ವಾರ್ಡ್‌ಗೊಂದು ಪಾರ್ಕ್‌ ಅನುಷ್ಠಾನ; ಮಹಾನಗರ ಪಾಲಿಕೆಯಿಂದ ನಗರದಲ್ಲಿ ವಿನೂತನ ಯೋಜನೆ

ಮಹಾನಗರ ಪಾಲಿಕೆಯಿಂದ ನಗರದಲ್ಲಿ ವಿನೂತನ ಯೋಜನೆ

Team Udayavani, Oct 3, 2020, 6:00 AM IST

ವಾರ್ಡ್‌ಗೊಂದು ಪಾರ್ಕ್‌ ಅನುಷ್ಠಾನ; ಮಹಾನಗರ ಪಾಲಿಕೆಯಿಂದ ನಗರದಲ್ಲಿ ವಿನೂತನ ಯೋಜನೆ

ಮಹಾನಗರ: ನಗರದ ಸೌಂದರ್ಯದ ಜತೆಗೆ ಸಾರ್ವಜನಿಕರಿಗೆ ವಾಯುವಿಹಾರಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ “ವಾರ್ಡ್‌ಗೊಂದು ಪಾರ್ಕ್‌’ ಎಂಬ ವಿನೂತನ ಯೋಜನೆಯ ಅನುಷ್ಠಾನಕ್ಕೆ ಮಂಗಳೂರು ಮಹಾನಗರ ಪಾಲಿಕೆ ಇದೀಗ ಮುಂದಾಗಿದೆ.

ಮೊದಲ ಹಂತದಲ್ಲಿ ನಗರದ ಐದು ವಾರ್ಡ್‌ಗಳಲ್ಲಿ ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ನಿರ್ಧರಿ ಸಲಾಗಿದೆ. ಪಾಲಿಕೆ ನಿಧಿ, ಸ್ಮಾರ್ಟ್‌ ಸಿಟಿ ಅಥವಾ ಪಿಪಿಪಿ ಮಾಡೆಲ್‌ನಲ್ಲಿ ಪಾರ್ಕ್‌ ಅಭಿವೃದ್ಧಿಗೆ ಚಿಂತಿಸಲಾಗುತ್ತಿದೆ. ದೊಡ್ಡಗಾತ್ರದ ಉದ್ಯಾನಗಳು ನಿರ್ಮಿಸಲು ನಗರದಲ್ಲಿ ಜಾಗದ ಕೊರತೆ ಇದೆ. ಹಾಗಾಗಿ ವಾರ್ಡ್‌ ಮಟ್ಟದಲ್ಲಿ ಸಣ್ಣ ಪ್ರಮಾಣದ ಮಿನಿ ಉದ್ಯಾನ ಅಭಿವೃದ್ಧಿಗೆ ಪಾಲಿಕೆ ತೀರ್ಮಾನಿಸಿದೆ.

ನಗರವು 60 ವಾರ್ಡ್‌ಗಳನ್ನು ಹೊಂದಿದೆ. ಇದರಲ್ಲಿ ಸೂಕ್ತ ಸ್ಥಳಗಳನ್ನು ಗುರುತಿಸಿ ಸ್ಥಳೀಯವಾಗಿ ದಾನಿಗಳ ನೆರವು ಪಡೆದುಕೊಂಡು ಮಿನಿಪಾರ್ಕ್‌ ನಿರ್ಮಿಸಿದರೆ ಸ್ಥಳೀಯ ಜನರಿಗೆ ವಿಶ್ರಾಂತಿ, ವ್ಯಾಯಾಮಕ್ಕೆ ಒಂದು ಉದ್ಯಾನವೂ ಲಭಿಸುತ್ತದೆ. ಜತೆಗೆ ವಾರ್ಡ್‌ ನ ಸೌಂದರ್ಯವೂ ಹೆಚ್ಚುತ್ತದೆ. ಆಯಾ ಭಾಗದ ಕಾರ್ಪೊರೇಟರ್‌ಗಳು, ಸಂಘ-ಸಂಸ್ಥೆಗಳು ಆಸಕ್ತಿ ವಹಿಸಿದರೆ ಇದು ಸದ್ಯದಲ್ಲಿಯೇ ಸಾಕಾರಗೊಳ್ಳಲು ಸಾಧ್ಯವಿದೆ ಎನ್ನುವುದು ಪಾಲಿಕೆಯವರ ನಿರೀಕ್ಷೆಯಾಗಿದೆ.

ನಗರದ ಕೆಲವು ಕಡೆಗಳಲ್ಲಿ ಈಗಾಗಲೇ ಮಿನಿ ಪಾರ್ಕ್‌ ನಿರ್ಮಾಣವಾಗಿದೆ. ಮುಖ್ಯ ವಾಗಿ ಬಿಜೈಯ ವಿವೇಕಾನಂದ ಮಿನಿ ಪಾರ್ಕ್‌, ಕರಂಗಲ್ಪಾಡಿ ಆರೈಸ್‌ ಆವೇಕ್‌ ಮಿನಿ ಪಾರ್ಕ್‌ ಪ್ರಮುಖವಾದುದು. ಇಲ್ಲಿ ಪುಟಾಣಿಗಳಿಗೆ ಆಟವಾಡಲು ಒಂದಷ್ಟು ಜಾಗ ಮೀಸಲಿರಿಸಲಾಗಿದೆ. ಜತೆಗೆ ಹಿರಿಯು ನಾಗರಿಕರು ಕುಳಿತುಕೊಳ್ಳಲು ವ್ಯವಸ್ಥೆ ರೂಪಿಸಲಾಗಿದೆ.

