ಮಂಗಳೂರಿಗೆ ಪ್ರಧಾನಿ ಭೇಟಿ: ಬಸ್ ಗಳ ಕೊರತೆಯಿಂದ ಪರದಾಡಿದ ಪ್ರಯಾಣಿಕರು
Team Udayavani, Sep 2, 2022, 11:28 AM IST
ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ಹಲವು ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಆಗಮಿಸುತ್ತಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಶುಕ್ರವಾರ ನಗರದಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡು ಮಾಡಲಾಗಿದೆ. ಬೈಕಂಪಾಡಿಯಲ್ಲಿ ವಾಹನಗಳಿಗೆ ಪೊಲೀಸರಿಂದ ತಡೆ ಹಾಕಿದ್ದಾರೆ. ಹೆದ್ದಾರಿಯಲ್ಲಿ ಪೊಲೀಸರೊಂದಿಗೆ ವಾಹನ ಚಾಲಕರು ವಾಗ್ವಾದ ನಡೆಸಿದ ದೃಶ್ಯವೂ ಕಂಡು ಬಂತು. ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ನೀಡಲಾಗಿದೆ.
ಪ್ರಯಾಣಿಕರ ಪರದಾಟ: ಕಾರ್ಯಕ್ರಮಕ್ಕೆ ಫಲಾನುಭವಿಗಳು ಮತ್ತು ಸಾರ್ವಜನಿಕರನ್ನು ಕರೆತರಲು ಸಾವಿರಾರು ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಹಲವು ರೂಟ್ ಗಳ ಖಾಸಗಿ ಮತ್ತು ಸರ್ಕಾರಿ ಬಸ್ ಗಳನ್ನು ಕಾರ್ಯಕ್ರಮಕ್ಕೆ ತೆರಳಿರುವ ಕಾರಣ ಬೆಳಗಿನ ಜಾವ ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರು ಪರದಾಡಿದರು. ಹಲವು ಕಡೆ ಬಸ್ ಗಳಿಗಾಗಿ ಗಂಟೆಗಟ್ಟಲೆ ಕಾದು ಕುಳಿತ ದೃಶ್ಯ ಕಂಡು ಬಂತು.
ಇದನ್ನೂ ಓದಿ:ಐಎನ್‌ಎಸ್ ವಿಕ್ರಾಂತ್ ದೇಶಕ್ಕೆ ಸಮರ್ಪಿಸಿದ ಪ್ರಧಾನಿ ನರೇಂದ್ರ ಮೋದಿ
ವಾಹನ ಸಂಚಾರ ಮಾರ್ಪಾಡು ಮಾಡಿರುವುದು ಹಾಗೂ ಸಾರ್ವಜನಿಕರ ಓಡಾಟ ಕಡಿಮೆ ಇರುವ ಸಾಧ್ಯತೆ ಹಿನ್ನೆಲೆಯಲ್ಲಿ ಕೆಲವೊಂದು ಸಿಟಿ ಬಸ್ ಕಾರ್ಯಾಚರಣೆ ಕಡಿತಗೊಳಿಸಲು ನಿರ್ಧರಿಸಿದೆ. ಈ ಕಾರಣದಿಂದಾಗಿ ನಗರದಲ್ಲಿ ಶೇ.30ರಷ್ಟು ಬಸ್‌ಗಳು ಮಾತ್ರ ಸಂಚರಿಸುವ ಸಾಧ್ಯತೆ ಇದೆ.
ಕೆಂಜಾರು-ಕೆಪಿಟಿ, ಹೆದ್ದಾರಿ ಸಂಚಾರ ನಿಷೇಧ: ಬಜಪೆ-ಕೆಂಜಾರು-ಮರವೂರು-ಮರಕಡ-ಕಾವೂರು-ಬೋಂದೆಲ್- ಪದವಿನಂಗಡಿ-ಯೆಯ್ನಾಡಿ ಹಾಗೂ ರಾಷ್ಟ್ರೀಯ ಹೆದ್ದಾರಿ 66ರ ಕೆಪಿಟಿ ಜಂಕ್ಷನ್ ನಿಂದ ಕೊಟ್ಟಾರ ಚೌಕಿ-ಕೂಳೂರು-ಎನ್‌ಎಂಪಿಎವರೆಗೆ ಹಾದು ಹೋಗುವ ರಸ್ತೆಯ ಎರಡೂ ಬದಿಗಳಲ್ಲಿ ಯಾವುದೇ ರೀತಿಯ ವಾಹನಗಳನ್ನು ನಿಲ್ಲಿಸುವಂತಿಲ್ಲ. ಇದೇ ರಸ್ತೆಗಳಲ್ಲಿ ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಎಲ್ಲ ಸರಕು ವಾಹನ, ಘನ ವಾಹನ, ಪ್ರವಾಸಿ ವಾಹನ ಹಾಗೂ ಇತರ ಸಾರ್ವಜನಿಕ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಆದರೆ ಗೋಲ್ಡ್ ಫಿಂಚ್ ಸಿಟಿ ಮೈದಾನದ ಸಮಾವೇಶಕ್ಕೆ ಹೋಗುವ ಅತೀ ಗಣ್ಯ ವ್ಯಕ್ತಿಗಳು, ಗಣ್ಯ ವ್ಯಕ್ತಿಗಳು ಹಾಗೂ ಸಾರ್ವಜನಿಕರ ವಾಹನಗಳು ನಿಗದಿತ ನಿಲುಗಡೆ ಸ್ಥಳಗಳಿಗೆ ಹೋಗಲು, ಮತ್ತು ತುರ್ತು ಸೇವೆಯ ವಾಹನಗಳಿಗೆ ನಿಷೇಧಿತ ರಸ್ತೆಗಳಲ್ಲಿ ಸಂಚರಿಸಬಹುದು. ಗೋಲ್ಡ್ ಫಿಂಚ್ ಮೈದಾನ ಮತ್ತು ಸುತ್ತಲಿನ 500 ಮೀ. ವ್ಯಾಪ್ತಿಯ ರಸ್ತೆಗಳಲ್ಲೂ ಎಲ್ಲ ವಾಹನಗಳ ನಿಲುಗಡೆಗೆ ನಿಷೇಧ.
ಸೆ. 2ರಂದು ಬೆಳಗ್ಗೆ 10ರಿಂದ ಪ್ರಧಾನಿಯವರು ವಿಮಾನ ನಿಲ್ದಾಣದಿಂದ ನಿರ್ಗಮಿಸುವವರೆಗೆ ನಂತೂರು, ಬಿಕರ್ನಕಟ್ಟೆ- ಕೈಕಂಬ, ಮಂಗಳ ಜ್ಯೋತಿ, ವಾಮಂಜೂರು, ಪೊರ್ಕೊಡಿ, ಮೂಲ್ಕಿ, ಹಳೆಯಂಗಡಿ, ಜೋಕಟ್ಟೆ ಕ್ರಾಸ್, ಲೇಡಿಹಿಲ್ ಸೇರಿದಂತೆ 9 ಜಂಕ್ಷನ್‌ಗಳಲ್ಲಿ ಸಂಚಾರ ಬದಲಾಯಿಸಿ, ಪರ್ಯಾಯ ರಸ್ತೆ ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.