ವಿದ್ಯುತ್ ದರ ಏರಿಕೆ ವಿರೋಧಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
Team Udayavani, Apr 12, 2022, 12:33 PM IST
ಬಿಜೈ: ಕೊರೊನಾ ಸಂಕಷ್ಟದಿಂದ ಹೊರ ಬರಲಾಗದ ಜನರಿಗೆ ಪೆಟ್ರೋಲ್, ಡೀಸೆಲ್ ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ತತ್ತರಿಸುತ್ತಿರುವಾಗಲೇ ರಾಜ್ಯ ಸರಕಾರ ವಿದ್ಯುತ್ ಬೆಲೆ ಏರಿಕೆ ಮಾಡಿರುವುದು ಗಾಯದ ಮೇಲೆ ಉಪ್ಪು ಸುರಿದಂತಾಗಿದೆ ಎಂದು ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಜ್ ಆರೋಪಿಸಿದರು.
ಡಿವೈಎಫ್‌ಐ, ಎಸ್‌ಎಫ್‌ಐ ಮತ್ತು ಜೆಎಂಎಸ್ ಸಂಘಟನೆಗಳ ಜಂಟಿ ಸಹಭಾಗಿತ್ವದಲ್ಲಿ ವಿದ್ಯುತ್ ದರ ಏರಿಕೆ ವಿರೋಧಿಸಿ ನಗರದ ಬಿಜೈ ಬಳಿ ಇರುವ ಮೆಸ್ಕಾಂ ಕೇಂದ್ರ ಕಚೇರಿ ಎದುರು ಸೋಮವಾರ ನಡೆದ ಪ್ರತಿಭಟನ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದು ಹೋಗಿದೆ. ಜನಸಾಮಾನ್ಯರ ನೈಜ ಸಮಸ್ಯೆ ಗಳ ಪರಿಹಾರ ಮಾಡದೆ ಜಾತಿ, ಧರ್ಮದ ಹೆಸರಲ್ಲಿ ಗಲಾಟೆ ಮಾಡಲು ಪ್ರಚೋದನೆ ನೀಡಲಾಗುತ್ತಿದೆ ಎಂದರು.
ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ, ರಾಜ್ಯ ಸರಕಾರ ಪ್ರತಿ ಯುನಿಟಿಗೆ 0.50 ಪೈಸೆ ಯಷ್ಟು ದರ ಏರಿಸಿದೆ. ಮೆಸ್ಕಾಂ ಇಲಾಖೆ ಈ ಹಿಂದೆ ಫೆಬ್ರವರಿಯಲ್ಲಿ 2021-22 ಅವಧಿಯ ಆರ್ಥಿಕ ವರ್ಷದಲ್ಲಿ 943 ಕೋ.ರೂ. ಆದಾಯ ಕೊರತೆ ನೀಗಿಸಲು 1.67 ರೂ. ಸುಂಕವನ್ನು ಏರಿಕೆ ಮಾಡಿತ್ತು. ಈಗ ಮತ್ತೆ ರಾಜ್ಯದಲ್ಲಿ ಏರಿಕೆ ಮಾಡಲಾಗುತ್ತಿದೆ ಎಂದರು.
ಜನವಾದಿ ಮಹಿಳಾ ಸಂಘಟನೆ ಜಿಲ್ಲಾಧ್ಯಕ್ಷೆ ಭಾರತಿ ಬೋಳಾರ ಮಾತನಾ ಡಿದರು. ಡಿವೈಎಫ್‌ಐ ಮುಖಂಡರಾದ ಮನೋಜ್ ವಾಮಂಜೂರ್, ಸುನಿಲ್ ತೇವುಲ, ರಫೀಕ್ ಹರೇಕಳ, ರಜಾಕ್ ಮುಡಿಪು, ಹನೀಫ್ ಬೆಂಗ್ರೆ, ತಯ್ಯೋಬ್ ಬೆಂಗ್ರೆ, ಸಲೀಮ್ ಶಾಡೋ, ಜಗದೀಶ್ ಬಜಾಲ್, ಜಯಲಕ್ಷ್ಮೀ, ಅಸುಂತಾ ಡಿ’ಸೋಜಾ, ಪ್ರಮಿಳಾ ದೇವಾಡಿಗ, ವಿದ್ಯಾರ್ಥಿ ಮುಖಂಡರಾದ ವಿನತ್, ಮಾಧುರಿ ಮೊದಲಾದವರಿದ್ದರು. ನವೀನ್ ಕೊಂಚಾಡಿ ಸ್ವಾಗತಿಸಿ, ನಿರೂಪಿಸಿದರು. ನಿತಿನ್ ಕುತ್ತಾರ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.