ರಾಷ್ಟ್ರೀಯ ಶಿಕ್ಷಣ ನೀತಿ -2020; 1ನೇ ತರಗತಿಯಿಂದ ಕೊಂಕಣಿ ಕಲಿಕೆಗೆ ಅವಕಾಶಕ್ಕೆ ಮನವಿ
Team Udayavani, Aug 4, 2020, 8:11 AM IST
ಸಾಂದರ್ಭಿಕ ಚಿತ್ರ
ಮಂಗಳೂರು: “ರಾಷ್ಟ್ರೀಯ ಶಿಕ್ಷಣ ನೀತಿ- 2020’ಕ್ಕೆ ಅನುಗುಣವಾಗಿ ಕೊಂಕಣಿಗರಿಗೆ ಒಂದನೇ ತರಗತಿಯಿಂದಲೇ ಮಾತೃಭಾಷೆ ಕಲಿಯಲು ಅನುವು ಮಾಡಿಕೊಡುವಂತೆ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲು ವಿಶ್ವ ಕೊಂಕಣಿ ಕೇಂದ್ರ ನಿರ್ಧರಿಸಿದೆ.
ಈ ಬಗ್ಗೆ ನಗರದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ಬಸ್ತಿ ವಾಮನ ಶೆಣೈ ಅವರು ಮಾತನಾಡಿ, ರಾಜ್ಯದಲ್ಲಿ ಅಲ್ಪಸಂಖ್ಯಾಕ ಭಾಷೆಯಾಗಿರುವ ಕೊಂಕಣಿಯನ್ನು ಶಾಲೆಗಳಲ್ಲಿ ತೃತೀಯ ಐಚ್ಛಿಕ ಭಾಷೆ ಯಾಗಿ ಕಲಿಸಲು ರಾಜ್ಯ ಸರಕಾರ ಈಗಾಗಲೇ ಅನುಮತಿ ನೀಡಿದೆ. ಹಾಗಾಗಿ ಹೊಸ ಶಿಕ್ಷಣ ನೀತಿಯಲ್ಲಿ 1ರಿಂದ ಕೊಂಕಣಿ ಕಲಿಯಲು ಅವಕಾಶ ಮಾಡಿಕೊಡಬೇಕು ಎಂದರು.
ವಿಶ್ವ ಕೊಂಕಣಿ ಕೇಂದ್ರದ ಕೊಂಕಣಿ ಶಿಕ್ಷಣ ವಿಭಾಗದ ಸಂಯೋಜಕ, ರಾಜ್ಯ ಸರಕಾರದ ಕೊಂಕಣಿ ಪಠ್ಯಪುಸ್ತಕಗಳ ಸಮಿತಿಯ ಅಧ್ಯಕ್ಷ ಪ್ರೊ| ಡಾ| ಕಸ್ತೂರಿ ಮೋಹನ ಪೈ ಅವರು ನೂತನ ನೀತಿಯ ಸ್ವರೂಪ ಹಾಗೂ ನಡೆಯಲಿರುವ ಬದಲಾವಣೆಗಳ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.