ಕರಾವಳಿಗೆ ತಟ್ಟದ ಸಾರಿಗೆ ನೌಕರರ ಮುಷ್ಕರ ಬಿಸಿ: ಸರ್ಕಾರಿ ಬಸ್ ಗಳ ಸುಗಮ ಸಂಚಾರ
Team Udayavani, Dec 11, 2020, 9:21 AM IST
ಮಂಗಳೂರು: ಸಾರಿಗೆ ಸಂಸ್ಥೆಗಳ ನೌಕರರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸಲು ನಿರಾಕರಿಸಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ನಡೆಯುತ್ತಿರುವ ಸಾರಿಗೆ ನೌಕರರ ಪ್ರತಿಭಟನೆ ಪೆಟ್ಟು ದಕ್ಷಿಣ ಕನ್ನಡ ಜಿಲ್ಲೆಗೆ ತಟ್ಟಿಲ್ಲ.
ಮಂಗಳೂರು ಡಿಪೋದಿಂದ ಶುಕ್ರವಾರ ಬೆಳಗ್ಗೆಯಿಂದ ರಾಜ್ಯದ ವಿವಿಧ ಕಡೆಗಳಿಗೆ ಎಂದಿನಂತೆ ಬಸ್ ಗಳು ಕಾರ್ಯಾಚರಣೆ ನಡೆಸುತ್ತಿದೆ. ಸಾರಿಗೆ ನೌಕರರು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಉಳಿದಂತೆ ಪುತ್ತೂರು, ಉಡುಪಿ, ಕುಂದಾಪುರ ಕೇಂದ್ರಗಳಲ್ಲೂ ಬಸ್ ಸಂಚಾರ ವ್ಯತ್ಯಯವಾಗಿಲ್ಲ. ಸಾರಿಗೆ ಬಸ್ ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ.
ಇದನ್ನೂ ಓದಿ:ರಾಜ್ಯ ಸಾರಿಗೆ ನೌಕರರ ಮುಷ್ಕರ: ಬಸ್ ಬಂದ್, ಜನರ ಪರದಾಟ
ಸಾರಿಗೆ ನೌಕರರನ್ನು ಸರಕಾರಿ ನೌಕರರು ಎಂದು ಪರಿಗಣಿಸುವುದರ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ ಪ್ರತಿಭಟನೆ ನಡೆಸಿದ್ದ ಸಾರಿಗೆ ನೌಕರರು ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಷ್ಕರ ಹೂಡಿದ್ದಾರೆ.
ಗುರುವಾರ ಸಾವಿರಾರು ಸಂಖ್ಯೆಯಲ್ಲಿ ನೌಕರರು ವಿಧಾನಸೌಧ ಮುತ್ತಿಗೆಗೆ ಯತ್ನಿಸಿದರು. ಆದರೆ ಅವರನ್ನು ಅರ್ಧದಲ್ಲೇ ತಡೆದ ಪೊಲೀಸರು ಹಲವರನ್ನು ವಶಕ್ಕೆ ಪಡೆದರು. ಈ ನಡೆಯನ್ನು ಖಂಡಿಸಿ ಇಂದು ಮುಷ್ಕರಕ್ಕೆ ಕರೆ ನೀಡಲಾಗಿದೆ. ದಿಢೀರ್ ಮುಷ್ಕರದ ಮಾಹಿತಿ ಇಲ್ಲದ ಪ್ರಯಾಣಿಕರು ಪರದಾಡಿದ ಪರಿಸ್ಥಿತಿ ರಾಜ್ಯದ ಹಲವೆಡೆ ಕಂಡುಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.