Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
ಕಟ್ಟಡದ ಗೋಪುರದ ಮೇಲೆ ಅಳವಡಿಕೆ: ಎರಡನೇ ಹಂತದ ಕಾಮಗಾರಿಗೆ ವೇಗ
Team Udayavani, Dec 26, 2024, 1:33 PM IST
ಪಡೀಲ್: ನಗರದ ಪಡೀಲ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ನೂತನ ಜಿಲ್ಲಾಧಿಕಾರಿ ಕಚೇರಿಯ ಗೋಪುರಾಕೃತಿಯ ಮೇಲೆ ‘ರಾಷ್ಟ್ರ ಲಾಂಛನ’ ವನ್ನು ಅಳವಡಿಕೆ ಕಾರ್ಯನಡೆದಿದೆ. ಇದರಿಂದಾಗಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಘಾಟನೆ ಸಮೀಪಿಸುತ್ತಿರುವ ನಿರೀಕ್ಷೆ ಮೂಡಿಸಿದೆ.
ಪಾರಂಪರಿಕ ಶೈಲಿಯ ಕಟ್ಟಡದ ಮೇಲಿರುವ ಗೋಪುರ ಮಾದರಿಯಲ್ಲಿ ‘ಚಿನ್ನದ ಬಣ್ಣ’ದ ರಾಷ್ಟ್ರ ಲಾಂಛನವನ್ನು ಬೃಹತ್ ಕ್ರೇನ್ ಮೂಲಕ ಅಳವಡಿ ಮಾಡಲಾಗಿದೆ. ಈಗಾಗಲೇ ಕಚೇರಿ ಮುಂಭಾಗದಲ್ಲಿ ರಾಷ್ಟ್ರ ಧ್ವಜಾರೋಹಣಕ್ಕಾಗಿ ಧ್ವಜಸ್ತಂಭದ ನಿರ್ಮಾಣವನ್ನೂ ಮಾಡಲಾಗಿದೆ.
ಸ್ಮಾರ್ಟ್ ಸಿಟಿಯಿಂದ ದ್ವಿತೀಯ ಹಂತದ ಕಾಮಗಾರಿ
ಪ್ರಸ್ತುತ ಕಾಮಗಾರಿ ಭರದಿಂದ ಸಾಗಿದೆ. ಎರಡನೇ ಹಂತದ ಕಾಮಗಾರಿಯನ್ನು ಮಂಗಳೂರು ಸ್ಮಾರ್ಟ್ ಸಿಟಿ ಲಿ. ಮೂಲಕ ಕೈಗೊಳ್ಳಲಾಗುತ್ತಿದೆ. ಸಂಕೀರ್ಣದ ಹೊರಾಂಗಣ, ಸುಸಜ್ಜಿತ ಆವರಣ ಗೋಡೆ, ಫರ್ನೀಚರ್‌ಗಳು, ಫ್ಲೋರಿಂಗ್, ಡಿಸಿ ಕಚೇರಿಗೆ ಸಂಬಂಧಿಸಿದ ಪೀಠೊಪಕರಣಗಳು, ಸಭಾಂಗಣದ ವಿನ್ಯಾಸ, ಪೈಂಟಿಂಗ್, ಎಲೆಕ್ಟ್ರಿಕಲ್- ಕೇಬಲ್ ನೆಟ್‌ವರ್ಕ್ ಸೇರಿದಂತೆ ಸುಮಾರು 10 -15 ವಿವಿಧ ರೀತಿಯ ಕೆಲಸಗಳನ್ನು ಕೈಗೊಳ್ಳಲಾಗುತ್ತಿದೆ. ಸುಮಾರು 15 ಕೊ.ರೂ. ವೆಚ್ಚದಲ್ಲಿ ಈ ಕಾಮಗಾರಿಗಳು ನಡೆಯುತ್ತಿದೆ.
ಹೇಗಿರಲಿದೆ ಜಿಲ್ಲಾಧಿಕಾರಿ ಕಚೇರಿ
ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಮೂರು ಮಹಡಿಗಳ ಕಟ್ಟಡ. 2.26 ಲಕ್ಷ ಚ. ಅಡಿಯ ಕಟ್ಟಡದಲ್ಲಿ ಕಂದಾಯ ಹಾಗೂ ಇತರ 38 ಇಲಾಖೆಗಳ ಕಚೇರಿಗಳು ಇರಲಿವೆ. ನೆಲ ಅಂತಸ್ತಿನಲ್ಲಿ 400 ಮಂದಿ ಸಾಮರ್ಥ್ಯದ ಬೃಹತ್ ಸಭಾಂಗಣ, 2ನೇ ಮಹಡಿಯಲ್ಲಿ ಎರಡು ಮೀಟಿಂಗ್ ಹಾಲ್, ಮಿನಿ ಸಭಾಂಗಣ, ಜಿಲ್ಲಾಧಿಕಾರಿ ಕೋರ್ಟ್ ಹಾಲ್, ಸಚಿವರು, ಸಂಸದರು, ಶಾಸಕರ ಕಚೇರಿ, ಕ್ಯಾಂಟಿನ್ ಮತ್ತಿತರ ಸೌಲಭ್ಯ. ತಳ ಅಂತಸ್ತಿನಲ್ಲಿ 50 ಕಾರು, 100ಕ್ಕೂ ಅಧಿಕ ದ್ವಿಚಕ್ರ ವಾಹನ ಪಾರ್ಕಿಂಗ್, ಕಟ್ಟಡದ ಸುತ್ತಲೂ 70 ಕಾರು ಪಾರ್ಕಿಂಗ್ ವ್ಯವಸ್ಥೆಯನ್ನು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಒಳಗೊಂಡಿದೆ.
ಪಡೀಲ್‌ನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಸುಮಾರು ಶೇ.80ರಷ್ಟು ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ನಿರೀಕ್ಷಿತ ವೇಗದಲ್ಲಿ ಕಾಮಗಾರಿ ನಡೆದರೆ ಮುಂದಿನ ಮೂರು ತಿಂಗಳೊಳಗೆ ಪೂರ್ಣಗೊಳ್ಳಲಿದೆ.
-ಡಾ| ಸಂತೋಷ್ ಕುಮಾರ್, ಅಪರ ಜಿಲ್ಲಾಧಿಕಾರಿ, ದ.ಕ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.