ವಿದ್ಯುತ್ ಬಿಲ್ ಅಧಿಕ ಸಮಸ್ಯೆ ಮೆಸ್ಕಾಂ ಜತೆ ಇಂದು ಚರ್ಚೆ: ಸಚಿವ ಕೋಟ
Team Udayavani, May 30, 2020, 6:19 AM IST
ಮಂಗಳೂರು: ವಿದ್ಯುತ್ ಗ್ರಾಹಕರಿಗೆ ಅಧಿಕ ಬಿಲ್ ಬಂದಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿದ್ದು, ಈ ಬಗ್ಗೆ ಸ್ಪಂದಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ.
ಶುಕ್ರವಾರ ತಮ್ಮ ಕಚೇರಿಯಲ್ಲಿ ಮಾಧ್ಯಮದವರಿಗೆ ಈ ಬಗ್ಗೆ ಮಾಹಿತಿ ನೀಡಿದ ಅವರು ಎರಡು ತಿಂಗಳ ಬಿಲ್‌ಗಳನ್ನು ಒಟ್ಟಿಗೆ ನೀಡಿದ್ದರೂ, ನಿಗದಿತ ಸರಾಸರಿ ದರಕ್ಕಿಂತ ಹೆಚ್ಚು ಮೊತ್ತದ ಬಿಲ್ ನೀಡಿರುವ ಬಗ್ಗೆ ಸಾರ್ವಜನಿಕರ ಅಸಮಾಧಾನ ತನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಮೆಸ್ಕಾಂ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಶನಿವಾರ ಮತ್ತೂಮ್ಮೆ ಸಭೆ ನಡೆಸಿ, ಗ್ರಾಹಕರಿಗೆ ಅನ್ಯಾಯವಾಗದಂತೆ ಗಮನ ಹರಿಸಲು ನಿರ್ದೇಶಿಸಲಾಗುವುದು ಎಂದು ವಿವರಿಸಿದರು.
ಮೀನುಗಾರಿಕೆ ಅವಧಿವಿಸ್ತರಣೆ
ಮೀನುಗಾರಿಕೆ ಅವಧಿಯನ್ನು ಕೇಂದ್ರ ಸರಕಾರ ಜೂ.15ರ ವರೆಗೆ ವಿಸ್ತರಿಸಿ ಆದೇಶಿಸಿದೆ. ರಾಜ್ಯ ಸರಕಾರವೂ ಇದರನ್ವಯ ಕ್ರಮ ಕೈಗೊಂಡಿದೆ. ಈ ನಿಟ್ಟಿನಲ್ಲಿ ವಿಮಾ ಕಂಪೆನಿ ಸಹಿತ ಸಂಬಂಧಪಟ್ಟವರಿಗೆ ಸೂಕ್ತ ಸೂಚನೆ ನೀಡಲಾಗುವುದು ಎಂದು ಸಚಿವರು ತಿಳಿಸಿದರು.
ರಾಜ್ಯದಲ್ಲಿ ಒಳನಾಡು ಮೀನುಗಾರಿಕೆ ಅಭಿವೃದ್ಧಿ ನಿಟ್ಟಿನಲ್ಲಿ ಮುಂದಿನ 10 ವರ್ಷಗಳಲ್ಲಿ ಮೀನು ಮರಿ ಉತ್ಪಾದನೆ ಸೇರಿದಂತೆ ಈ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿಗೆ ಕಾರ್ಯಯೋಜನೆ ರೂಪಿಸಲಾಗುವುದು ಎಂದರು.
ಸ್ಥಾಯೀ ಸಮಿತಿ ಅಧ್ಯಕ್ಷ ರವೀಂದ್ರ ಕಂಬಳಿ, ಜಿ.ಪಂ. ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.