Bantwal ಸಂಚಾರ ಪೊಲೀಸ್‌ ಠಾಣೆ ನೂತನ ಕಟ್ಟಡ ಸಿದ್ಧ

3.18 ಕೋ.ರೂ. ವೆಚ್ಚ ಆವರಣ ಗೋಡೆ-ಇಂಟರ್‌ಲಾಕ್‌ ಕಾಮಗಾರಿಯಷ್ಟೇ ಬಾಕಿ

Team Udayavani, Aug 1, 2024, 10:39 AM IST

Screenshot (53)

ಬಂಟ್ವಾಳ: ಕಳೆದ 10 ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಗೆ ಕೊನೆಗೂ ಪಾಣೆಮಂಗಳೂರಿನಲ್ಲಿ ಸೂರು ನಿರ್ಮಾಣಗೊಂಡಿದ್ದು, ಸುಮಾರು 3.18 ಕೋ.ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಠಾಣಾ ಕಟ್ಟಡದ ಕಾಮಗಾರಿ ಬಹುತೇಕ ಪೂರ್ಣಗೊಂಡು ಆವರಣ ಗೋಡೆ-ಇಂಟರ್‌ಲಾಕ್‌ ಕಾಮಗಾರಿ ಬಾಕಿ ಇದೆ. ಬಂಟ್ವಾಳಕ್ಕೆ ಸಂಚಾರ ಪೊಲೀಸ್‌ ಠಾಣೆ ಮಂಜೂರಾದ ವರ್ಷದಿಂದಲೂ ಕಟ್ಟಡ ನಿರ್ಮಾಣಕ್ಕೆ ನಿವೇಶನ ಹುಡುಕಲು ಆರಂಭಿಸಲಾಗಿದ್ದು, ಆದರೆ ಸೂಕ್ತ ನಿವೇಶನ ಸಿಗದೆ ಠಾಣೆಯು ಬಾಡಿಗೆ ಕಟ್ಟಡಕ್ಕೆ ಸೀಮಿತವಾಗಿತ್ತು. ಗೂಡಿನಬಳಿಯ ಹಳೆ ಪಶು ಸಂಗೋಪನ ಇಲಾಖಾ ಕಟ್ಟಡದ ಜಾಗ ಠಾಣೆಗೆ ಮಂಜೂರಾದರೂ, ಅಲ್ಲಿ ಸೂಕ್ತ ಜಾಗವಿಲ್ಲದೆ ಕಟ್ಟಡ ನಿರ್ಮಾಣ ಸಾಧ್ಯವಾಗಿರಲಿಲ್ಲ.

ಬಳಿಕ 2023ರಲ್ಲಿ ಪಾಣೆಮಂಗಳೂರು ಗೂಡಿನಬಳಿ ಹಳೆ ಸೇತುವೆಯು ಸಮೀಪ ಸುಮಾರು 78 ಸೆಂಟ್ಸ್‌ ನಿವೇಶನವೊಂದನ್ನು ಠಾಣೆಗೆ ಅಂತಿಮಗೊಳಿಸಲಾಗಿತ್ತು.ಈ ನಡುವೆ ಮೆಲ್ಕಾರ್‌ ಸಮೀಪದ ಬೋಳಂಗಡಿ ಹೆದ್ದಾರಿ ಬದಿಯ ಬಾಡಿಗೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಸಂಚಾರ ಠಾಣೆಯು ಹೆದ್ದಾರಿ ಕಾಮಗಾರಿಯ ಕಾರಣಕ್ಕೆ ಮಾರ್ನಬೈಲಿನ ಬಾಡಿಗೆ ಕಟ್ಟಡಕ್ಕೆ ಸ್ಥಳಾಂತಗೊಂಡಿತ್ತು.

ಪ್ರಸ್ತುತ ನಿರ್ಮಾಣಗೊಂಡಿರುವ ಸಂಚಾರ ಠಾಣೆಯ ನೂತನ ಕಟ್ಟಡವು ತಾಲೂಕು ಕೇಂದ್ರ ಬಿ.ಸಿ.ರೋಡ್‌ ಹಾಗೂ ರಾಷ್ಟ್ರೀಯ ಹೆದ್ದಾರಿಗೆ ಅತೀ ಸಮೀಪದಲ್ಲಿದ್ದು, ಹೆದ್ದಾರಿಯ ಜತೆಗೆ ಹಳೆ ಸೇತುವೆಯ ಮೂಲಕ ಸಾಗಿದ ರಸ್ತೆಯಲ್ಲೂ ಠಾಣಾ ಕಟ್ಟಡವನ್ನು ಸಂಪರ್ಕಿಸಬಹುದಾಗಿದೆ. ಠಾಣೆಗೆ ಮಂಜೂರಾಗಿದ್ದ ನಿವೇಶನ ರಸ್ತೆಯಿಂದ ತಳ ಭಾಗದಲ್ಲಿದ್ದು, ಹೀಗಾಗಿ ಮೇಲಕ್ಕೆ ಪಿಲ್ಲರ್‌ಗಳನ್ನು ಎಬ್ಬಿಸಿ ರಸ್ತೆಗೆ ಸಮವಾಗಿ ಠಾಣಾ ಕಟ್ಟಡವನ್ನು ನಿರ್ಮಿಸಲಾಗಿದೆ. ಜತೆಗೆ ತಳ ಭಾಗವು ಪ್ರವಾಹದ ಸಂದರ್ಭ ನೀರು ನಿಲ್ಲುವ ಜಾಗವಾಗಿದೆ.

