ಕೇರಳಿಗರಿಗೆ ಮಂಗಳೂರು ಪ್ರವೇಶ ನಿರ್ಬಂಧ : ಗಡಿಭಾಗ ತಲಪಾಡಿಯಲ್ಲಿ ಬಿಗುವಿನ ವಾತಾವರಣ
Team Udayavani, Jul 7, 2020, 11:29 AM IST
ಉಳ್ಳಾಲ: ಮಂಗಳೂರಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಕೇರಳ ಸರಕಾರ ಕೇರಳಿಗರಿಗೆ ಮಂಗಳೂರು ಪ್ರವೇಶ ನಿರ್ಬಂಧಿಸಿದ ಕಾರಣ ಪಾಸ್ ಹಿಡಿದು ದಿನನಿತ್ಯ ಕೆಲಸಕ್ಕೆ ಬರುತ್ತಿದ್ದವರನ್ನು ಕೇರಳ ಪೊಲೀಸರು ತಲಪಾಡಿಯಲ್ಲಿ ತಡೆಹಿಡಿದಿರುವುದು ಗೊಂದಲಕ್ಕೆ ಕಾರಣವಾಗಿದೆ.100 ಕ್ಕೂ ಅಧಿಕ ಮಂದಿ ಸ್ಥಳದಲ್ಲಿ ಜಮಾಯಿಸಿ ಪೊಲೀಸರ ಜತೆಗೆ ವಾಗ್ವಾದ ನಡೆಸಿದ್ದು, ಸ್ಥಳದಲ್ಲಿ ಬಿಗು ವಾತಾವರಣ ನಿರ್ಮಾಣ ಆಗಿದೆ.
ಜು.11 ರ ಅವಧಿವರೆಗೆ ದ.ಕ ಜಿಲ್ಲಾಡಳಿತ ನೀಡಿರುವ ಪಾಸ್ ಇದೆ. ಅಷ್ಟು ಸಮಯ ಬಿಡಬೇಕು ಎಂದು ಮಂಗಳೂರಿಗೆ ಬರುವ ಮಂದಿ ಕೇರಳ ಪೊಲೀಸರನ್ನು ಒತ್ತಾಯಿಸಿದ್ದಾರೆ. ಆದರೆ ಮಂಗಳೂರು ಬಂದ ಐದು ಮಂದಿಯಲ್ಲಿ ಕೋವಿಡ್ ಪತ್ತೆಯಾದ ಹಿನ್ನೆಲೆಯಲ್ಲಿ ಕೇರಳ ಸರಕಾರದ ಕಠಿಣ ಆದೇಶ ಇರುವುದರಿಂದ ಮಂಗಳೂರಿಗೆ ಹೋದಲ್ಲಿ ಅಲ್ಲಿಯೇ ಉಳಿದುಕೊಳ್ಳಿ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಇದರಿಂದ ಪೊಲೀಸರ ಹಾಗೂ ಜನರ ನಡುವೆ ವಾಗ್ವಾದ ನಡೆದಿದೆ. ಸ್ಥಳದಲ್ಲಿ ಬಿಗು ವಾತಾವರಣ ನಿರ್ಮಾಣ ಆಗಿದೆ. ಹೆಚ್ಚುವರಿ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ
Cyber Crime: ಸೈಬರ್ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ
Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್ ಗಾಂಧಿ
Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು
Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬೆಂಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.