Panambur: ಬಾಟಲಿ, ಪೊಟ್ಟಣ ಎಸೆಯಲು ಬೀಚ್‌ನಲ್ಲಿ ಕಿಯೋಸ್ಕ್ ಇಂದು ಉದ್ಘಾಟನೆ
ಪಣಂಬೂರು ಕಡಲತೀರ ಪ್ಲಾಸ್ಟಿಕ್ ಮುಕ್ತ
Team Udayavani, Aug 30, 2024, 5:41 PM IST
ಪಣಂಬೂರು: ಮಂಗಳೂರಿನ ಪಣಂಬೂರು ಬೀಚ್ ಪ್ರದೇಶದ ಸ್ವತ್ಛ ಬೀಚ್‌ಗಳಲ್ಲಿ ಒಂದು ಎಂಬ ಖ್ಯಾತಿ ಹೊಂದಿದೆ. ಆದರೂ ಇಲ್ಲಿ ವರ್ಷಕ್ಕೆ ಹಲವಾರು ಟನ್ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆಯಾಗುತ್ತದೆ. ಅಂತಾರಾಷ್ಟ್ರೀಯ ಖ್ಯಾತಿಯ ಬೀಚನ್ನು ಸಂಪೂರ್ಣ ಪ್ಲಾಸ್ಟಿಕ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಹೊಸ ಪ್ರಯತ್ನವೊಂದು ನಡೆದಿದೆ.
ಪ್ರವಾಸಿಗರು ತರುವ ನೀರಿನ ಬಾಟಲಿ, ತಿಂಡಿಯ ಪ್ಲಾಸ್ಟಿಕ್ ಪೊಟ್ಟಣಗಳು, ಪ್ಲಾಸ್ಟಿಕ್ ಬ್ಯಾಗ್ ಮತ್ತಿತರ ವಸ್ತುಗಳನ್ನು ಬೇಕಾಬಿಟ್ಟಿ ಎಸೆಯದೆ ಅದನ್ನು ಸರಿಯಾದ ಜಾಗದಲ್ಲಿ ಸಂಗ್ರಹಿಸುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ಸಂಗ್ರಹ ಕಿಯೋಸ್ಕ್ ಕೇಂದ್ರವೊಂದನ್ನು ನಿರ್ಮಿಸಲಾಗಿದೆ. ಬೈಕಂಪಾಡಿಯ ಕೆನರಾ ಪ್ಲಾಸ್ಟಿಕ್ ಉತ್ಪಾದಕರ ಅಸೋಸಿಯೇಶನ್ ಆಂದಾಜು 2.50 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿಕೊಟ್ಟಿದೆ. ಇದರ ಮೇಲ್ವಿಚಾರಣೆಗೆ ಒಬ್ಬ ಸಿಬಂದಿ ನೇಮಕವಾಗಿದೆ.
ಪ್ರವಾಸಿಗರು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಕಿಯೋಸ್ಕ್ಗೆ ತಂದು ಹಾಕುವಂತೆ ಪ್ರೇರೇಪಿಸುವುದು, ಸಂಗ್ರಹವಾಗುವ ಪ್ಲಾಸ್ಟಿಕ್ ವಿಲೇವಾರಿಯ ಬಗ್ಗೆ ಸೂಕ್ತ ಯೋಜನೆ ರೂಪಿಸಲಾಗಿದೆ. ಜಿಲ್ಲಾಧಿಕಾರಿಗಳ ನಿರ್ದೆಶನದಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರವಾಸೋದ್ಯಮ ಇಲಾಖೆ, ಬೀಚ್ ನಿರ್ವಹಣೆ ಸಮಿತಿ, ಪಾಲಿಕೆ ಆಡಳಿತ ಸಹಿತ ಎಲ್ಲರೂ ಇದಕ್ಕೆ ಕೈಜೋಡಿಸಿದ್ದಾರೆ.
