಮನಾಥ ಶೆಟ್ಟಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸವಣೂರು ಪ.ಪೂ. ಕಾಲೇಜಿನ ಉಪನ್ಯಾಸಕ ಬಿ.ವಿ. ಸೂರ್ಯನಾರಾಯಣ ಉಪನ್ಯಾಸ ನೀಡುವರು.
ಉಡುಪಿ
ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್‌ಮೆಂಟ್ ಕಾಲೇಜಿನಲ್ಲಿ ಬೆಳಗ್ಗೆ 11ಕ್ಕೆ ಮಣಿಪಾಲದ ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ ಪ್ರಾಧ್ಯಾಪಕ ಪ್ರೊ| ನಂದನ ಪ್ರಭು ಅವರು ವಿವೇಕಾನಂದರ ವಿಶೇಷ ಉಪ ನ್ಯಾಸ ನೀಡುವರು. ಆಡಳಿತ ಮಂಡಳಿ ಕಾರ್ಯ ದರ್ಶಿ ರತ್ನಕುಮಾರ್, ಪ್ರಾಂಶುಪಾಲ ಡಾ| ತಿರುಮಲೇಶ್ವರ ಭಟ್ ಪಾಲ್ಗೊಳ್ಳುವರು.
ಕುಂದಾಪುರ
ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಕಾಲೇಜಿನ ಆಶ್ರಯದಲ್ಲಿ 11.30ಕ್ಕೆ ವಿಶೇಷ ಉಪನ್ಯಾಸ ಕಾರ್ಯಕ್ರಮವಿದೆ. ಸಂಘಟಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಲಿದ್ದು, ಕಾಲೇಜಿನ ನಿರ್ದೇಶಕ ಪ್ರೊ| ದೋಮ ಚಂದ್ರಶೇಖರ್ ಅಧ್ಯಕ್ಷತೆ ವಹಿಸುವರು. ಸ್ವಾಮಿ ವಿವೇಕಾನಂದರು ಹಾಗೂ ಯುವ ಜಗತ್ತು ಕುರಿತಾಗಿ ಕೋಟೇಶ್ವರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ| ರಾಜೇಂದ್ರ ಎಸ್. ನಾಯಕ್ ಉಪನ್ಯಾಸ ನೀಡುವರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.