Panambur: ಮಾದಕ ವಸ್ತು ಸಾಗಾಟ-ಮಾರಾಟ ಪ್ರಕರಣ; ವಿದೇಶಿ ಪ್ರಜೆ ಸೇರಿ 6 ಆರೋಪಿಗಳ ಸೆರೆ
Team Udayavani, Oct 28, 2024, 8:25 PM IST
ಪಣಂಬೂರು: ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಣಿಜ್ಯ ಪ್ರಮಾಣದ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ 6 ಮಂದಿ ಆರೋಪಿಗಳನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ 11 ಗ್ರಾಂ ಕೊಕೇನ್,30 ಗ್ರಾಂ ಎಂಡಿಎಂ ಸಹಿತ 91 ಸಾವಿರ ರೂ. ಮೌಲ್ಯದ ಮಾದಕ ವಸ್ತುಗಳನ್ನು ಮತ್ತು ಸ್ಕೂಟರ್, 9 ಮೊಬೈಲ್ ಸ್ವಾಧೀನ ಪಡಿಸಿಕೊಂಡಿದ್ದಾರೆ.
ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೆಐಓಸಿಎಲ್ ತಣ್ಣೀರುಬಾವಿ ಮಾರ್ಗದಲ್ಲಿ ಇಬ್ಬರು ಯುವಕರು ಸ್ಕೂಟರ್ ನಿಲ್ಲಿಸಿಕೊಂಡು ಮಾದಕ ವಸ್ತು ವಶದಲ್ಲಿ ಹೊಂದಿ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳಾದ ಚಂದನ್, ಶರತ್, ಮಾದಕ ವಸ್ತು ಮಾರಾಟ ಮಾಡಲು ಸಹಕರಿಸಿದ ಇತರ ಆರೋಪಿಗಳಾದ ಮಧುಸೂಧನ ಕೊಂಚಾಡಿ ,ಧನುಷ್ ಆಕಾಶ್ ಭವನ, ಮುಖೇಶ್ ದೇರೆಬೈಲ್ ,ನೈಜಿರಿಯಾ ದೇಶದ ಪ್ರಜೆ ಮೈಕಲ್ ಬಾಲಾಜಿ ಅಝಬೈಕ್ ಜಾನಿ ಎಂಬವರನ್ನು ಬಂಧಿಸಲಾಗಿದೆ.
ಆರೋಪಿಗಳು ಕ್ಯಾಟರಿಂಗ್, ಪೈಂಟಿಂಗ್ ಸೇರಿದಂತೆ ಖಾಸಗಿ ಕೆಲಸ ಮಾಡಿಕೊಂಡಿದ್ದು, ಹೆಚ್ಚು ಹಣ ಮಾಡುವ ಉದ್ದೇಶದಿಂದ ಮಾದಕ ವಸ್ತು ಮಾರಾಟ ದಂದೆ ಮಾಡುತ್ತಿದ್ದರು. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪಣಂಬೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.