ಶೋಭಾಯಾತ್ರೆ; ಅ. 5ರಿಂದ 7ರ ವರೆಗೆ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ
Team Udayavani, Oct 4, 2022, 1:54 PM IST
ಸಾಂದರ್ಭಿಕ ಚಿತ್ರ
ಮಹಾನಗರ: ನಗರದಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಹಾಗೂ ರಥಬೀದಿ ವೆಂಕಟರಮಣ ದೇವಸ್ಥಾನದ ಶಾರದಾ ಮಹೋತ್ಸವ ಮೆರವಣಿಗೆ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಜನ ಸೇರುವ ಕಾರಣ ಸುಗಮಸಂಚಾರಕ್ಕಾಗಿ ಅ.5ರಿಂದಲೇ ಪ್ರತ್ಯೇಕವಾಗಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.
ಕುದ್ರೋಳಿ ಶೋಭಾಯಾತ್ರೆ ಹಿನ್ನೆಲೆಯಲ್ಲಿ ಅ. 5ರ ಮಧ್ಯಾಹ್ನ 2 ಗಂಟೆಯಿಂದ ಅ. 6ರ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ. ಕೊಟ್ಟಾರ ಚೌಕಿ ಜಂಕ್ಷನ್ ಮುಖಾಂತರ ನಗರಕ್ಕೆ ಬರುವ ವಾಹನಗಳ ನಗರ ಪ್ರವೇಶ ನಿಷೇಧಿಸಲಾಗಿದೆ. ವಾಹನಗಳು ಕುಂಟಿಕಾನ, ಕೆಪಿಟಿ, ನಂತೂರು ಮಾರ್ಗವಾಗಿ ನಗರ ಪ್ರವೇಶಿಸುವುದು.
ನಗರದಿಂದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಮುಖೇನ ಕೊಟ್ಟಾರ ಚೌಕಿ ಕಡೆಗೆ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಲಾಲ್‌ಬಾಗ್ ಮಾರ್ಗವಾಗಿ ಕುಂಟಿಕಾನ ಹಾಗೂ ಕೆ.ಪಿ.ಟಿ. ಕಡೆಗೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಕೆ.ಎಸ್.ಆರ್. ರಸ್ತೆಯಿಂದ ಎಂ.ಜಿ. ರಸ್ತೆಯಲ್ಲಿ ವಾಹನಗಳು ಪಿವಿಎಸ್ ಮಾರ್ಗವಾಗಿ ಬಂಟ್ಸ್ ಹಾಸ್ಟೆಲ್ ಮೂಲಕ ಸಂಚರಿಸುವುದು. ಅಂಬೇಡ್ಕರ್ ಸರ್ಕಲ್ ಮೂಲಕ ಎಂ.ಜಿ. ರಸ್ತೆಗೆ ಸಾಗುವ ವಾಹನಗಳು ಬಂಟ್ಸ್ ಹಾಸ್ಟೆಲ್ ನಿಂದ ಸಂಚರಿಸುವುದು.
ನ್ಯೂಚಿತ್ರಾ ಜಂಕ್ಷನ್‌ನಿಂದ ಕುದ್ರೋಳಿ ದೇವಸ್ಥಾನ ಮಾರ್ಗವಾಗಿ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಕಡೆಗೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ವಾಹನಗಳು ನ್ಯೂಚಿತ್ರಾ ಜಂಕ್ಷನ್‌ನಿಂದ ಕಂಡತ್‌ಪಳ್ಳಿ, ಮಂಡಿ, ಕುದ್ರೋಳಿ, ಬೊಕ್ಕಪಟ್ಟ, ಸುಲ್ತಾನ್‌ಬತ್ತೇರಿ ಮೂಲಕ ಉರ್ವಮಾರ್ಕೆಟ್ ಮಾರ್ಗವಾಗಿ ನಗರದಿಂದ ಹೊರ ಹೋಗುವುದು, ನ್ಯೂಚಿತ್ರಾ ಜಂಕ್ಷನ್‌ನಿಂದ ಡೊಂಗರಕೇರಿ ವೆಂಕಟರಮಣ ದೇವಸ್ಥಾನ ಜಂಕ್ಷನ್, ರಾಷ್ಟ್ರ ಕವಿ ಎಂ. ಗೋವಿಂದ ಪೈ ವೃತ್ತ, ಪಿವಿಎಸ್ ಮಾರ್ಗವಾಗಿ ಮುಂದುವರಿದು ಬಂಟ್ಸ್ ಹಾಸ್ಟೆಲ್ ಕಡೆಗೆ ಸಂಚರಿಸುವುದು.
ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಕಡೆಯಿಂದ ಕುದ್ರೋಳಿ ದೇವಸ್ಥಾನದ ಕಡೆಗೆ ಎಲ್ಲ ತರಹದ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಉರ್ವಸ್ಟೋರ್ ಕಡೆಯಿಂದ ಬ್ರಹ್ಮ ಶ್ರೀನಾರಾಯಣಗುರು ವೃತ್ತದ ಕಡೆಗೆ ಬರುವ ವಾಹನಗಳು ಕೋಟೆಕಣಿ ರಸ್ತೆಯಾಗಿ ಕೊಟ್ಟಾರಕ್ರಾಸ್, ಕಾಪಿಕಾಡು, ಕೆಎಸ್‌ಆರ್‌ಟಿಸಿ, ಬಿಜೈ ಮಾರ್ಕೆಟ್ ಜಂಕ್ಷನ್ ಮೂಲಕ ಸಂಚರಿಸುವುದು.
ಕೆಎಸ್‌ಆರ್‌ಟಿಸಿ ಜಂಕ್ಷನ್ ಕಡೆಯಿಂದ ಎಂ.ಜಿ.ರಸ್ತೆಗೆ (ಲಾಲ್‌ಬಾಗ್ ಜಂಕ್ಷನ್ ಕಡೆಗೆ) ಹಾಗೂ ಬಿಜೈ ಮಾರ್ಕೆಟ್ ಜಂಕ್ಷನ್ ಕಡೆಯಿಂದ ಕೆಎಸ್‌ಆರ್‌ಟಿಸಿ ಕಡೆಗೆ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
ಕುಂಟಿಕಾನ ಕಡೆಯಿಂದ ಬರುವ ವಾಹನಗಳು ಕೆಎಸ್ ಆರ್‌ಟಿಸಿ ಜಂಕ್ಷನ್ ಬಳಿ ಎಡಕ್ಕೆ ತಿರುಗಿ ಬಿಜೈ ಮಾರ್ಕೆಟ್ ಜಂಕ್ಷನ್ ಮೂಲಕ ಸಂಚರಿಸುವುದು. ಬಿಜೈ ಮಾರ್ಕೆಟ್ ಜಂಕ್ಷನ್ ಕಡೆಯಿಂದ ಎಂ.ಜಿ. ರಸ್ತೆಗೆ (ಲಾಲ್‌ಬಾಗ್ ಜಂಕ್ಷನ್ ಕಡೆಗೆ) ಬರುವ ವಾಹನಗಳು ಕೆಎಸ್‌ಆರ್‌ಟಿಸಿ ಜಂಕ್ಷನ್ ಬಳಿ “ಯು’ ತಿರುವು ಪಡೆದುಕೊಂಡು ಬಿಜೈ ಮಾರ್ಕೆಟ್ ಜಂಕ್ಷನ್ ಕಡೆಗೆ ಸಂಚರಿಸುವುದು.
ಪಶು ಆಸ್ಪತ್ರೆ ಜಂಕ್ಷನ್ (ಕಪುಚಿನ್‌ಚರ್ಚ್)ನಿಂದ ಕೋರಿರೊಟ್ಟಿ ಜಂಕ್ಷನ್ (ಎಂ.ಜಿ.ರಸ್ತೆ) ಕಡೆಗೆ ಸಾಗುವ ಎಲ್ಲ ವಾಹನ ಸಂಚಾರ ನಿಷೇಧಿಸಲಾಗಿದೆ.
ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬಂದು ಹೋಗುವ ಎಲ್ಲ ಕೆಎಸ್‌ಆರ್‌ಟಿಸಿ ಬಸ್ ಪೈಕಿ ಪಂಪ್‌ವೆಲ್ ಕಡೆಗೆ ಸಂಚರಿಸುವ ಬಸ್‌ಗಳು ಕೆಪಿಟಿ ಜಂಕ್ಷನ್ ಮೂಲಕ ಮತ್ತು ಉಡುಪಿ ಕಡೆಗೆ ಸಂಚರಿಸುವ ಬಸ್‌ಗಳು ಕುಂಟಿಕಾನ ಜಂಕ್ಷನ್ ಮೂಲಕ ಸಂಚರಿಸುವುದು.
