ಪಾಂಡವರಕಲ್ಲು: ಬ್ರಹ್ಮಬೈದರ್ಕಳ ಗರೋಡಿಯೊಳಗೆ ಗಾಜಿನ ಚೂರು ಹಾಕಿ ಕಿಡಿಗೇಡಿಗಳಿಂದ ದುಷ್ಕೃತ್ಯ
Team Udayavani, May 15, 2021, 9:03 AM IST
ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಬಡಗಕಜೆಕಾರು ಗ್ರಾ.ಪಂ. ವ್ಯಾಪ್ತಿಯ ಪಾಂಡವರಕಲ್ಲು ಶ್ರೀ ಬ್ರಹ್ಮ ಬೈದರ್ಕಳ ಗರೋಡಿಯ ಅಂಗಣಕ್ಕೆ ದುಷ್ಕರ್ಮಿಗಳು ಗಾಜಿನ ಬಾಟಲ್ ಒಡೆದು, ಗಾಜಿನ ಚೂರುಗಳನ್ನು ಹಾಕಿ ದುಷ್ಕೃತ್ಯ ರೆದಿರುವ ಘಟನೆ ಮೇ 14 ರಂದು ನಡೆದಿದೆ.
ಘಟನೆ ಮೇ 14 ರಂದು ರಾತ್ರಿ ಸಾರ್ವಜನಿಕರ ಗಮನಕ್ಕೆ ಬಂದಿದ್ದು,ಕಿಡಿಗೇಡಿಗಳ ಈ ದುಷ್ಕೃತ್ಯವನ್ನು ಖಂಡಿಸಿದ್ದಾರೆ. ಪವಿತ್ರ ಧಾರ್ಮಿಕ ಕ್ಷೇತ್ರವಾಗಿರುವ ಪಾಂಡವರಕಲ್ಲು ಗರಡಿ ಕ್ಷೇತ್ರ ಪುರಾತನ ಇತಿಹಾಸವುಳ್ಳ ಕ್ಷೇತ್ರವಾಗಿದೆ. ಇದು ಹಿಂದೂ ಧರ್ಮಿಯರ ಮಾತ್ರವಲ್ಲದೆ ಅನ್ಯಧರ್ಮಿಯರ ನಂಬಿಕೆಯ ಕ್ಷೇತ್ರವಾಗಿದೆ. ಇಲ್ಲಿನ ಕಾರಣಿಕ ಕೇವಲ ಬಾಯಿ ಮಾತಿನಲ್ಲಿ ಮಾತ್ರವಲ್ಲದೆ ಇದನ್ನು ಕಣ್ಣಾರೆ ಕಂಡ ಅನೇಕ ಸಾಕ್ಷಿಗಳಿವೆ.
ಇಂತಹ ಕಾರಣಿಕದ ಕ್ಷೇತ್ರದೊಳಗೆ ಶ್ರೀ ಕೊಡಮಣಿತ್ತಾಯ , ಶ್ರೀ ಪಿಲಿಚಾಮುಂಡಿ ಮತ್ತು ಬ್ರಹ್ಮಬೈದೆರ್ಕಳ ದೈವಸ್ಥಾನವಿದ್ದು ಅದರ ಸುತ್ತಲೂ ಕಿಡಿಗೇಡಿಗಳು ಸುಮಾರು 20ಕ್ಕೂಅಧಿಕ ಗಾಜಿನ ಬಾಟಲಿಗಳನ್ನು ಚೂರುಚೂರಾಗುವಂತೆ ಒಡೆದು ಹಾಕಿ ಗರಡಿಯೊಳಗೆ ಯಾರಿಗೂ ನಡೆದಾಡದಂತೆ ದುಷ್ಕೃತ್ಯ ನಡೆಸಿದ್ದಾರೆ.
ಇದನ್ನೂ ಓದಿ:ಅಹಂನಲ್ಲಿದ್ದ ಪ್ರಧಾನಿಗೆ ಕೋವಿಡ್ 2ನೇ ಅಲೆ ತಕ್ಕ ಪಾಠ ಕಲಿಸಿದೆ: ಡಾ. ಪುಷ್ಪಾ ಅಮರ್‌ನಾಥ್
ಶನಿವಾರ (ಮೇ 15) ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ನೀಡಲಾಗುತ್ತಿದ್ದು, ದುಷ್ಕೃತ್ಯ ಮೆರೆದ ಕಿಡಿಗೇಡಿಗಳನ್ನು ಕಾರಣಿಕ ದೈವಗಳಾದ ಕೊಡಮಣಿತ್ತಾಯ ಬ್ರಹ್ಮಬೈದೆರ್ಲು ಶೀಘ್ರವಾಗಿ ಸಾರ್ವಜನಿಕವಾಗಿ ತೋರಿಸಿ ಕೊಡಬೇಕು ಎಂದು ಸಮಸ್ತ ಹಿಂದು ಸಮಾಜದ ಪರವಾಗಿ ಸಮಿತಿ ಮೇ 16 ರಂದು ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಗುತ್ತದೆ ಎಂದು ಸಮಿತಿ ತಿಳಿಸಿದೆ. ಘಟನೆಯನ್ನು ಹಿಂದೂ ಜಾಗರಣ ವೇದಿಕೆ ಮತ್ತಿತರ ಹಿಂದೂ ಸಂಘಟನೆಗಳು ಖಂಡಿಸಿದೆ.
ಇದನ್ನೂ ಓದಿ: ಇಸ್ರೇಲ್-ಪ್ಯಾಲೆಸ್ಟೈನ್ ಸಂಘರ್ಷ ತಾರಕಕ್ಕೆ; ಗಾಜಾದಲ್ಲಿ ಸಾವಿನ ಸಂಖ್ಯೆ 132ಕ್ಕೆ ಏರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್ ಗಂಡು ಸಿಂಹ’ ಆಗಮನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.