ಪಿಲಿಕುಳ ನಿಸರ್ಗಧಾಮದ ಆರ್ಥಿಕ ಸಂಕಷ್ಟಕ್ಕೆ ಸ್ಪಂದಿಸಿ; ಕೈಗಾರಿಕೆಗಳಿಗೆ ಜಿಲ್ಲಾಡಳಿತ ಕೋರಿಕೆ
Team Udayavani, Sep 29, 2020, 6:34 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ನಿರ್ವಹಣೆಗಾಗಿ ಸರಕಾರದಿಂದ ಅನುದಾನ ಪಡೆಯದಿರುವ ದೇಶದ ಏಕೈಕ ಮೃಗಾಲಯ ಮಂಗಳೂರಿನ ಪಿಲಿಕುಳ ನಿಸರ್ಗಧಾಮದ ಆರ್ಥಿಕ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ದ.ಕ. ಜಿಲ್ಲಾಡಳಿತವು ನೆರವಿಗಾಗಿ ಕರಾವಳಿಯ 13 ಬೃಹತ್ ಕೈಗಾರಿಕೆ, ಕಂಪೆನಿಯವರ ಜತೆಗೆ ಮಾತುಕತೆ ನಡೆಸಿದೆ.
“ಪಿಲಿಕುಳ ನಿಸರ್ಗಧಾಮಕ್ಕೆ ಅಳಿವಿನ ಭೀತಿ’ ಎಂಬ ಶೀರ್ಷಿಕೆಯಲ್ಲಿ ಆ. 25ರಂದು “ಉದಯವಾಣಿ’ಯು ಮೃಗಾಲಯದ ಆರ್ಥಿಕ ಸಂಕಷ್ಟದ ಬಗ್ಗೆ ವರದಿ ಪ್ರಕಟಿಸಿತ್ತು. ಒಂದು ವರ್ಷದಿಂದ ಎಂಆರ್‌ಪಿಎಲ್ ಸಂಸ್ಥೆಯು ಮೃಗಾಲಯದ ನಿರ್ವಹಣೆಯನ್ನು ನೋಡಿಕೊಳ್ಳುತ್ತಿದ್ದು, ಮುಂದಿನ 2 ತಿಂಗಳವರೆಗೆ ಇದು ಜಾರಿಯಲ್ಲಿರುವ ಬಗ್ಗೆ ಉಲ್ಲೇಖೀಸಲಾಗಿತ್ತು. ಇದೀಗ ಒಂದು ತಿಂಗಳು ಪೂರ್ಣಗೊಂಡಿದ್ದು, ಇನ್ನು ಒಂದು ತಿಂಗಳು ಮಾತ್ರ ನಿರ್ವಹಣೆ ಹೊಣೆ ಎಂಆರ್‌ಪಿಎಲ್‌ಗಿದೆ. ಆ ಬಳಿಕ ಏನು ಎಂಬ ಬಗ್ಗೆ ಸ್ಪಷ್ಟತೆ ಇರಲಿಲ್ಲ.
“ಉದಯವಾಣಿ’ಗೆ ಶುಕ್ರವಾರ ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು, “ಪಿಲಿಕುಳದ ಆರ್ಥಿಕ ಸಂಕಷ್ಟ ನಿವಾರಿಸುವ ನಿಟ್ಟಿನಲ್ಲಿ ಈಗಾಗಲೇ 13 ಕೈಗಾರಿಕೆ ಹಾಗೂ ಕಂಪೆನಿಯವರ ಜತೆಗೆ ಮಾತುಕತೆ ನಡೆಸಲಾಗಿದೆ. ಸಿಎಸ್‌ಆರ್ ನಿಧಿ ಯಡಿಯಲ್ಲಿ ಪ್ರಾಯೋಜಕತ್ವ ವಹಿಸುವಂತೆ ಮನವಿ ಮಾಡಿದ್ದೇವೆ. ಪೂರಕ ಸ್ಪಂದನೆ ಬಂದಿದೆ. ಕೆಲವೇ ದಿನಗಳಲ್ಲಿ ಇದು ಅಂತಿಮಗೊಳ್ಳಲಿದೆ. ಜತೆಗೆ ಸರಕಾರದಿಂದ ಕೂಡ ಪಿಲಿಕುಳಕ್ಕೆ ವಿಶೇಷ ಅನುದಾನ ನೀಡುವ ಸಲುವಾಗಿ ಪತ್ರ ಬರೆಯಲಾಗಿದೆ. ಮುಂದಿನ ವರ್ಷಕ್ಕೆ ಪ್ರತ್ಯೇಕ ಬಜೆಟ್ ನೀಡುವಂತೆ ಸರಕಾರವನ್ನು ಕೋರಲಾಗಿದ್ದು, ಅನುಮೋದನೆ ದೊರೆಯುವ ನಿರೀಕ್ಷೆ ಇದೆ’ ಎಂದರು.
ಮಾಸಿಕ 20 ಲ.ರೂ. ಅಗತ್ಯ
ಪಿಲಿಕುಳ ನಿಸರ್ಗಧಾಮದಲ್ಲಿ ವಿವಿಧ ಪ್ರಭೇದದ 1,200ಕ್ಕೂ ಅಧಿಕ ಪ್ರಾಣಿ, ಪಕ್ಷಿ ಹಾಗೂ ಉರಗಗಳಿವೆ. ಅವುಗಳ ಆಹಾರಕ್ಕೆ ಪ್ರತೀ ತಿಂಗಳು 12 ಲಕ್ಷ ರೂ.ಗಳಿಗೂ ಅಧಿಕ ವೆಚ್ಚ ಮಾಡಲಾಗುತ್ತದೆ. ಉಳಿದಂತೆ ಸಿಬಂದಿ ವೇತನ ಸೇರಿದಂತೆ ವಿವಿಧ ಕಾರಣಕ್ಕಾಗಿ ವೆಚ್ಚವಾಗುತ್ತಿದ್ದು, ಒಟ್ಟು ಸುಮಾರು 20 ಲಕ್ಷ ರೂ. ಪ್ರತೀ ತಿಂಗಳು ಅಗತ್ಯವಿದೆ. ಇಲ್ಲಿಯವರೆಗೆ ವಿವಿಧ ಕಂಪೆನಿಗಳ ಸಿಎಸ್‌ಆರ್ ನಿಧಿಯಿಂದ ಹಾಗೂ ಪ್ರವಾಸಿಗರಿಂದ ಸಂಗ್ರಹವಾಗುವ ಹಣದಿಂದ ಪಿಲಿಕುಳ ಮೃಗಾಲಯದ ನಿರ್ವಹಣೆ ಮಾಡಲಾಗುತ್ತಿತ್ತು. ಆದರೆ ಕೊರೊನಾ ಕಾರಣದಿಂದ ಪ್ರವಾಸಿಗರಿಲ್ಲದೆ ಪಿಲಿಕುಳದಲ್ಲಿ ಆರ್ಥಿಕ ಸಮಸ್ಯೆ ಎದುರಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.