ಪಟ್ಲ ವಿಶ್ವ ಯಕ್ಷ ಸಂಭ್ರಮ’: ಯಕ್ಷಗಾನ ತಾಳಮದ್ದಳೆ, ಸಮ್ಮಾನ

Team Udayavani, Oct 5, 2018, 12:06 PM IST

5-october-7.gif

ಮಹಾನಗರ: ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್‌ ಮಂಗಳೂರು ಇದರ ದಿಲ್ಲಿ ಘಟಕದ ಆಶ್ರಯದಲ್ಲಿ ಯಕ್ಷಗಾನ ತಾಳಮದ್ದಳೆ, ನಾಟ್ಯ ವೈಭವ, ಯಕ್ಷಗಾನ ಬಯಲಾಟ ಮತ್ತು ಸಮ್ಮಾನ ಸಮಾರಂಭ ಕಾರ್ಯಕ್ರಮಗಳ ‘ಪಟ್ಲ ವಿಶ್ವ ಯಕ್ಷ ಸಂಭ್ರಮ’ ನವದಿಲ್ಲಿಯ ದೆಹಲಿ ಕರ್ನಾಟಕ ಸಂಘದ ಸಭಾಂಗಣದಲ್ಲಿ ಅಳಿಕೆ ರಾಮಯ್ಯ ರೈ ವೇದಿಕೆಯಲ್ಲಿ ಮಂಗಳವಾರ ನಡೆಯಿತು.

ದಿಲ್ಲಿ ಸರಕಾರದ ಜಿಎಸ್‌ಟಿ ಕಮಿಷನರ್‌ ಹಿರಿಯಡ್ಕ ರಾಜೇಶ್‌ ಪ್ರಸಾದ್‌ ಸಮಾರಂಭ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ದಿ ವೀಕ್‌ ಪತ್ರಿಕೆಯ ಸ್ಥಾನೀಯ ಸಂಪಾದಕ ಕೆ.ಎಸ್‌. ಸಚ್ಚಿದಾನಂದ ಮೂರ್ತಿ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ದಿಲ್ಲಿ ಶಾಸಕಿ ಪ್ರಮೀಳಾ ಠೊಕಸ್‌ ಭಾಗವಹಿಸಿದ್ದರು. ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್‌ ಶೆಟ್ಟಿ, ಟ್ರಸ್ಟ್‌ ನ ದೆಹಲಿ ಘಟಕದ ಗೌರವಾಧ್ಯಕ್ಷ ಟಿ. ಶಿವ ಪ್ರಸಾದ್‌ ಶೆಟ್ಟಿ, ದೆಹಲಿ ಬಂಟ್ಸ್‌ ಕಲ್ಚರಲ್‌ ಅಸೋಸಿಯೇಶನ್‌ನ ಪ್ರೇಮನಾಥ್‌ ರೈ, ಕರ್ನಾಟಕ ಬ್ಯಾಂಕ್‌ನ ಸಹಾಯಕ ಮಹಾ ಪ್ರಬಂಧಕ ಹಯವದನ ಉಪಾಧ್ಯಾಯ, ಉದ್ಯಮಿ ಶೇಖರ್‌ ಬಂಗೇರಾ, ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸರವು ಕೃಷ್ಣಭಟ್‌, ದೆಹಲಿ ಕರ್ನಾಟಕ ಸಂಘದ ಕಾರ್ಯದರ್ಶಿ ಸಿ.ಎಂ. ನಾಗರಾರಿ ಮತ್ತು ಟ್ರಸ್ಟ್‌ನ ವಿವಿಧ ಘಟಕಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಭೀಷ್ಮ ಸೇನಾಧಿಪತ್ಯ ತಾಳಮದ್ದಳೆಯಲ್ಲಿ ಡಾ|ಎಂ. ಪ್ರಭಾಕರ ಜೋಶಿ, ಡಾ| ಪುರುಷೋತ್ತಮ ಬಿಳಿಮಲೆ, ಪೆರ್ಮುದೆ ಜಯಪ್ರಕಾಶ್‌ ಶೆಟ್ಟಿ, ಮಾಧವ ಬಂಗೇರ ಅವರು ಅರ್ಥದಾರಿಗಳಾಗಿದ್ದರು. ರಾಕೇಶ್‌ ಪೂಂಜಾ ಮತ್ತು ಹರ್ಷಿತ್‌ ಮಾರ್ಲಾ ಅವರು ಸಂಪಾದಿಸಿದ ‘ಪಟ್ಲ ಯಾನ’ ಪುಸ್ತಕವನ್ನು ಮನೀಶ್‌ ಸಿಸೋಡಿಯಾ ಅವರು ಬಿಡುಗಡೆಗೊಳಿಸಿದರು.

ಈ ಸಂದರ್ಭ ಯಕ್ಷಗಾನ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ ಮಾಡಿರುವ ಡಾ| ಪ್ರಭಾಕರ ಜೋಷಿ, ಉಮೇಶ್‌ ಶೆಟ್ಟಿ ಉಬರಡ್ಕ ಮತ್ತು ಉದಯೋನ್ಮುಖ ಪ್ರತಿಭೆ ಬಿಂದಿಯಾ ಶೆಟ್ಟಿ ಅವರಿಗೆ ಯಕ್ಷಧ್ರುವ ಪಟ್ಲ ಫೌಂಡೇಷನ್‌ ದಿಲ್ಲಿ ಘಟಕದಿಂದ ಸಮ್ಮಾನಿಸಲಾಯಿತು.ಟ್ರಸ್ಟ್‌ನ ದಿಲ್ಲಿ ಘಟಕದ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ ಸ್ವಾಗತಿಸಿದರು. ಬಾಲಕೃಷ್ಣ ನಾಯ್ಕ ವಂದಿಸಿದರು. ಟ್ರಸ್ಟ್‌ನ ಕಾರ್ಯದರ್ಶಿ ಪೃಥ್ವಿ ಕಾರಿಂಜೆ ನಿರೂಪಿಸಿದರು.

ಟಾಪ್ ನ್ಯೂಸ್

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.