ಸಮುದ್ರ ತೀರದಲ್ಲಿ ಬರುವ ಜನರು ಬಳಸಿದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಿ ಮರುಬಳಕೆ ಮಾಡುವ ತಾಂತ್ರಿಕ ಘಟಕಕ್ಕೆ ಕಳುಹಿಸುವ ಪ್ರಕ್ರಿಯೆ ನಡೆಸಲಾಗುತ್ತದೆ.
ಸೂಕ್ತ ವ್ಯವಸ್ಥೆಗಳು ಇರಲಿಲ್ಲ
ಪಣಂಬೂರು ಬೀಚ್‌ನಲ್ಲಿ ರಜಾ ದಿನ, ವಾರಾಂತ್ಯಗಳಲ್ಲಿ ಕನಿಷ್ಠ ನೂರು ಕೆಜಿ ಕೇವಲ ಪ್ಲಾಸ್ಟಿಕ್ ಪೊಟ್ಟಣಗಳು, ಬಾಟಲಿ, ಕೈ ಚೀಲ ಸಂಗ್ರಹವಾಗುತ್ರವೆ, ಇದನ್ನು ಪ್ರತ್ಯೇಕಿಸಿ ಹಾಕಲು ವ್ಯವಸ್ಥೆಗಳಿರಲಿಲ್ಲ.
ಬೀಚ್ ಪ್ರವಾಸೋದ್ಯಮ ವಿಭಾಗಕ್ಕೆ ಸೇರಿದ್ದರೂ ತ್ಯಾಜ್ಯ ವಿಲೇವಾರಿ ಮಾಡುವ ಜವಾಬ್ದಾರಿ ಪಾಲಿಕೆಯದ್ದು. ಪಾಲಿಕೆಯು ಸ್ಥಳೀಯ ವ್ಯಾಪಾರಿಗಳಲ್ಲಿ ಒಡಂಬಡಿಕೆ ಮಾಡಿಕೊಂಡು ಪ್ಲಾಸ್ಟಿಕ್ ಸಹಿತ ತ್ಯಾಜ್ಯವನ್ನು ವಿಲೇವಾರಿ ಮಾಡುತ್ತಿತ್ತು.
ಪಣಂಬೂರು ಬೀಚ್‌ನ್ನು ಕಳೆದ ಹತ್ತು ವರ್ಷದ ಹಿಂದೆಯೇ ಪ್ಲಾಸ್ಟಿಕ್ ಮುಕ್ತ ಎಂದು ಘೋಷಣೆ ಮಾಡಲಾಗಿದೆಯಾದರೂ ಇದುವೆರಗೂ ಸಂಪೂರ್ಣ ನಿಯಂತ್ರಣ ಸಾಧ್ಯವಾಗಿಲ್ಲ.
ಇಂದು ಸಚಿವರಿಂದ ಚಾಲನೆ
ಪಣಂಬೂರು ಬೀಚಲ್ಲಿ ಪ್ಲಾಸ್ಟಿಕ್ ಸಂಗ್ರಹ ಕೇಂದ್ರವನ್ನು ಸ್ಥಾಪಿಸಲಾಗಿದೆ. ಸಮುದ್ರ ದಡಕ್ಕೆ ಪ್ಲಾಸ್ಟಿಕ್ ಬಾಟಲಿಗಳನ್ನು ಒಯ್ಯದೆ, ಈ ಘಟಕದಲ್ಲಿ ಹಾಕಿ ಸ್ವತ್ಛತೆಗೆ ಕೈ ಜೋಡಿಸಬೇಕು. ಇದಕ್ಕೆ ಅಧಿಕೃತವಾಗಿ ಆ. 30ರಂದು ಉಸ್ತುವಾರಿ ಸಚಿವ ಗುಂಡೂರಾವ್ ಅವರು ಚಾಲನೆ ನೀಡಲಿದ್ದಾರೆ ಎಂದು ಸಿಪಿಎಂಟಿಎ ಅಧ್ಯಕ್ಷ ಬಿ.ಎ. ನಝೀರ್ ತಿಳಿಸಿದ್ದಾರೆ.
-ಲಕ್ಷ್ಮೀನಾರಾಯಣ ರಾವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.