ಬಹುಗ್ರಾಮ ಕುಡಿಯುವ ನೀರು ಅಂತಿಮ ಹಂತದಲ್ಲಿ: ಸಚಿವ ಪ್ರಮೋದ್
Team Udayavani, Aug 13, 2017, 7:10 AM IST
ಬ್ರಹ್ಮಾವರ: ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅಂತಿಮ ಹಂತ ತಲುಪಿದೆ. ಉಡುಪಿ ವಿಧಾನ ಸಭಾ ಕ್ಷೇತ್ರದ ಚಾಂತಾರು ವಲಯ ದಲ್ಲಿ 48 ಕೋಟಿ ರೂ. ಹಾಗೂ ತೆಂಕನಿಡಿಯೂರು ವಲಯದಲ್ಲಿ 35 ಕೋಟಿ ರೂ.ಗಳ ಯೋಜನೆ ತಯಾ ರಿಸಲಾಗಿದೆ. ಸದ್ಯದಲ್ಲಿ ಟೆಂಡರ್ ಕರೆದು ಕಾರ್ಯಾರಂಭವಾಗಲಿದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಅವರು ಗುರುವಾರ ಕೊಕ್ಕರ್ಣೆ ಶಿವಗಿರಿ ನಾರಾಯಣಗುರು ಸಭಾಭವನದಲ್ಲಿ ಪೆಜಮಂಗೂರು ಗ್ರಾಮ ಮಟ್ಟದ ಜನಸಂಪರ್ಕ ಸಭೆ ಉದ್ಘಾಟಿಸಿ ಮಾತ ನಾಡಿದರು. ಉಡುಪಿ ಕ್ಷೇತ್ರದಲ್ಲಿ ಸುಮಾರು 16,000 ಬಿಪಿಎಲ್ ಕಾರ್ಡ್ ವಿತರಿಸಲಾಗಿದೆ. ಬಿಪಿಎಲ್ ಕಾರ್ಡ್‌ನಿಂದ ಹತ್ತು ಹಲವು ಸೌಲಭ್ಯಗಳು ದೊರೆಯಲಿವೆ ಎಂದರು.
ಲಕ್ಷಾಂತರ ರೂ. ಅನುದಾನ
ಪ್ರಾರಂಭದಲ್ಲಿ ಹಕ್ಕುಪತ್ರ, ಅನಂತರ ಮನೆ, ಹಟ್ಟಿ , ಬಾವಿ ರಚನೆಗೆ ಅನುದಾನ, ಹೈನುಗಾರಿಕೆ, ಕುಕ್ಕುಟೋದ್ಯ ಮಕ್ಕೆ ಸಹಾಯಧನ, ಉಚಿತ ವಿದ್ಯುತ್ ಸಂಪರ್ಕ, ಹತ್ತು ಹಲವು ಯೋಜನೆ ಗಳು. ಹೀಗೆ ಕುಟುಂಬವೊಂದಕ್ಕೆ ಲಕ್ಷಾಂತರ ರೂ. ಅನುದಾನವನ್ನು ರಾಜ್ಯ ಸರಕಾರ ನೀಡುತ್ತಿದೆ ಎಂದು ಸಚಿವ ಪ್ರಮೋದ್ ಹೇಳಿದರು. ಜಿ.ಪಂ. ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ, ಅಕ್ರಮ ಸಕ್ರಮ ಬಗರ್ ಹುಕುಂ ಸಮಿತಿ ಅಧ್ಯಕ್ಷ ಮೈರ್ಮಾಡಿ ಅಶೋಕ್ ಕುಮಾರ್ ಶೆಟ್ಟಿ, ತಾ.ಪಂ. ಸದಸ್ಯರಾದ ಭುಜಂಗ ಶೆಟ್ಟಿ, ಡಾ| ಸುನೀತಾ ಡಿ. ಶೆಟ್ಟಿ, ಪಂಚಾಯತ್ ಅಧ್ಯಕ್ಷೆ ಆಶಾಲತಾ, ಉಪಾಧ್ಯಕ್ಷೆ ದೇವಕಿ ಕೋಟ್ಯಾನ್, ಸದಸ್ಯರು, ವಿಶೇಷ ತಹಶೀಲ್ದಾರ್ ಪ್ರದೀಪ್ ಕುಡೇìಕರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮೋಹನ್‌ರಾಜ್ ಮತ್ತಿತರರು ಉಪಸ್ಥಿತರಿದ್ದರು.
ವಿವಿಧ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಯಿತು. ಕಂದಾಯ ನಿರೀಕ್ಷಕ ಲಕ್ಷ್ಮೀನಾರಾ ಯಣ ಭಟ್ ಸ್ವಾಗತಿಸಿ, ತಾ.ಪಂ. ಮಾಜಿ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಹಾರಾಡಿ ಪ್ರಸ್ತಾವನೆಗೈದರು. ಪಿಡಿಒ ಪ್ರದೀಪ್ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.