ಕೆನರಾ ಕಾಲೇಜಿನಲ್ಲಿ ಮಳೆಕೊಯ್ಲು ಮಾಹಿತಿ ಕಾರ್ಯಾಗಾರ
'ಮನೆ ಮನೆಗೆ ಮಳೆಕೊಯ್ಲು' ಉದಯವಾಣಿ ಅಭಿಯಾನದ ಯಶಸ್ಸು
Team Udayavani, Aug 29, 2019, 5:00 AM IST
ನಗರದ ಕೆನರಾ ಪದವಿ ಕಾಲೇಜಿನಲ್ಲಿ ಮಳೆಕೊಯ್ಲು ಮಾಹಿತಿ ಕಾರ್ಯಾಗಾರ ಜರಗಿತು.
ಪದವಿ ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ಸೇರಿದಂತೆ ಸುಮಾರು 200ಕ್ಕೂ ಹೆಚ್ಚು ಮಂದಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರಾಜೇಂದ್ರ ಕಲ್ಬಾವಿ ಅವರು ಮಳೆಕೊಯ್ಲು ಕುರಿತು ಮಾಹಿತಿ ನೀಡಿ, ಮಳೆಕೊಯ್ಲು ಅಳವಡಿಕೆಯ ಆವಶ್ಯಕತೆ, ನೀರಿನ ಅಭಾವದಿಂದಾಗಿ ತಲೆದೋರುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಾತ್ಯಕ್ಷಿಕೆ ಸಹಿತ ಮಾಹಿತಿ ನೀಡಿದರು. ಪ್ರಾಂಶುಪಾಲೆ ಮಾಲಿನಿ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿಯ ಮನೆಗೆ ಮಳೆಕೊಯ್ಲು
ಮಂಗಳೂರಿನಲ್ಲಿ ವಾಸವಾಗಿರುವ ಉಡುಪಿ ಮೂಲದ ಗುರುಪ್ರಸಾದ್ ಭಕ್ತ ಅವರು ಉಡುಪಿಯಲ್ಲಿರುವ ತಮ್ಮ ಮನೆಯ ಬಾವಿಗೆ ಮಳೆಕೊಯ್ಲು ಅಳವಡಿಸಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಮಳೆಕೊಯ್ಲು ವ್ಯವಸ್ಥೆ ಮಾಡಿದ್ದು, ಬಾವಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿರುವುದನ್ನು ಗಮನಿಸಿದ್ದಾರೆ.
ಕಳೆದ 2-3 ವರ್ಷಗಳಿಂದ ಬೇಸಗೆಯಲ್ಲಿ ನೀರಿಗೆ ತೀವ್ರ ಸಮಸ್ಯೆ ಎದುರಾಗಿತ್ತು. ಇದರಿಂದಾಗಿ ಮಳೆಕೊಯ್ಲು ವ್ಯವಸ್ಥೆ ಮಾಡಿಕೊಳ್ಳಲು ಮುಂದಾಗಿದ್ದರೂ, ಮಾಹಿತಿ ಕೊರತೆಯಿಂದ ಸಾಧ್ಯವಾಗಿರಲಿಲ್ಲ. ಬಳಿಕ ‘ಉದಯವಾಣಿ’ಯಲ್ಲಿ ಮಳೆಕೊಯ್ಲು ಅಭಿಯಾನ ನೋಡಿ, ಉಡುಪಿ ಎಂಜಿಎಂ ಕಾಲೇಜು ಹಿಂಬದಿಯಲ್ಲಿರುವ ತಮ್ಮ ಮನೆಯ ಬಾವಿಗೆ ಮಳೆಕೊಯ್ಲು ವ್ಯವಸ್ಥೆ ಮಾಡಿಕೊಂಡಿದ್ದಾರೆ. ಮನೆಯ ಟೆರೇಸಿನ ನೀರನ್ನು ಬಾವಿಗೆ ಬೀಳುವಂತೆ ಮಾಡಿ ಫಿಲ್ಟರ್ ವ್ಯವಸ್ಥೆ ಮಾಡಲಾಗಿದೆ. ಇದರಿಂದ ನೀರು ವ್ಯಯವಾಗದೆ, ಎಲ್ಲ ನೀರು ಬಾವಿಗೆ ಸೇರುವಂತೆ ನೋಡಿಕೊಳ್ಳಲಾಗಿದೆ. ಒಟ್ಟು ಯೋಜನೆಗೆ 30,500 ರೂ. ಖರ್ಚಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
MUST WATCH
ಹೊಸ ಸೇರ್ಪಡೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.