ಉಳ್ಳಾಲ ಸೀಮಂತ ಕಾರ್ಯಕ್ರಮದ ಫ್ಲೆಕ್ಸ್ ನಲ್ಲಿ ಗರ್ಭಿಣಿಯ ಭಾವಚಿತ್ರ ; ವಿವಾದ
ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ತೀವ್ರ ವಿರೋಧ; ಪ್ರತಿಭಟನೆ
Team Udayavani, Sep 28, 2022, 3:55 PM IST
ಉಳ್ಳಾಲ: ಪೋಷಣ್ ಅಭಿಯಾನದ ತಾಲೂಕು ಮಟ್ಟದ ಕಾರ್ಯಕ್ರಮದ ಒಂದು ಭಾಗವಾಗಿ ಏರ್ಪಡಿಸಿದ್ದ ಸೀಮಂತ ಕಾರ್ಯಕ್ರಮದ ಬ್ಯಾನರ್ ನಲ್ಲಿ ಹಿಂದೂ ಗರ್ಭಿಣಿಯ ಭಾವ ಚಿತ್ರ ಹಾಕಿ ಶಾಸಕ ಯು.ಟಿ. ಖಾದರ್ ಅವರ ಭಾವಚಿತ್ರದೊಂದಿಗೆ ಸ್ವಾಗತ ಕೋರುವ ಬ್ಯಾನರ್ ವಿವಾದಕ್ಕೆ ಕಾರಣವಾಗಿದ್ದು, ಹಿಂದೂ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಬ್ಯಾನರ್ ತೆರವುಗೊಳಿಸಿ, ಶಾಸಕ ಯುಟಿ. ಖಾದರ್ ವಿರುದ್ದ ದಿಕ್ಕಾರ ಹಾಕಿದ ಘಟನೆ ಕೊಲ್ಯ ನಾರಾಯಣ ಗುರು ಸಭಾಂಗಣದಲ್ಲಿ ಬುಧವಾರ ನಡೆದಿದೆ.
ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ವತಿಯಿಂದ ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮದ ಭಾಗವಾಗಿ ಉಳ್ಳಾಲ ತಾಲೂಕಿನ ಗರ್ಭಿಣಿ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸ್ಥಳೀಯ ಹಿಂದೂ ಸಂಘಟನೆಯಲ್ಲಿ ಸಕ್ರೀಯರಾಗಿರುವ ಮುಖಂಡರೊಬ್ಬರ ಸಂಬಂಧಿ ಮಹಿಳೆಯ ಹಳೆಯ ಫೋಟೋ ಅನುಮತಿ ಇಲ್ಲದೆ ಯು.ಟಿ. ಖಾದರ್ ಬೆಂಬಲಿಗರು ಫ್ಲೆಕ್ಸ್ ಮಾಡಿ ಕೆಳಗೆ ಕಾರ್ಯಕ್ರಮದ ಉದ್ಘಾಟಕರಾಗಿ ಭಾಗವಹಿಸುವ ಯು.ಟಿ.ಖಾದರ್ ಚಿತ್ರವನ್ಬು ಹಾಕಿ ಸಭಾಂಗಣದ ಹೊರಗೆ ಅಳವಡಿಸಿದ್ದರು.
ಕಾರ್ಯಕ್ರಮ ಆರಂಭಕ್ಕೆ ಮೊದಲೇ ಯು.ಟಿ. ಖಾದರ್ ಬೆಂಬಲಿಗರ ಫ್ಲೆಕ್ಸ್ ನಲ್ಲಿ ಹಿಂದೂ ಮಹಿಳೆಯ ಫೋಟೋ ಅಳವಡಿಸಿರುವ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆ ಮಹಿಳೆಯ ಸಂಬಂಧಿಕರು ಮತ್ತು ಹಿಂದೂ ಸಂಘಟನೆಯ ಕಾರ್ಯಕರ್ತರು ಆಗಮಿಸಿ ಆಕ್ಷೇಪ ವ್ಯಕ್ತಪಡಿಸಿದ್ದು, ಕೆಲ ಕಾಲ ಗೊಂದಲದ ವಾತಾವರಣ ಉಂಟಾಗಿದ್ದು ಕಾರ್ಯಕರ್ತರು ಕಾರ್ಯಕ್ರಮ ಆಯೋಜಕರನ್ನು ತರಾಟೆಗೆ ತೆಗೆದುಕೊಂಡು ಬ್ಯಾನರ್ ತೆರವುಗೊಳಿಸಿದರು.
ನವರಾತ್ರಿ ಸಂದರ್ಭದಲ್ಲಿ ಸೀಮಂತ ಕ್ರಮ ಸರಿಯಲ್ಲ
ನವರಾತ್ರಿ ಹಿಂದೂಗಳಿಗೆ ಅತ್ಯಂತ ಮಹತ್ವದ ಹಬ್ಬವಾಗಿದ್ದು, ಈ ಸಂದರ್ಭದಲ್ಲಿ ಬಾಳೆ ಎಲೆ ಹಾಕಿ ಸೀಮಂತ ಮಾಡಿರುವ ಅಧಿಕಾರಿಗಳ ಕ್ರಮ ಸರಿಯಲ್ಲ ಎಂದು ಘಟನೆ ಯ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ,ಅನುಮತಿ ಇಲ್ಲದೆ ಹಿಂದೂ ಮಹಿಳೆಯ ಫೋಟೋ ಬಳಕೆ ಮಾಡಿರುವುದು ಅಪರಾಧ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.