‘ಮಲಿನ ಮುಕ್ತ ಕಡಲಿಗೆ ಜಾಗೃತಿ ಅಗತ್ಯ’


Team Udayavani, Jun 14, 2018, 3:54 PM IST

14-june-13.jpg

ಸಸಿಹಿತ್ಲು: ಕರಾವಳಿ ಭಾಗದಲ್ಲಿ ಮಲಿನ ಮುಕ್ತ ಕಡಲನ್ನು ಕಾಣುವಂತಾಗಲು, ಪರಿಸರ ಇಲಾಖೆಯೊಂದಿಗೆ ಶಿಕ್ಷಣ ಸಂಸ್ಥೆಗಳು ಹಾಗೂ ಕೈಗಾರಿಕಾ ಸಿಬಂದಿ ಪರಸ್ಪರ ಕೈ ಜೋಡಿಸಿರುವುದರಿಂದ 13 ದಿನಗಳ ಈ ಅಭಿಯಾನ ಯಶಸ್ಸಾಗಿದೆ ಎಂದು ಪರಿಸರ ಇಲಾಖೆಯ ಕರಾವಳಿ ಪ್ರಾದೇಶಿಕ ನಿರ್ದೇಶಕ ಡಾ| ದಿನೇಶ್‌ ಕುಮಾರ್‌ ಹೇಳಿದರು.

ಸಸಿಹಿತ್ಲು ಕಡಲ ತೀರ ಹಾಗೂ ಶ್ರೀ ಭಗವತೀ ದೇವಸ್ಥಾನದ ಪರಿಸರದಲ್ಲಿ ಪರಿಸರ ಇಲಾಖೆ ಹಾಗೂ ಮೀನುಗಾರಿಕಾ ಇಲಾಖೆಯ ಸಹಯೋಗದಲ್ಲಿ ಸ್ಥಳೀಯ ಕೈಗಾರಿಕೆಗಳು ಹಾಗೂ ಶಿಕ್ಷಣ ಸಂಸ್ಥೆಯ ಸಹಕಾರದೊಂದಿಗೆ ಎಂಆರ್‌ಪಿಎಲ್‌ನ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ ಎಫ್‌)ಯ ಯೋಧರ ತಂಡ ಹಾಗೂ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ತಂಡಗಳೊಂದಿಗೆ ಬುಧವಾರ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿಶ್ವ ಪರಿಸರ ದಿನಾಚರಣೆಯ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ನಿರ್ದೇಶನದಂತೆ ವಿದ್ಯಾರ್ಥಿಗಳಿಗೆ ಯುವಜನರಿಗೆ ಹಾಗೂ ಸಾರ್ವಜನಿಕರಿಗೆ ಪರಿಸರದ ಬಗ್ಗೆ ಜಾಗೃತಿ ಹಾಗೂ ಸಮುದ್ರ ದಂಡೆಯಲ್ಲಿ ಶೇಖರಣೆಯಾಗುವ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ಬೀಚ್‌ ಸ್ವಚ್ಛಗೊಳಿಸುವ ಪ್ರಯತ್ನ ನಡೆಸಿದ್ದೇವೆ ಎಂದರು.

ಸ್ವಯಂ ಪ್ರೇರಣೆಯಿಂದ ಜಾಗೃತಿ
ಶ್ರೀನಿವಾಸ್‌ ಕಾಲೇಜ್‌ ಆಫ್‌ ಹೆಲ್ತ್‌ ಸೈನ್ಸ್‌ ವಿಭಾಗದ ಡೀನ್‌ ಡಾ| ರವಿ ಭಾಸ್ಕರ್‌ ಮಾತನಾಡಿ, ವಿದ್ಯಾರ್ಥಿಗಳು ಸ್ವಯಂ ಪ್ರೇರಣೆಯಿಂದ ಜಾಗೃತಿಗೊಳ್ಳಲು ಸಹಕಾರಿಯಾಗಿದೆ ಎಂದರು.

ಮೀನುಗಾರಿಕಾ ಉಪ ನಿರ್ದೇಶಕ ಮಹೇಶ್‌ ಕುಮಾರ್‌ ಸ್ವಚ್ಛತಾ ಅಭಿಯಾನದ ಬಗ್ಗೆ ಮಾಹಿತಿ ನೀಡಿ, ಎಂಆರ್‌ಪಿಎಲ್‌, ಮಂತ್ರಾ ಸರ್ಫ್‌ ಕ್ಲಬ್‌, ಸರ್ಫಿಂಗ್ ಸ್ವಾಮಿ ಫೌಂಡೇಶನ್‌, ಸ್ಟರ್ಲಿಂಗ್‌ ಫ‌ೂಡ್ಸ್‌, ಬಾವಾ ಫ‌ೂಡ್ಸ್‌ ಮುಕ್ಕ, ರಫ್ತಾರ್‌ ಫೂಡ್ಸ್‌ ಮತ್ತಿತರ ಕಂಪೆನಿಗಳ ಸಿಬಂದಿಯೊಂದಿಗೆ ಎಕ್ಸೆಲೆಂಟ್‌ ಸ್ಕೂಲ್‌ ಮೂಡಬಿದಿರೆ, ಶ್ರೀನಿವಾಸ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು, ಸುರತ್ಕಲ್‌ ಗೋವಿಂದದಾಸ ಕಾಲೇಜಿನ ವಿದ್ಯಾರ್ಥಿಗಳು ಸೇರಿಕೊಂಡು ಈ ಸ್ವಚ್ಛತೆಯನ್ನು ಮಾಡಲಾಗಿದೆ ಎಂದರು. ಪಣಂಬೂರು ಬೀಚ್‌ ಅಭಿವೃದ್ಧಿಯ ಯತೀಶ್‌ ಬೈಕಂಪಾಡಿ, ಹಳೆಯಂಗಡಿ ಗ್ರಾ.ಪಂ. ನ ಸದಸ್ಯರಾದ ಚಂದ್ರ ಕುಮಾರ್‌, ಅನಿಲ್‌ ಕುಮಾರ್‌ ಮೊದಲಾದವರು ಉಪಸ್ಥಿತರಿದ್ದರು.

ಬೃಹತ್‌ ತ್ಯಾಜ್ಯದ ಸ್ವಚ್ಛತೆ 
ಸುಮಾರು 500 ಮಂದಿಯ ತಂಡವು ಸಸಿಹಿತ್ಲು ಸಮುದ್ರ ತೀರದಲ್ಲಿದ್ದ ಪ್ಲಾಸ್ಟಿಕ್‌ ತ್ಯಾಜ್ಯ ವಸ್ತುಗಳು, ಚಪ್ಪಲಿಗಳು, ತಂಪು ಪಾನೀಯ, ಮದ್ಯದ, ಔಷಧ ಬಾಟಲಿಗಳು, ಕಸಕಡ್ಡಿಗಳು, ಮರದ ಗೆಲ್ಲುಗಳು, ಥರ್ಮಾಕೋಲ್‌ನಂತಹ ಮತ್ತಿತರ ತ್ಯಾಜ್ಯವನ್ನು ಸಂಗ್ರಹಿಸಲಾಯಿತು. ಇದನ್ನು ಮಹಾನಗರ ಪಾಲಿಕೆಯ ಮೂಲಕ ರವಾನಿಸಲಾಯಿತು.

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.