ಮೆರವಣಿಗೆ ಹಾದು ಹೋಗುವ ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿ ಸಲಾಗಿದೆ. ಕುದ್ರೋಳಿ ನಾರಾಯಣಗುರು ಕಾಲೇಜು ಜಂಕ್ಷನ್ ರಸ್ತೆಯಿಂದ ಬರ್ಕೆ ಜಂಕ್ಷನ್ ತನಕ ಮತ್ತು ಬರ್ಕೆಜಂಕ್ಷನ್‌ನಿಂದ ದುರ್ಗಾಮಹಲ್ ಜಂಕ್ಷನ್ ವರೆಗೆ, ದುರ್ಗಾಮಹಲ್ ಜಂಕ್ಷನ್‌ನಿಂದ ಅಳಕೆ ಬ್ರಿಡ್ಜ್ ತನಕ ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆ ಇರುವುದಿಲ್ಲ.
ಮಣ್ಣಗುಡ್ಡೆ ಗುರ್ಜಿ ಜಂಕ್ಷನ್‌ನಿಂದ ಉರ್ವಮಾರ್ಕೆಟ್ ಜಂಕ್ಷನ್ ವರೆಗಿನ ರಸ್ತೆಯ ಇಕ್ಕೆಲಗಳಲ್ಲಿ, ಮಣ್ಣಗುಡ್ಡೆ ಗಾಂಧಿನಗರ ಪಾರ್ಕ್ ಮುಂಭಾಗದ ರಸ್ತೆ, ಗಾಂಧಿನಗರ 1ರಿಂದ 8ರ ವರೆಗಿನ ಅಡ್ಡ ರಸ್ತೆಗಳ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆ ಇಲ್ಲ.
ರಥಬೀದಿ ಶೋಭಾಯಾತ್ರೆ: ಸಂಚಾರ ಬದಲಾವಣೆ
ರಥಬೀದಿ ಶಾರದಾ ಮೂರ್ತಿಯ ಶೋಭಾಯಾತ್ರೆಯ ಹಿನ್ನೆಲೆಯಲ್ಲಿ ಅ. 6ರ ಸಂಜೆ 6 ಗಂಟೆಯಿಂದ ಅ. 7ರ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ.
ಬಾಲಾಜಿ ಜಂಕ್ಷನ್‌ನಿಂದ ರಥಬೀದಿ ವೆಂಕಟರಮಣ ದೇವಸ್ಥಾನದ ಕಡೆಗೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ವಾಹನಗಳು ಬಾಲಾಜಿ ಜಂಕ್ಷನ್‌ನಿಂದ ಲೋವರ್ ಕಾರ್‌ಸ್ಟ್ರೀಟ್‌ನಿಂದಾಗಿ ಅಜೀಜುದ್ದೀನ್ ರಸ್ತೆಯ ಮುಖಾಂತರ ಸಂಚರಿಸುವುದು. ಗಣಪತಿ ಹೈಸ್ಕೂಲ್ ರಸೆ ¤ಜಂಕ್ಷನ್ ಮುಖಾಂತರ ಕಾರ್‌ಸ್ಟ್ರೀಟ್ ಕಡೆಗೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ವಾಹನಗಳು ತಾರಾಕ್ಲಿನಿಕ್ ಮುಂದುಗಡೆಯಿಂದ ಶರವುದೇವಸ್ಥಾನದ ಎದುರಿನಿಂದಾಗಿ ಕೆ.ಎಸ್. ಆರ್. ರಸ್ತೆ ಮುಖೇನ ಸಂಚರಿಸುವುದು. ಕೇಂದ್ರ ಮಾರುಕಟ್ಟೆಯಿಂದ ಕಾರ್‌ಸ್ಟ್ರೀಟ್ ಕಡೆಗೆ ಬರುವ ವಾಹನಗಳ ಸಂಚಾರ ಹಾಗೂ ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ. ವಾಹನಗಳು ಕೇಂದ್ರ ಮಾರುಕಟ್ಟೆ ರಸ್ತೆಯಲ್ಲಿ ಸಂಚರಿಸಿ ಕ್ಲಾಕ್‌ಟವರ್ ಮುಖೇನ ಮುಂದುವರಿಯುವುದು, ಮೆರವಣಿಗೆ ಸಾಗುವ ರಸ್ತೆಯ ಇಕ್ಕೆಲಗಳಲ್ಲಿ ಎಲ್ಲ ತರಹದ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತರ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.