ಪಣಂಬೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ, ಸುಲಿಗೆಕೋರನ ಬಂಧನ
Team Udayavani, Jun 18, 2023, 5:18 AM IST
ಪಣಂಬೂರು: ಬೈಕಂಪಾಡಿ ಬಳಿಯ ರೈಲ್ವೇ ಹಳಿಯಲ್ಲಿ ವ್ಯಕ್ತಿಯೋರ್ವರನ್ನು ಸುಲಿಗೆ ಮಾಡಿದ ಪ್ರಕರಣವನ್ನು ಪಣಂಬೂರು ಪೊಲೀಸರು ಕೆಲವೇ ಗಂಟೆಯಲ್ಲಿ ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಹಿರಿಯ ಪೊಲೀಸರ ಸೂಚನೆಯಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಜೂ. 16ರಂದು ಬೈಕಂಪಾಡಿ ರೈಲ್ವೇ ಹಳಿಯಲ್ಲಿ ಚಿನ್ನದ ಸರ ಮತ್ತು ಪೋನ್ ಸುಲಿಗೆ ಮಾಡಿದ್ದ ಸ್ಯಾಂಡ್ ಪಿಟ್ ಬೆಂಗ್ರೆ ನಿವಾಸಿ ನಿಹಾಲ್ ವೈ ಸುವರ್ಣ(19) ಹಾಗೂ ಅಪ್ರಾಪ್ತ ವಯಸ್ಸಿನ ಬಾಲಕನನ್ನು ಬಂಧಿಸಿ 35 ಸಾವಿರ ರೂ. ಮೌಲ್ಯದ 5.95 ಗ್ರಾಂ ಚಿನ್ನದ ಸರ, 10 ಸಾವಿರ ರೂ. ಮೌಲ್ಯದ ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ. ಪರಿಚಯದ ವ್ಯಕ್ತಿಯನ್ನೇ ಕರೆಸಿಕೊಂಡು ಕಣ್ಣಿಗೆ ಮೆಣಸಿನ ಪುಡಿ ಎರಚಿ ಈ ಕೃತ್ಯ ಎಸಗಿದ್ದರು ಎಂದು ತನಿಖೆಯ ವೇಳೆ ತಿಳಿದುಬಂದಿದೆ.
ಹಿರಿಯ ಪೊಲೀಸ್ ಅಧಿಕಾರಿಗಳ ನಿರ್ದೇಶನದಂತೆ, ಎಸಿಪಿ ಮನೋಜ್ ಕುಮಾರ್ ಮಾರ್ಗದರ್ಶನದಲ್ಲಿ ಪಣಂಬೂರು ಠಾಣಾ ಪೊಲೀಸ್ ನಿರೀಕ್ಷಕರಾದ ಸೋಮಶೇಖರ್ ಜೆ.ಸಿ. ಪೊಲೀಸ್ ಉಪ ನಿರೀಕ್ಷಕರಾದ ಕುಮಾರೇಶನ್ ಮತ್ತು ಜ್ಞಾನಶೇಖರ್ ಹಾಗೂ ಪಣಂಬೂರು ಪೊಲೀಸ್ ಠಾಣಾ ಸಿಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್ ಬಾವ
ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.