ನಗರದಲ್ಲಿ ಇರುವ ಪ್ರಧಾನ ಉದ್ಯಾನವೆಂದರೆ ಕದ್ರಿಪಾರ್ಕ್‌ ಮಾತ್ರ. ಪಿಲಿಕುಳ ನಿಸರ್ಗಧಾಮ ಉದ್ಯಾನದ ಪ್ರವಾಸಿ ಮತ್ತು ಶೈಕ್ಷಣಿಕ ತಾಣವಾಗಿ ಹೆಚ್ಚು ಗುರುತಿಸಿಕೊಂಡಿದೆ. ಪುರಭವನದ ಮುಂಭಾಗದ ಗಾಂಧಿ ಪಾರ್ಕ್‌ ಬಳಿ ಕಾಮಗಾರಿ ನಡೆಯುತ್ತಿದ್ದು, ಇನ್ನೂ ಕೆಲವು ತಿಂಗಳು ಪಾರ್ಕ್‌ಗೆ ಸಾರ್ವಜನಿಕರು ಆಗಮಿಸುವುದು ಕಷ್ಟಸಾಧ್ಯ. ಬಾವುಟಗುಡ್ಡೆಯ ಟಾಗೋರ್‌ ಪಾರ್ಕ್‌, ನೆಹರೂ ಮೈದಾನದ ಬಳಿ ಇರುವ ಕಾರ್ಪೊರೇಶನ್‌ ಬ್ಯಾಂಕ್‌ ಪ್ರವರ್ತಿತ ಉದ್ಯಾನ, ಮಣ್ಣಗುಡ್ಡ ಪಾರ್ಕ್‌, ವೆಲೆನ್ಸಿಯಾ ಸಹಿತ ಕೆಲವು ಕಿರು ಉದ್ಯಾನಗಳಾಗಿವೆ.

ಪಾಳು ಬಿದ್ದ ಪಾರ್ಕ್‌ ಗಳ ಬಗ್ಗೆ ಗಮನ
ನಗರದಲ್ಲಿ ಈಗಾಗಲೇ ನಿರ್ಮಾಣವಾಗಿರುವ ಕೆಲವೊಂದು ಪಾರ್ಕ್‌ಗಳು ಪಾಳು ಬಿದ್ದಿವೆ. ಅದರಲ್ಲೂ ನಗರದ ಅತೀ ದೊಡ್ಡ ಪಾರ್ಕ್‌ ಆದ ಕದ್ರಿ ಪಾರ್ಕ್‌, ಕೋಡಿಕಲ್‌ ಬಳಿಯ ಪಾರ್ಕ್‌ ಸಹಿತ ಪ್ರಮುಖ ಪಾರ್ಕ್‌ಗಳು ಮತ್ತಷ್ಟು ಅಭಿವೃದ್ಧಿ ಹೊಂದಬೇಕು. ಈ ಮೂಲಕ ಸಾರ್ವಜನಿಕರನ್ನು ಮತ್ತಷ್ಟು ಸೆಳೆಯಬೇಕಿದೆ ಎನ್ನುತ್ತಾರೆ ಸಾರ್ವಜನಿಕರು.

ಮೂಲ ಸೌಕರ್ಯಕ್ಕೆ ಆದ್ಯತೆ
ಸಾರ್ವಜನಿಕರಿಗೆ ವಾಯು ವಿಹಾರಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ವಾರ್ಡ್‌ ಗೊಂದು ಪಾರ್ಕ್‌ ಎಂಬ ಯೋಜನೆ ಅನುಷ್ಠಾನಕ್ಕೆ ಮುಂದಾಗಿದ್ದೇವೆ. ಮೂಲ ಸೌಕರ್ಯಗಳನ್ನು ಗಮನದಲ್ಲಿಟ್ಟುಕೊಂಡು ಮೊದಲ ಹಂತದಲ್ಲಿ ಸುಮಾರು ಐದು ವಾರ್ಡ್‌ ಗಳಲ್ಲಿ ಪಾರ್ಕ್‌ ನಿರ್ಮಿಸಲಾಗುವುದು. ಈಗಾಗಲೇ ಇರುವ ಪಾರ್ಕ್‌ನ ಮೂಲ ಸೌಕರ್ಯ ಸಹಿತ ಅಭಿವೃದ್ಧಿಯ ಕಡೆಗೂ ಗಮನಹರಿಸಲಾಗುವುದು.
-ದಿವಾಕರ್‌ ಪಾಂಡೇಶ್ವರ, ಪಾಲಿಕೆ ಮೇಯರ್‌

ನವೀನ್‌ಭಟ್‌ ಇಳಂತಿಲ

ಟಾಪ್ ನ್ಯೂಸ್

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ

12

Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್‌; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

6

Mangaluru: ಅಪಾರ್ಟ್‌ಮೆಂಟ್‌, ಮಾಲ್‌ಗ‌ಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ

5

Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು

4

Kulur: ಗೈಲ್‌ ಪೈಪ್‌ಲೈನ್‌ ಕಾಮಗಾರಿ; ಹೆದ್ದಾರಿ ಕುಸಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Australian Open:  ಹಿಂದೆ ಸರಿದ ಸಿಮೋನಾ ಹಾಲೆಪ್‌

Australian Open: ಹಿಂದೆ ಸರಿದ ಸಿಮೋನಾ ಹಾಲೆಪ್‌

5

Kasaragod: ಚಂದ್ರಗಿರಿ ಸೇತುವೆಯಿಂದ ಹೊಳೆಗೆ ಹಾರಿದ ಯುವಕ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.