Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ
Team Udayavani, Apr 20, 2024, 3:01 PM IST
ಮಂಗಳೂರು: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯ ನಿರಂಜನ ಹಿರೇಮಠ ಪುತ್ರಿ ಹುಬ್ಬಳ್ಳಿ ಕಾಲೇಜಿನ ಎಂಸಿಎ ಪ್ರಥಮ ವರ್ಷದ ವಿದ್ಯಾರ್ಥಿನಿ ನೇಹಾಳ ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್ ಒತ್ತಾಯಿಸಿದೆ.
ಶನಿವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಶ್ವಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಮಾತನಾಡಿ, ಮತಾಂಧ ಫಯಾಜ್ 9 ಬಾರಿ ಇರಿದು ನೇಹಾಳನ್ನು ಕೊಲೆ ಮಾಡಿದ್ದಾನೆ. ಇದರಿಂದ ಭಯದ ವಾತಾವರಣ ನಿರ್ಮಾಣವಾಗಿದೆ. ಈ ಘಟನೆಯ ಹಿಂದೇ ಫಯಾಜ್‌ನ ಹಿಂದೆ ಆತನ ಸ್ನೇಹಿತರು, ಮುಸ್ಲಿಂ ಜಿಹಾದಿ ಸಂಘಟನೆಗಳ ಕೈವಾಡವಿರುವ ಶಂಕೆ ಇದೆ. ಇಂತಹ ಲವ್ ಜಿಹಾದ್ ಘಟನೆಗಳು ಹೆಚ್ಚುತ್ತಿವೆ. ಹಾಗಾಗಿ ಎನ್‌ಐಎ ತನಿಖೆಯಾಗಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ವಹಿಸಿಕೊಂಡ ಅನಂತರ ಹಿಂದೂಗಳ ಮೇಲೆ ಇಸ್ಲಾಮಿಕ್ ಆಕ್ರಮಣಗಳು ನಡೆಯುತ್ತಲೇ ಇದೆ. ಹಿಂದೂಗಳಲ್ಲಿ ಭಯ ಹುಟ್ಟಿಸಿ ರಾಜ್ಯವನ್ನು ಇಸ್ಲಾಮೀಕರಣಗೊಳಿಸಲು ಮೂಲಭೂತವಾದಿ ಗುಂಪುಗಳ ಸಂಚು ರೂಪಿಸುತ್ತಿವೆ. ಯುವತಿಯರ ಮೇಲೆ ದೌರ್ಜನ್ಯ ಹೆಚ್ಚಾಾಗುತ್ತಿದೆ ಎಂದರು.
ಕಿರುಕತ್ತಿಗೆ ಅವಕಾಶ:
ಪಂಜಾಬ್‌ನಲ್ಲಿ ಮಹಿಳೆಯರು ತಮ್ಮ ರಕ್ಷಣೆಗೆ ಧರಿಸುವ ಕಿರುಕತ್ತಿಯಂತೆ (ಕಿರ್ಪಣ್) ಕರ್ನಾಟಕದಲ್ಲಿಯೂ ಮಹಿಳೆಯರು ತಮ್ಮ ಆತ್ಮರಕ್ಷಣೆಗೆ ಕಿರುಕತ್ತಿ ಹೊಂದಲು ಕಾನೂನು ತರಬೇಕು. ಯುವತಿಯರ ಆತ್ಮರಕ್ಷಣೆಗೆ ತರಬೇತಿ ಶಿಬಿರ ಆಯೋಜಿಸಲು ಕ್ರಮ ಕೈಗೊಳ್ಳಬೇಕು ಎಂದು ಶರಣ್ ಪಂಪ್‌ವೆಲ್ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿಎಚ್‌ಪಿ ಪ್ರಾಂತ ಸಹಸಂಯೋಜಕ ಭುಜಂಗ ಕುಲಾಲ್, ಜಿಲ್ಲಾಧ್ಯಕ್ಷ ಎಚ್.ಕೆ.ಪುರುಷೋತ್ತಮ, ಬಜರಂಗದಳ ವಿಭಾಗ ಸಂಯೋಜಕ ಪುನೀತ್ ಅತ್ತಾವರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.