![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Sep 8, 2023, 6:40 PM IST
ಮಂಗಳೂರು: ಸಾರ್ವಜನಿಕರು, ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಎಂಡಿಎಂಎ ಮಾದಕ ವಸ್ತು ಅಕ್ರಮವಾಗಿ ತರುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಗುರುವಾರ ಬೆಳಗ್ಗೆ ಬಂಧಿಸಿದ್ದಾರೆ.
ಕೊಣಾಜೆ ಕಡೆಯಿಂದ ನಂತೂರು, ಕೊಟ್ಟಾರ ಚೌಕಿ ಮಾರ್ಗವಾಗಿ ಆಲ್ಟೋ ಕಾರಿನಲ್ಲಿ ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಬಂದು ಮಂಗಳೂರಿನ ಅಶೋಕನಗರದ ಕಾಲೇಜು ಪರಿಸರದಲ್ಲಿ ಮಾರಾಟ ಮಾಡಲು ತರುತ್ತಿದ್ದ ದೇರಳಕಟ್ಟೆ ಯೆನಪೊಯ ಆಸ್ಪತ್ರೆ ಸಮೀಪದ ಮದನಿ ನಗರ ನಿವಾಸಿ ಫರಾಜ್(26) ಎಂಬಾತನನ್ನು ಬಂಧಿಸಲಾಗಿದೆ. ಬೋಳೂರು ಗ್ರಾಮದ ಈರಿ ಎಂಬಲ್ಲಿ ಕಾರನ್ನು ಅಡ್ಡಗಟ್ಟಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಅಲ್ಲದೆ ಆರೋಪಿಯಿಂದ 11.43 ಗ್ರಾಂ ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ -1 ಸೇರಿದಂತೆ 15 ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.