ಕರ್ನಾಟಕ ರಾಜ್ಯ ಪೊಲೀಸ್‌ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮವು ಕಟ್ಟಡ ಕಾಮಗಾರಿಯನ್ನು ನಿರ್ವಹಿಸಿದ್ದು, ಕಳೆದ ಎಪ್ರಿಲ್‌ 17ಕ್ಕೆ ಕಾಮಗಾರಿ ಆರಂಭಗೊಂಡಿತ್ತು. ಕಾಮಗಾರಿ ಮುಗಿಸಲು 11 ತಿಂಗಳ ಕಾಲಾವಕಾಶ ನೀಡಲಾಗಿತ್ತಾದರೂ, ಕೊಂಚ ವಿಳಂಬವಾದರೂ ಠಾಣಾ ಕಟ್ಟಡ ಸುಸಜ್ಜಿತವಾಗಿ ನಿರ್ಮಾಣಗೊಂಡಿದೆ.

ಒಟ್ಟು ಸುಮಾರು 4,035 ಚ.ಅಡಿ ವಿಸ್ತೀರ್ಣದಲ್ಲಿ ಠಾಣಾ ಕಟ್ಟಡ ನಿರ್ಮಾವಾಗಿದ್ದು, ತಳ ಭಾಗದಲ್ಲಿ ಪ್ರತ್ಯೇಕ ಶೌಚಾಲಯಗಳು, ನೆಲ ಅಂತಸ್ತಿನಲ್ಲಿ ಇನ್ಸ್‌ ಪೆಕ್ಟರ್‌ ಕೊಠಡಿ, 4 ಪಿಎಸ್‌ಐಗಳ ಕೊಠಡಿ, 1 ವಯರ್‌ಲೆಸ್‌ ಕೊಠಡಿ, 1 ವರ್ಕ್‌ ಸ್ಟೇಷನ್‌ ನಿರ್ಮಾಣವಾಗಿದೆ. ಪ್ರಥಮ ಮಹಡಿಯಲ್ಲಿ ಮಹಿಳಾ ಹಾಗೂ ಪುರುಷರ ಪ್ರತ್ಯೇಕ ರೆಸ್ಟ್‌ ರೂಮ್‌ಗಳು, ಸ್ಟೋರ್‌, ರೆಕಾರ್ಡ್‌ ರೂಮ್‌, ಪ್ರತ್ಯೇಕ ಶೌಚಾಲಯಗಳು ನಿರ್ಮಾಣವಾಗಿದೆ.

ಪ್ರಸ್ತುತ ಕಟ್ಟಡದ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಆವರಣ ಗೋಡೆ, ಇಂಟರ್‌ಲಾಕ್‌ ಅಳವಡಿಕೆಯ ಕಾಮಗಾರಿನಡೆಯಬೇಕಿದೆ. ಇಂಟರ್‌ಲಾಕ್‌ ಅಳವಡಿಕೆಗೆ ಮಳೆಕೊಂಚ ಅಡ್ಡಿಯಾಗಿದ್ದು, ಮಣ್ಣು ಸಿಂಕ್‌ ಆಗುವ ಆತಂಕ ಕಾಡುತ್ತಿದೆ. ಹೀಗಾಗಿ ಮಳೆ ಕೊಂಚ ಕಡಿಮೆಯಾಗಲು ಕಾಯಲಾಗುತ್ತಿದೆ ಎನ್ನಲಾಗಿದೆ.

ಆ. 15ರೊಳಗೆ ಉದ್ಘಾಟನೆ?
ಕಟ್ಟಡದ ಕಾಮಗಾರಿ ಪೂರ್ಣಗೊಂಡಿದ್ದು, ಉದ್ಘಾಟನೆಯ ದಿನಾಂಕ ಮುಂದೆ ಹೋಗುತ್ತಿದೆ ಎನ್ನಲಾಗಿದೆ. ಪೊಲೀಸ್‌ ಮೂಲಗಳ ಪ್ರಕಾರ ಆ. 15ರೊಳಗೆ ಕಟ್ಟಡಉದ್ಘಾಟನೆಗೊಳ್ಳುತ್ತದೆ ಎನ್ನಲಾಗಿದೆ. ಅದಕ್ಕಾಗಿ ಸಂಬಂಧಪಟ್ಟ ಸಚಿವರು – ಶಾಸಕರಗಳ ಅನುಮತಿ ಸಿಗಬೇಕಿದ್ದು, ಜತೆಗೆ ಹಿರಿಯ ಅಧಿಕಾರಿಗಳ ಸಮಯವನ್ನೂ ಹೊಂದಿಕೆ ಮಾಡಬೇಕಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.