Sanatana Dharma; ಯಾವ ಧರ್ಮವೂ ಬಿಕ್ಕಟ್ಟು ಮಾಡುವ ಸಂದೇಶ ನೀಡುವುದಿಲ್ಲ: ಯು.ಟಿ.ಖಾದರ್
Team Udayavani, Sep 8, 2023, 1:31 PM IST
ಮಂಗಳೂರು: ಎಲ್ಲಾ ಧರ್ಮಕ್ಕೂ ಅದರದ್ದೇ ಆದ ಮಹತ್ವವಿದೆ, ಗೌರವವಿದೆ. ಎಲ್ಲಾ ಧರ್ಮವೂ ಪ್ರೀತಿ ವಿಶ್ವಾಸ ಸಹೋದರತೆಯನ್ನು ತಿಳಿಸುತ್ತದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.
ಧರ್ಮಗಳ ಬಗ್ಗೆ ಅವಹೇಳನ ವಿಚಾರವಾಗಿ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಎಲ್ಲಾ ಧರ್ಮವೂ ಪ್ರೀತಿ ವಿಶ್ವಾಸ ಸಹೋದರತೆಯನ್ನು ತಿಳಿಸುತ್ತದೆ. ಇದನ್ನು ಹೊರತುಪಡಿಸಿ ದ್ವೇಷವನ್ನು ಎಲ್ಲಿಯೂ ತಿಳಿಸುವುದಿಲ್ಲ ಎಂದರು.
ಎಲ್ಲಾ ಧರ್ಮಗಳು ಸಮಾಜವನ್ನು ಒಗ್ಗಟ್ಟು ಮಾಡುವ ಸಂದೇಶ ಕೊಡುತ್ತದೆ ಹೊರತು ಯಾವ ಧರ್ಮವೂ ಬಿಕ್ಕಟ್ಟು ಮಾಡುವ ಸಂದೇಶ ನೀಡುವುದಿಲ್ಲ. ಮಾನವೀಯತೆ, ಕರುಣೆ, ಪ್ರೀತಿ ವಿಶ್ವಾಸ, ಸಹೋದರತೆ, ಕ್ಷಮೆ ಇದಕ್ಕೆ ಸೀಮಿತವಾಗಿರಬೇಕು ಎಂದು ಹೇಳಿದರು.
ನೆಮ್ಮದಿಯ ಜೀವನ ನಡೆಸುವ ಅವಕಾಶ ಎಲ್ಲಾ ಧರ್ಮಗಳು ಕೊಡುತ್ತದೆ. ಯಾರು ಏನು ಹೇಳಿಕೆ ನೀಡಿದ್ದಾರೆಂದು ಗೊತ್ತಿಲ್ಲ. ನಾವು ನಮ್ಮ ಧರ್ಮವನ್ನು ಅಚ್ಚುಕಟ್ಟಾಗಿ ಆಚರಿಸಿ ಇನ್ನಿತರ ಧರ್ಮವನ್ನು ಗೌರವಿಸಬೇಕು ಎಂದರು.
ಸರ್ವ ಜನರ ಪ್ರೀತಿಗೆ ಪಾತ್ರರಾಗಿ ದೇವರ ಪ್ರೀತಿಗೆ ಪಾತ್ರರಾಗಬೇಕು. ಒಂದಿಬ್ಬರು ಹೇಳುವ ಹೇಳಿಕೆಗೆ ಮಹತ್ವ ಕೊಡಬೇಕಿಲ್ಲ. ಒಗ್ಗಟ್ಟಿನ ಸಮಾಜ ನಿರ್ಮಾಣ ಆಗಬೇಕು. ಧರ್ಮದ ವಿಚಾರದಲ್ಲಿ ದ್ವೇಷ, ನೋವುಂಟು ಮಾಡಬಾರದು. ಪ್ರೀತಿ ಸಹೋದರತೆಯನ್ನು ಬೆಳೆಸಬೇಕು ಎಂದು ಹೇಳಿಕೆ ನೀಡಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.