ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ನಾಲ್ಕು ಕೋವಿಡ್-19 ಪ್ರಕರಣ ದೃಢ
Team Udayavani, Jun 1, 2020, 6:36 PM IST
ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ನಾಲ್ಕು ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. ಇದಿರಂದ ಜಿಲ್ಲೆಯ ಕೋವಿಡ್-19 ಸೋಂಕಿತರ ಸಂಖ್ಯೆ 137ಕ್ಕೆ ಏರಿಕೆಯಾಗಿದೆ.
ಇಂದಿನ ನಾಲ್ಕು ಸೋಂಕು ಪ್ರಕರಣಗಳ ಪೈಕಿ ಓರ್ವ ಗುಜರಾತ್ ನಿಂದ ಬಂದವರಾಗಿದ್ದು ಮತ್ತೊಬ್ಬರು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾದವರು. ಉಳಿದ ಇಬ್ಬರ ಸೋಂಕು ಮೂಲದ ಸಂಪರ್ಕ ಪತ್ತೆಹಚ್ಚಲಾಗುತ್ತಿದೆ.
45 ವರ್ಷದ ಮಹಿಳೆ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. 50 ವರ್ಷದ ಪುರುಷ ಗುಜರಾತ್ ರಾಜ್ಯದಿಂದ ಬಂದವರಾಗಿದ್ದಾರೆ. 24 ವರ್ಷದ ಯುವತಿ ಮತ್ತು 27 ವರ್ಷದ ಯುವಕನ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.
ರಾಜ್ಯದಲ್ಲಿ ಇಂದು ಹೊಸ 187 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3408ಕ್ಕೆ ಏರಿಕೆಯಾಗಿದೆ, ಇವರಲ್ಲಿ 1328 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 52 ಮಂದಿ ಸೋಂಕಿನ ಕಾರಣದಿಂದ ಮರಣ ಹೊಂದಿದ್ದು, ಇಬ್ಬರು ಕೋವಿಡ್ ಅಲ್ಲದ ಅನ್ಯ ಕಾರಣದಿಂದ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.