ಬಾವಿಯಲ್ಲಿ ತೈಲ: ಪೆಟ್ರೋಲ್ ಬಂಕ್ ಸೋರಿಕೆಯಲ್ಲ
Team Udayavani, Nov 10, 2018, 10:09 AM IST
ಉಳ್ಳಾಲ: ಬೆಳ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ದೇರಳಕಟ್ಟೆ ಕಾನಕೆರೆ ಬಾವಿಯಲ್ಲಿ ತೈಲದ ಅಂಶ ಪತ್ತೆ ಹಿನ್ನೆಲೆಯಲ್ಲಿ ಪಕ್ಕದ ಪೆಟ್ರೋಲ್ ಬಂಕನ್ನು ಇಲಾಖೆಯ ಅಧಿಕಾರಿಗಳು ಸಮಗ್ರ ತಪಾಸಣೆ ಮಾಡಿದ್ದು ಬಂಕ್‌ನಿಂದ ಯಾವುದೇ ಸೋರಿಕೆ ಇಲ್ಲ ಎಂದು ದೃಢಪಡಿಸಿದ್ದಾರೆ. ಪರಿಸರ ಇಲಾಖೆ ಅಧಿಕಾರಿ ಜಯಪ್ರಕಾಶ್ ನಾಯಕ್ ನೇತೃತ್ವದ ತಂಡವು ಬಾವಿಯಲ್ಲಿರುವ ತೈಲದ ಮೂಲ ಪತ್ತೆಗಾಗಿ ನೀರನ್ನು ಕೊಂಡೊಯ್ದಿದ್ದಾರೆ. ನೀರನ್ನು ಎಂಆರ್‌ಪಿಎಲ್ ಲ್ಯಾಬ್‌ಗ ಕಳುಹಿಸಲಾಗಿದ್ದು, ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಕಾನಕೆರೆಯ ಬಾವಿಗಳಲ್ಲಿ ತೈಲದ ಅಂಶ ಕಂಡುಬರುತ್ತಿದೆ. ಸ್ಥಳೀಯ ಪೆಟ್ರೋಲ್ ಬಂಕ್‌ನಿಂದ ಸೋರಿಕೆಯಾಗುತ್ತಿರುವುದೇ ಇದಕ್ಕೆ ಕಾರಣ ಎಂದು ಸ್ಥಳೀಯರು ವಾದಿಸಿದ್ದರು. ಈ ನಿಟ್ಟಿನಲ್ಲಿ ಐಒಸಿಎಲ್ ಅಧಿಕಾರಿಗಳು, ಪರಿಸರ ಇಲಾಖೆಯ ತಜ್ಞರು ಸ್ಥಳೀಯ ಗ್ರಾ.ಪಂ. ಅಧಿಕಾರಿಗಳ ಸಮ್ಮುಖದಲ್ಲಿ ಗುರುವಾರ ಬಂಕ್‌ನ ವ್ಯವಹಾರ ಸ್ಥಗಿತಗೊಳಿಸಿ ಪರಿಶೀಲನೆ ನಡೆಸಿದರು.
ತ್ಯಾಜ್ಯ ನೀರಿನ ಸಮಸ್ಯೆ
ದೇರಳಕಟ್ಟೆ ಪರಿಸರದಲ್ಲಿ ಬಹುಮಹಡಿ ಕಟ್ಟಡಗಳು ಸೇರಿಂದಂತೆ ಮೊರಾರ್ಜಿ ದೇಸಾಯಿ ಶಾಲೆ ಖಾಸಗಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದು, ಇದರಿಂದ ಬರುವ ಮಲಿನ ನೀರಿನಿಂದ ಕಾನಕೆರೆ ಪರಿಸರದಲ್ಲಿ ತೈಲ ಅಂಶ ಉತ್ಪತ್ತಿಯಾಗಿರಬಹುದು ಎಂದೂ ಸ್ಥಳೀಯರು ವಾದಿಸುತ್ತಿದ್ದು, ಸ್ಥಳೀಯಾಡಳಿತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
MUST WATCH
ಹೊಸ ಸೇರ್ಪಡೆ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.